AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಟ್ಟಿ ಚಿನ್ನದ ಗಣಿ ಕಂಪನಿ ವಿರುದ್ಧ ಸಿಡಿದೆದ್ದ ರೈತರು; ಅನಿರ್ದಿಷ್ಟಾವಧಿ ಹೋರಾಟಕ್ಕೆ ಕರೆ!

ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಕಂಪನಿಯು 390 ಎಕರೆ ಜಮೀನಿಗೆ ಪರಿಹಾರ ನೀಡದೇ ರೈತರ ಗಮನಕ್ಕೆ ತರದೆ ಇಸಿ ದಾಖಲೆಗಳಲ್ಲಿ ಕಂಪನಿ ಹೆಸರು ನಮೂದಿಸಿದೆ ಎಂದು ರೈತರು ಆರೋಪಿಸಿದ್ದಾರೆ. ಇದರಿಂದ ಸಾಲ ಸೌಲಭ್ಯ ಹಾಗೂ ಬೆಳೆ ಪರಿಹಾರ ಸಿಗದೆ ತೊಂದರೆಗೊಳಗಾಗಿರುವ ಸಂತ್ರಸ್ತ ರೈತರು ಜಮೀನಿನ ದಾಖಲೆ ಸರಿಪಡಿಸುವಂತೆ ಆಗ್ರಹಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿದ್ದಾರೆ.

ಹಟ್ಟಿ ಚಿನ್ನದ ಗಣಿ ಕಂಪನಿ ವಿರುದ್ಧ ಸಿಡಿದೆದ್ದ ರೈತರು; ಅನಿರ್ದಿಷ್ಟಾವಧಿ ಹೋರಾಟಕ್ಕೆ ಕರೆ!
ಹಟ್ಟಿ ಚಿನ್ನದ ಗಣಿ ಕಂಪನಿ ವಿರುದ್ಧ ಸಿಡಿದೆದ್ದ ರೈತರು
ಭೀಮೇಶ್​​ ಪೂಜಾರ್
| Edited By: |

Updated on:Jul 31, 2026 | 12:31 PM

Share

ಮುಖ್ಯಾಂಶಗಳು

  • ಹಟ್ಟಿ ಚಿನ್ನದ ಗಣಿ ಕಂಪನಿಯ ವಂಚನೆ ವಿರುದ್ಧ ತೀವ್ರವಾಗಿ ಸಿಡಿದೆದ್ದ ರಾಯಚೂರಿನ ರೈತರು.
  • ಪರಿಹಾರವನ್ನು ನೀಡದೇ ಬರೋಬ್ಬರಿ 390 ಎಕರೆ ಭೂಮಿಯ ದಾಖಲೆಯಲ್ಲಿ ಕಂಪನಿಯ ಹೆಸರು ನಮೂದು.
  • ದಾಖಲೆಗಳನ್ನು ತಕ್ಷಣ ಸರಿಪಡಿಸುವಂತೆ ಆಗ್ರಹಿಸಿ ಸಂತ್ರಸ್ತ ರೈತರಿಂದ ಅನಿರ್ದಿಷ್ಟಾವಧಿ ಬೃಹತ್ ಪ್ರತಿಭಟನೆ ಆರಂಭ.

ರಾಯಚೂರು, ಜುಲೈ 31: ದೇಶಕ್ಕೆ ಪ್ರಸಿದ್ಧ ಚಿನ್ನವನ್ನು ನೀಡುವ ಹಟ್ಟಿ ಚಿನ್ನದ ಗಣಿ ಕಂಪನಿಯ (HGML) ವಿರುದ್ಧವೇ ರಾಯಚೂರು ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಮ್ಮ ಭೂ ಹಕ್ಕಿಗಾಗಿ ಬೀದಿಗಿಳಿದು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ. ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಗಣಿ ಕಂಪನಿಯ ಮುಖ್ಯ ದ್ವಾರದ ಎದುರು ‘ಹಟ್ಟಿ ಭೂ ಹಕ್ಕು ವಂಚಿತ ರೈತ ಹೋರಾಟ ಸಮಿತಿ’ ನೇತೃತ್ವದಲ್ಲಿ ಬೃಹತ್ ಹೋರಾಟ ನಡೆಯುತ್ತಿದೆ.

ವಂಚನೆ ಆರೋಪ ಮತ್ತು ರೈತರ ಸಂಕಷ್ಟ

ಗಣಿ ಅಭಿವೃದ್ಧಿ ಹೆಸರಿನಲ್ಲಿ ಹಟ್ಟಿ-ಕೋಠಾ ಸೀಮಾಂತರದ ಒಟ್ಟು 1,305 ಎಕರೆ ಜಮೀನನ್ನು ಗುತ್ತಿಗೆ ಪಡೆಯಲಾಗಿತ್ತು. ಈ ಪೈಕಿ 915 ಎಕರೆ ಭೂಮಿಯನ್ನು ಮಾತ್ರ ಭೂಸ್ವಾಧೀನಪಡಿಸಿಕೊಂಡು ರೈತರಿಗೆ ಸೂಕ್ತ ಪರಿಹಾರ ಹಾಗೂ ಉದ್ಯೋಗ ನೀಡಲಾಗಿದೆ. ಇನ್ನುಳಿದ 390 ಎಕರೆ ಜಮೀನನ್ನು ಕಂಪನಿಯು ಸ್ವಾಧೀನಪಡಿಸಿಕೊಳ್ಳದೇ, ರೈತರ ಗಮನಕ್ಕೂ ತರದೆ ಅವರ ಜಮೀನಿನ ಋಣಭಾರ ಪ್ರಮಾಣಪತ್ರದ (EC) ದಾಖಲೆಗಳಲ್ಲಿ ‘ಹಟ್ಟಿ ಚಿನ್ನದ ಗಣಿ’ ಹೆಸರು ನಮೂದಿಸಿಕೊಂಡಿದೆ.

ಸಾಲವೂ ಇಲ್ಲ, ಪರಿಹಾರವೂ ಇಲ್ಲ!

ದಶಕಗಳಿಂದ ಜಮೀನಿನ ಹಕ್ಕು ದಾಖಲೆಗಳಲ್ಲಿ ಗಣಿ ಕಂಪನಿಯ ಹೆಸರು ಇರುವುದರಿಂದ, ರೈತರಿಗೆ ಬ್ಯಾಂಕುಗಳಲ್ಲಿ ಬೆಳೆ ಸಾಲವಾಗಲಿ ಅಥವಾ ಇತರ ಯಾವುದೇ ಸಾಲ ಸೌಲಭ್ಯಗಳಾಗಲಿ ಸಿಗುತ್ತಿಲ್ಲ. ಜಮೀನನ್ನು ಮಾರಾಟ ಮಾಡಲು ಸಾಧ್ಯವಾಗದೆ, ಇತ್ತ ಸರ್ಕಾರದಿಂದ ಸಿಗುವ ಬೆಳೆ ಪರಿಹಾರವೂ ಲಭಿಸದೆ ರೈತರು ಸಂಪೂರ್ಣ ಅತಂತ್ರರಾಗಿದ್ದಾರೆ.

18 ವರ್ಷಗಳಿಂದ ಈ ಸಮಸ್ಯೆಗೆ ಪರಿಹಾರ ಸಿಗದ ಹಿನ್ನೆಲೆಯಲ್ಲಿ, ರೈತರು ತೀವ್ರ ಆಕ್ರೋಶಗೊಂಡಿದ್ದು, ತಕ್ಷಣವೇ ನಮ್ಮ ಜಮೀನಿನ ದಾಖಲೆಗಳಿಂದ ಹಟ್ಟಿ ಕಂಪನಿಯ ಹೆಸರನ್ನು ತೆಗೆದುಹಾಕಬೇಕು ಅಥವಾ ಸಂಪೂರ್ಣ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಪರಿಹಾರ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಬೇಡಿಕೆ ಈಡೇರುವವರೆಗೂ ಹೋರಾಟ ಹಿಂಪಡೆಯುವುದಿಲ್ಲ ಎಂದು ರೈತರು ಎಚ್ಚರಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:32 am, Fri, 31 July 26

Follow Us
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್