ರಾಯಚೂರು: ಬಿಸಿಲುನಾಡು ಅಂತ ಕರೆಸಿಕೊಳ್ಳುವ ರಾಯಚೂರು(Raichur) ಜಿಲ್ಲೆಯ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಓರ್ವ ಬಾಲಕ ಸಾವನ್ನಪ್ಪಿರುವ ಪ್ರಕರಣದ ಮಾಹಿತಿ ದೊರೆಯುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರು ರಾಯಚೂರು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿಗೆ ದೂರವಾಣಿ ಕರೆ ತರಾಟೆಗೆ ತೆಗೆದುಕೊಂಡಿದ್ದಾರೆ. ಘಟನೆ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ರಾಯಚೂರಿನ ರೇಕಲಮರಡಿ ಬಳಿಕ ಮತ್ತೊಂದು ಗ್ರಾಮದಲ್ಲಿ ಕಲುಷಿತ ನೀರು ಕುಡಿದು 20ಕ್ಕೂ ಹೆಚ್ಚು ಜನ ಅಸ್ವಸ್ಥ
ತಕ್ಷಣ ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಬೇಕು. ಲ್ಯಾಬ್ಗೆ ನೀರಿನ ಸ್ಯಾಂಪಲ್ ಕಳುಹಿಸಿ ತಕ್ಷಣ ವರದಿ ಪಡೆಯಬೇಕು. ವರದಿ ಆಧಾರದಲ್ಲಿ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಚಿಕಿತ್ಸೆಗೆ ಕ್ರಮಕೈಗೊಳ್ಳಿ. ಮತ್ತೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು. ಅಲ್ಲದೇ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಕಲುಷಿತ ನೀರು ಕುಡಿದು ಅಸ್ವಸ್ಥರಾಗಿರುವವರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು. ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಸಿಇಒಗೆ ಸೂಚನೆ ನೀಡಿದರು.
ರಾಯಚೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ