AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವದುರ್ಗದಲ್ಲಿ ಕಲುಷಿತ ನೀರು ಸೇವಿಸಿ ಬಾಲಕ ಸಾವು: ತುರ್ತು ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ರಾಯಚೂರು ಜಿಲ್ಲೆಯ ರೇಕಲಮರಡಿ ಮತ್ತು ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿರುವವರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ತುರ್ತು ಕ್ರಮಕ್ಕೆ ಸೂಚನೆ ನೀಡಿದ್ದಾರೆ.

ದೇವದುರ್ಗದಲ್ಲಿ ಕಲುಷಿತ ನೀರು ಸೇವಿಸಿ ಬಾಲಕ ಸಾವು: ತುರ್ತು ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ
ಸಿಎಂ ಸಿದ್ದರಾಮಯ್ಯ
ಆಯೇಷಾ ಬಾನು
| Edited By: |

Updated on: May 28, 2023 | 2:38 PM

Share

ರಾಯಚೂರು: ಬಿಸಿಲುನಾಡು ಅಂತ ಕರೆಸಿಕೊಳ್ಳುವ ರಾಯಚೂರು(Raichur) ಜಿಲ್ಲೆಯ ದೇವದುರ್ಗ ತಾಲೂಕಿನ  ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಓರ್ವ ಬಾಲಕ ಸಾವನ್ನಪ್ಪಿರುವ ಪ್ರಕರಣದ ಮಾಹಿತಿ ದೊರೆಯುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರು ರಾಯಚೂರು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿಗೆ ದೂರವಾಣಿ ಕರೆ ತರಾಟೆಗೆ ತೆಗೆದುಕೊಂಡಿದ್ದಾರೆ. ಘಟನೆ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ರಾಯಚೂರಿನ ರೇಕಲಮರಡಿ ಬಳಿಕ ಮತ್ತೊಂದು ಗ್ರಾಮದಲ್ಲಿ ಕಲುಷಿತ ನೀರು ಕುಡಿದು‌ 20ಕ್ಕೂ ಹೆಚ್ಚು ಜನ ಅಸ್ವಸ್ಥ

ತಕ್ಷಣ ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಬೇಕು. ಲ್ಯಾಬ್​ಗೆ ನೀರಿನ ಸ್ಯಾಂಪಲ್ ಕಳುಹಿಸಿ ತಕ್ಷಣ ವರದಿ ಪಡೆಯಬೇಕು. ವರದಿ ಆಧಾರದಲ್ಲಿ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಚಿಕಿತ್ಸೆಗೆ ಕ್ರಮಕೈಗೊಳ್ಳಿ. ಮತ್ತೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು. ಅಲ್ಲದೇ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಕಲುಷಿತ ನೀರು ಕುಡಿದು ಅಸ್ವಸ್ಥರಾಗಿರುವವರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು. ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಸಿಇಒಗೆ ಸೂಚನೆ ನೀಡಿದರು.

ಸಿಎಂ ಸಿದ್ದರಾಮಯ್ಯನವರು ಕೊಟ್ಟ ಸಲಹೆಗಳು

  • ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಬೇಕು
  • ನೀರಿನ ಸ್ಯಾಂಪಲ್ ಗಳನ್ನು ಲ್ಯಾಬ್ ಗೆ ಕಳುಹಿಸಿ ತಕ್ಷಣ ವರದಿ ತರಿಸಿಕೊಳ್ಳಬೇಕು.
  • ವರದಿ ಆಧಾರದಲ್ಲಿ ಗ್ರಾಮಸ್ಥರ ಕೂಲಂಕುಷ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಚಿಕಿತ್ಸೆಗೆ ಕ್ರಮ ವಹಿಸಬೇಕು.
  • ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿ, ವಿಷಪೂರಿತ ನೀರಿನ ಮೂಲಗಳನ್ನು ಬಂದ್ ಮಾಡಬೇಕು.
  • ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು.
  • ಎಲ್ಲ ಕ್ರಮಗಳನ್ನೂ ಸಮರ್ಪಕವಾಗಿ ತೆಗೆದುಕೊಂಡು ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು.

ರಾಯಚೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ