ರಾಯಚೂರು: ಕಲುಷಿತ ನೀರು ಕುಡಿದು ಸರಣಿ ಸಾವು ಪ್ರಕರಣ: 7ಕ್ಕೇರಿದ ಮೃತರ ಸಂಖ್ಯೆ

ವಾಂತಿ, ಭೇದಿ, ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ, ಮೇ 29ರಂದು ಖಾಸಗಿ ಆಸ್ಪತ್ರೆಯಲ್ಲಿ ಶಮೀಮ್ ಬೇಗಂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ತಡವಾಗಿ ಬೆಳಕಿಗೆ ಬಂದಿದೆ. 

ರಾಯಚೂರು: ಕಲುಷಿತ ನೀರು ಕುಡಿದು ಸರಣಿ ಸಾವು ಪ್ರಕರಣ: 7ಕ್ಕೇರಿದ ಮೃತರ ಸಂಖ್ಯೆ
ಕಲುಷಿತ ನೀರು
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jun 16, 2022 | 11:32 AM

ರಾಯಚೂರು: ಕಲುಷಿತ ನೀರು (contaminated water) ಕುಡಿದು ಸರಣಿ ಸಾವು ಪ್ರಕರಣ ಹಿನ್ನೆಲೆ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಮಚ್ಚಿಬಜಾರ್ ನಿವಾಸಿ ಶಮೀಮ್ ಬೇಗಂ(48) ಮೃತ ಮಹಿಳೆ. ವಾಂತಿ, ಭೇದಿ, ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ, ಮೇ 29ರಂದು ಖಾಸಗಿ ಆಸ್ಪತ್ರೆಯಲ್ಲಿ ಶಮೀಮ್ ಬೇಗಂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಏನಿದು ಕಲುಷಿತ ನೀರಿನ ಘಟನೆ?

ಮೇ 31ರಂದು ರಾಯಚೂರಿನ ಇಂದಿರಾ ನಗರದ ನಿವಾಸಿಗಳು ಕಲುಷಿತ ನೀರು ಕುಡಿದು ಓರ್ವ ಮಹಿಳೆ ಸಾವನ್ನಪ್ಪಿದ್ದು,  60ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡು ಜಿಲ್ಲೆಯ ರಿಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದರು. ಇಂದಿರಾನಗರದ ಮಲ್ಲಮ್ಮ (40) ಮೊದಲು ಸಾವನ್ನಪ್ಪಿದ್ದರು. ಕುಡಿಯುವ ನೀರಿಗೆ ಕೆಲವಡೆ ಚರಂಡಿ ನೀರು ಸೇರುತ್ತಿರುವ ಆರೋಪ ಕೇಳಿ ಬರುತ್ತಿದೆ. ಹೀಗಾಗಿ ರಾಯಚೂರು ನಗರದ ಜನತೆ ಆತಂಕ ಹೆಚ್ಚಾಗಿದೆ. ಆಸ್ಪತ್ರೆಗೆ ದಾಖಲಾದವರಲ್ಲಿ ವಾಂತಿ, ಬೇದಿಯಿಂದ ಬಳಲುತ್ತಿದ್ದಾರೆ. ಅಲ್ಲದೆ 20ಕ್ಕೂ ಹೆಚ್ಚಿನ ಪರಿಸ್ಥಿತಿ ಬಿಗಡಾಯಿಸಿದೆ. ಅವರಲ್ಲಿ ಮೂತ್ರಪಿಂಡ ಸಮಸ್ಯೆ ಎದುರಿಸುತ್ತಿರುವ ಹಲವರಿಗೆ ಡಯಾಲಿಸಿಸ್ ಮಾಡಬೇಕಿದೆ. ಕಲುಷಿತ ನೀರು ಕುಡಿದು ಚಿಕ್ಕಮಕ್ಕಳು ಹೆಚ್ಚಾಗಿ ಬಾದಿತರಾಗುತ್ತಿದ್ದಾರೆ. ಈ ಪ್ರಕರಣದಿಂದ ಈಗಾಗಲೆ ನಾಲ್ಕು ಜನರು ಸಾವನ್ನಪ್ಪಿದ್ದು (ಜೂನ್ 8) ರಂದು ​ಅಂದ್ರೂನ್ ಖಿಲ್ಲಾ ನಿವಾಸಿ ಅಬ್ದುಲ್ ಕರೀಂ(50) ಸಾವನ್ನಪ್ಪಿದ್ದರು. ಇಂದು ಮತ್ತೆ 48 ವರ್ಷದ ವರ್ಷದ  ಸಾವನ್ನಪ್ಪಿದ್ದಾರೆ. ಒಟ್ಟು ಕಲುಷಿತ ನೀರಿಗೆ ಐದು ಜನರು ಸಾವನ್ನಪ್ಪಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಈ ಬಗ್ಗೆ ಮಾತನಾಡಿರುವ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಅರ್ಚನಾ, ನೀರಿನ ಶುದ್ದೀಕರಣ ಹಾಗು ಸರಬರಾಜು ಮಾಡುವಲ್ಲಿ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ. ಇಬ್ಬರು ಅಧಿಕಾರಿಗಳ ಮೇಲೆ ಕ್ರಮವಾಗಿದೆ. ಉಳಿದವರ ತಪ್ಪಿನ ಬಗ್ಗೆ ಪರಿಶೀಲನೆ ನಡೆದಿದೆ. ಶುದ್ದೀಕರಣ ಘಟಕದಲ್ಲಿನ ಪ್ರಯೋಗಾಲಯ ಎರಡು ತಿಂಗಳಿಂದ ಕಾರ್ಯನಿರ್ವಹಿಸಿಲ್ಲ, ಸಿಬ್ಬಂದಿಯೂ ಇಲ್ಲ. ನೀರು ಶುದ್ದೀಕರಣಕ್ಕೆ ಬೇಕಾದ ಅಗತ್ಯ ರಾಸಾಯನಿಕಗಳನ್ನ ಸಂಗ್ರಹಿಸಿಟ್ಟಿಲ್ಲ. ನಗರದಲ್ಲಿ ನೀರು ಸರಬರಾಜು ಮಾಡುವ ಪೈಪ್ ಲೈನ್ ಬದಲಾಯಿಸುತ್ತಿದ್ದಾರೆ. ಘಟಕದ ಜೊತೆ ಪೈಪ್ ಲೈನ್ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದ್ದೇವೆ. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವ ಬಗ್ಗೆ ಸದ್ಯ ಪ್ರಸ್ತಾಪವಿಲ್ಲ. ಜಿಲ್ಲಾಧಿಕಾರಿ ಜೊತೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುತ್ತದೆ. ನೀರಿನ ಶುದ್ದೀಕರಣ ಹಾಗೂ ಸರಬರಾಜು ವ್ಯವಸ್ಥೆಯ ಲೋಪಗಳನ್ನ ಪರಿಶೀಲಿಸುತ್ತಿದ್ದೇವೆ. ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ನಗರಸಭೆಗೆ ಸೂಚನೆ ನೀಡುತ್ತಿದ್ದೇವೆ ಎಂದು ಅರ್ಚನಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಆರ್ಥಿಕ ಹೊರೆ; ಚಹಾ ಸೇವನೆ ಕಡಿಮೆ ಮಾಡುವಂತೆ ನಾಗರಿಕರಿಗೆ ಒತ್ತಾಯಿಸಿದ ಪಾಕ್ ಸಚಿವ

ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ