ರಾಯಚೂರು ಟಿಪ್ಪು ಸುಲ್ತಾನ್​ ಭಾವಚಿತ್ರಕ್ಕೆ ಅಪಮಾನ ಪ್ರಕರಣ: ಆರೋಪಿ ಅರೆಸ್ಟ್​​​

ಜನವರಿ 31 ರಂದು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸಿರಿವಾರ ಪಟ್ಟಣದ ಮಟನ್​ ಮಾರ್ಕೆಟ್​ ಬಳಿ ಇರುವ ಟಿಪ್ಪು ಸರ್ಕಲ್​ನಲ್ಲಿ ಅಳವಡಿಸಲಾಗಿರವ ಟಿಪ್ಪು ಸುಲ್ತಾನ್​ ಭಾವಚಿತ್ರಕ್ಕೆ ಕಿಡಿಗೇಡಿಗಳು ಅಪಮಾನ ಮಾಡಿದ್ದರು. ಈ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ರಾಯಚೂರು ಟಿಪ್ಪು ಸುಲ್ತಾನ್​ ಭಾವಚಿತ್ರಕ್ಕೆ ಅಪಮಾನ ಪ್ರಕರಣ: ಆರೋಪಿ ಅರೆಸ್ಟ್​​​
ಸಿರಿವಾರ ಪೊಲೀಸ್​ ಠಾಣೆ
Follow us
ಭೀಮೇಶ್​​ ಪೂಜಾರ್
| Updated By: ವಿವೇಕ ಬಿರಾದಾರ

Updated on:Feb 02, 2024 | 7:54 AM

ರಾಯಚೂರು, ಫೆಬ್ರವರಿ 02: ಮಂಡ್ಯ (Mandya) ತಾಲೂಕಿನ ಕೆರೆಗೋಡು ಗ್ರಾಮದಲ್ಲಿ ಸರ್ಕಾರಿ ಜಾಗದಲ್ಲಿ ಹಾರಿಸಲಾಗಿದ್ದ ಹನುಮ ಧ್ವಜವನ್ನು (Hanuman Flag) ತೆರವುಗೊಳಿಸಲಾಗಿತ್ತು. ಈ ಬೆನ್ನಲ್ಲೆ ನಾಡಿನ ವಿವಿಧ ಜಿಲ್ಲೆಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಹಾರಿಸಲಾಗಿರುವ ಧಾರ್ಮಿಕ ಧ್ವಜಗಳನ್ನು ತೆರವುಗೊಳಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಜೋರಾಗಿದೆ. ಹೀಗಾಗಿ ರಾಜ್ಯದಲ್ಲಿ ಕೋಮು ಸೌಹಾರ್ದ ಚರ್ಚೆ ಜೋರಾಗಿದೆ. ಇದರ ಮಧ್ಯೆ ರಾಯಚೂರು (Raichuru) ಜಿಲ್ಲೆಯ ಸಿರಿವಾರ ಪಟ್ಟಣದಲ್ಲಿ ಕಿಡಿಗೇಡಿಗಳು ಟಿಪ್ಪು ಸುಲ್ತಾನ್​ (Tipu Sultan) ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ್ದರು. ಈ ಪ್ರಕರಣ ಸಂವಂಧ ಸಿರವಾರ ಪಟ್ಟಣ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.ಮಾನ್ವಿ ತಾಲೂಕಿನ ಸಿರವಾರ ಪಟ್ಟಣದ ನಿವಾಸಿ ಆಕಾಶ್ (23) ಬಂಧಿತ ಆರೋಪಿ.

ಜನವರಿ 31ರಂದು ಮಾನ್ವಿ ತಾಲೂಕಿನ ಸಿರವಾರ ಪಟ್ಟಣದ ಮಟನ್ ಮಾರ್ಕೆಟ್ ಬಳಿ ಇರುವ ಟಿಪ್ಪು ಸರ್ಕಲ್‌ನಲ್ಲಿ ಹಾಕಲಾಗಿರುವ ಟಿಪ್ಪು ಸುಲ್ತಾನ್​ ಭಾವಚಿತ್ರಕ್ಕೆ ಕಿಡಿಗೇಡಿಗಳು ರಾತ್ರೋರಾತ್ರಿ ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿದ್ದರು. ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡ ಮುಸ್ಲಿಮರು ತೀವ್ರ ಆಕ್ರೋಶ ಹೊರ ಹಾಕಿದ್ದರು. ಅಲ್ಲದೆ ರಾಜ್ಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆ ವೇಳೆ ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು 24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸುವುದಾಗಿ ಭರವಸೆ ನೀಡಿದ್ದರು. ಸಿರವಾರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗಾಗಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ನಿಖಿಲ್ ಎರಡು ವಿಶೇಷ ತಂಡ ರಚಿಸಿದ್ದರು. ಪೊಲೀಸರು ಸ್ಥಳೀಯ ಸಿಸಿ ಟಿವಿ ಫೂಟೇಜ್‌ಗಳ ಪರಿಶೀಲನೆ ನಡೆಸಿದ್ದರು.

ಇದನ್ನೂ ಓದಿ: ಬೆಂಗಳೂರಿನ ಮತ್ತೊಂದು ಕಡೆ ಹಸಿರು ಧ್ವಜ ಹಾರಾಟ, ಟ್ವೀಟ್ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ

ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಶಂಕಿತರನ್ನು ವಶಕ್ಕೆ ಪಡೆದರು. ಮೂವರು ಶಂಕಿತರನ್ನು ವಿಚಾರಣೆ ನಡೆಸಿದಾಗ ಆರೋಪಿ ಆಕಾಶ್ ತಪ್ಪೊಪ್ಪಿಕೊಂಡಿದ್ದಾನೆ. ಇದೀಗ ಪೊಲೀಸರು ಆಕಾಶ್​ನ ಹಿನ್ನೆಲೆ, ಕೃತ್ಯ ಎಸಗಿದ್ದರ ಉದ್ದೇಶದ ಬಗ್ಗೆ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಅರ್ಧ ಚಂದ್ರ, ನಕ್ಷತ್ರದ ಚಿಹ್ನೆ ತೆರವುಗೊಳಿಸುವಂತೆ ಆಗ್ರಹ

ರಾಜ್ಯದಲ್ಲಿ ಧ್ವಜ ದಂಗಲ್​ ಜೋರಾಗಿದೆ, ಮಂಡ್ಯದಿಂದ ಶುರವಾದ ದಂಗಲ್​ ಚಿನ್ನದ ನಾಡು ಕೋಲಾರಕ್ಕೆ ಕಾಲಿಟ್ಟಿದೆ. ಕೋಲಾರ ನಗರದ ಕ್ಲಾಕ್ ಟವರ್ ಮೇಲೆ ಇರುವ ಅರ್ಧ ಚಂದ್ರ, ನಕ್ಷತ್ರದ ಸಿಂಬಲ್ ತೆರವುಗೊಳಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಒತ್ತಾಯ ಮಾಡಗಿದೆ. ಹೀಗಾಗಿ ಕೋಲಾರದಲ್ಲೂ ವಿವಾದಿತ ಸ್ಥಳದಲ್ಲಿ ಒಂದು ಧರ್ಮದ ಚಿಹ್ನೆ ತೆರವಿಗೆ ಒತ್ತಾಯ ಶುರುವಾಗಿದೆ. ಮಂಡ್ಯ ಆಯಿತು. ಕೋಲಾರದಲ್ಲಿ ಯಾವಾಗ ತೆರವು ಮಾಡುವುದು. ಕಾನೂನು ಎಲ್ಲರಿಗೂ ಒಂದೇ ಇರಬೇಕು ಎಂದು ಕ್ಲಾಕ್ ಟವರ್ ಭಾವಚಿತ್ರ ಪೋಸ್ಟ್ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:52 am, Fri, 2 February 24

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM