ರಾಯಚೂರು: ಹಟ್ಟಿ ಚಿನ್ನದ ಗಣಿಯಲ್ಲಿ ಮಣ್ಣು ಕುಸಿದು ಕಾರ್ಮಿಕ ಸಾವು

ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಹಟ್ಟಿ ಚಿನ್ನದ ಗಣಿಯ ಅಂಡರ್​ಗ್ರೌಂಡ್​ನಲ್ಲಿ ಮಣ್ಣು ಕುಸಿದು ದುರಂತ ಸಂಭವಿಸಿದೆ. ಒಬ್ಬ ಕಾರ್ಮಿಕ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುವಾರ ತಡರಾತ್ರಿ ಘಟನೆ ಸಂಭವಿಸಿದೆ.

ರಾಯಚೂರು: ಹಟ್ಟಿ ಚಿನ್ನದ ಗಣಿಯಲ್ಲಿ ಮಣ್ಣು ಕುಸಿದು ಕಾರ್ಮಿಕ ಸಾವು
ರಾಯಚೂರು: ಹಟ್ಟಿ ಚಿನ್ನದ ಗಣಿಯಲ್ಲಿ ಮಣ್ಣು ಕುಸಿದು ಕಾರ್ಮಿಕ ಸಾವು
Follow us
ಭೀಮೇಶ್​​ ಪೂಜಾರ್
| Updated By: Ganapathi Sharma

Updated on:Jul 12, 2024 | 11:07 AM

ರಾಯಚೂರು, ಜುಲೈ 12: ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದ ಚಿನ್ನದ ಗಣಿಯಲ್ಲಿ ಗುರುವಾರ ತಡರಾತ್ರಿ ಮಣ್ಣು ಕುಸಿದ ಪರಿಣಾಮ ಕಾರ್ಮಿಕ ಮೃತಪಟ್ಟಿದ್ದಾರೆ. ಕೆಲಸ ಮಾಡುತ್ತಿದ್ದಾಗ ಏಕಾಏಕಿ ಮಣ್ಣು ಕುಸಿದು ಕಾರ್ಮಿಕ ಮೌನೇಶ್ (48) ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ ಮೂವರು ಕಾರ್ಮಿಕರು ಗಾಯಗೊಂಡಿದ್ದು, ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಾರ್ಮಿಕರು ಚಿನ್ನದ ಗಣಿಯ ಲಾಸ್ಟ್​ ಲೆವೆಲ್​ನಲ್ಲಿ ಕೆಲಸ ಮಾಡುತ್ತಿದ್ದರು.

ಹಟ್ಟಿ ಚಿನ್ನದ ಗಣಿಯ ಅಂಡರ್​ಗ್ರೌಂಡ್​ನಲ್ಲಿ ಮಣ್ಣು ಕುಸಿದು ದುರಂತ ಸಂಭವಿಸಿದೆ. ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಸಂಭವಿಸಿದೆ.

ಕೆಎಸ್​ಆರ್​ಟಿಸಿ ಬಸ್ ಅಪಘಾತ: ಚಾಲಕ ಸಾವು

ನಿಯಂತ್ರಣ ತಪ್ಪಿ ಕೆಎಸ್​ಆರ್​ಟಿಸಿ ಸ್ಲೀಪರ್​​ ಕೋಚ್ ಬಸ್​​ ಡಿವೈಡರ್​ಗೆ ಡಿಕ್ಕಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದಲ್ಲಿ ನಡೆದಿದೆ. ಘಟನೆಯಲ್ಲಿ 9 ಪ್ರಯಾಣಿಕರಿಗೆ ಗಾಯಗಳಾಗಿವೆ. ಬಸ್ ಚಾಲಕ ಕಂ ನಿರ್ವಾಹಕ ರಾಚಪ್ಪ (51) ಮೃತ ದುರ್ದೈವಿಯಾಗಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ: ಕನ್ನಡ ಕೋಟ್ಯಧಿಪತಿಯಲ್ಲಿ 50 ಲಕ್ಷ ರೂ. ಗೆದ್ದಿದ್ದ ಪಂಪಣ್ಣ ಹಿನ್ನೆಲೆಯೇ ರೋಚಕ!

ಸ್ಲೀಪರ್ ಕೋಚ್ ಬಸ್ ಹುಬ್ಬಳ್ಳಿಯಿಂದ ರಾಯಚೂರಿಗೆ ಬರುತ್ತಿದ್ದಾಗ ಅವಘಡ ಸಂಭವಿಸಿದೆ. ಗಾಯಾಳುಗಳಿಗೆ ಸಿಂಧನೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:27 am, Fri, 12 July 24