AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

“ಇನ್ನಷ್ಟು ಹೊಡೆದ್ರೆ ಚೆನ್ನಾಗಿ ಓದ್ತಾನೆ”: ಮದರಸಾ ಶಿಕ್ಷಕ ಅಬ್ಬಾಸ್ ಉಡಾಫೆ ಮಾತು; ರಾಯಚೂರಿನಲ್ಲಿ ಹೆಡ್ ಮಾಸ್ಟರ್ ಸೇರಿ 6 ಜನರ ವಿರುದ್ಧ FIR

ರಾಯಚೂರು ಕವಿತಾಳ ಮದರಸಾದಲ್ಲಿ ಶಿಕ್ಷಕ ಅಬ್ಬಾಸ್ 10 ವರ್ಷದ ವಿದ್ಯಾರ್ಥಿಗೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾನೆ. ಬಾಲಕನ ಕಣ್ಣು ಊದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೋಷಕರ ದೂರಿನ ಮೇರೆಗೆ ಶಿಕ್ಷಕ ಅಬ್ಬಾಸ್ ಸೇರಿ 6 ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಅಬ್ಬಾಸ್ ಪರಾರಿಯಾಗಿದ್ದಾನೆ. ಈ ಹಿಂದೆಯೂ ಇಂತಹ ಘಟನೆ ನಡೆದಿದ್ದು, ಎಸ್‌ಪಿ ಅರುಣಾಂಗ್ಷು ಗಿರಿ ತನಿಖೆಗೆ ಆದೇಶಿಸಿದ್ದಾರೆ.

ಇನ್ನಷ್ಟು ಹೊಡೆದ್ರೆ ಚೆನ್ನಾಗಿ ಓದ್ತಾನೆ: ಮದರಸಾ ಶಿಕ್ಷಕ ಅಬ್ಬಾಸ್ ಉಡಾಫೆ ಮಾತು; ರಾಯಚೂರಿನಲ್ಲಿ ಹೆಡ್ ಮಾಸ್ಟರ್ ಸೇರಿ 6 ಜನರ ವಿರುದ್ಧ FIR
ರಾಯಚೂರು
ಭೀಮೇಶ್​​ ಪೂಜಾರ್
| Edited By: |

Updated on: Nov 11, 2026 | 6:40 PM

Share

ರಾಯಚೂರು, ನ.11: ಮಕ್ಕಳು ಹಾಗೂ ವಿದ್ಯಾರ್ಥಿಗಳು ಸರಿಯಾಗಿ ಓದದಿದ್ದರೆ ತಿದ್ದಿ ಬುದ್ಧಿ ಹೇಳಬೇಕಾದ ಶಿಕ್ಷಕನೊಬ್ಬ, ರಕ್ಕಸನಂತೆ ವರ್ತಿಸಿ 10 ವರ್ಷದ ಬಾಲಕನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣದಲ್ಲಿ ನಡೆದಿದೆ. ಕವಿತಾಳದ ‘ಮದರಸಾ ದಾರುಲ್ ಹುಫ್ಫಾಜ್’‌ನಲ್ಲಿ 3ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕನ ಬಾಯಿಗೆ ಬಟ್ಟೆ ತುರುಕಿ, ಕಣ್ಣು, ಬೆನ್ನು ಹಾಗೂ ಹೊಟ್ಟೆಯ ಭಾಗಕ್ಕೆ ಮನಬಂದಂತೆ ಥಳಿಸಲಾಗಿದೆ. ಹಲ್ಲೆಯ ತೀವ್ರತೆಗೆ ಬಾಲಕನ ಕಣ್ಣುಗಳು ಊದಿಕೊಂಡು ಹೆಪ್ಪುಗಟ್ಟಿದ್ದು, ಬಾಲಕ ಅಕ್ಷರಶಃ ನೋವಿನಿಂದ ನರಳಾಡುವಂತಾಗಿದೆ.

ಬಾಲಕನ ತಂದೆ ಅಬ್ದುಲ್ ನಹೀಮ್ ಅವರು ಮಗನಿಗೆ ಉತ್ತಮ ಶಿಕ್ಷಣ ಸಿಗಲೆಂದು ಕಳೆದ ಎರಡು ವರ್ಷಗಳ ಹಿಂದೆ ಇದೇ ಮದರಸಾಕ್ಕೆ ಸೇರಿಸಿದ್ದರು. ನವೆಂಬರ್ 8 ರಂದು ಮಗನನ್ನು ನೋಡಲು ಮದರಸಾಕ್ಕೆ ತೆರಳಿದ್ದಾಗ, ಮಗನ ನರಳಾಟ ಹಾಗೂ ದೇಹದ ಮೇಲಿನ ಗಾಯಗಳನ್ನು ಕಂಡು ಆತಂಕಗೊಂಡು ವಿಚಾರಿಸಿದಾಗ ಶಿಕ್ಷಕ ಅಬ್ಬಾಸ್ ನಡೆಸಿದ ಭೀಕರ ಕೃತ್ಯ ಬೆಳಕಿಗೆ ಬಂದಿದೆ. “ಮಗನಿಗೆ ಓದಲು ಬರ್ತಿರಲಿಲ್ಲ, ಇನ್ನಷ್ಟು ಹೊಡೆದರೆ ಚೆನ್ನಾಗಿ ಓದುತ್ತಾನೆ” ಎಂದು ಆರೋಪಿ ಶಿಕ್ಷಕ ಅಬ್ಬಾಸ್ ತಂದೆಗೇ ಉಡಾಫೆಯಾಗಿ ಉತ್ತರಿಸಿದ್ದಾನೆ.

ಆಕ್ರೋಶಗೊಂಡ ತಂದೆ ಕವಿತಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಹಲ್ಲೆ ನಡೆಸಿದ ಶಿಕ್ಷಕ ಅಬ್ಬಾಸ್, ಮುಖ್ಯ ಶಿಕ್ಷಕ ಹಜಮ್ ಮುರಾರಿ ಸೇರಿದಂತೆ ಮದರಸಾದ 6 ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸದ್ಯ ಗಾಯಾಳು ಬಾಲಕನಿಗೆ ಲಿಂಗಸುಗೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಆರೋಪಿ ಶಿಕ್ಷಕ ಅಬ್ಬಾಸ್ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸರು ಎರಡು ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ.

ಇದನ್ನೂ ಓದಿ:ಕನ್ನಡ ನಾಡಲ್ಲೇ ಕನ್ನಡ ಕಾಯುವ ಸ್ಥಿತಿ ಬಂದಿರುವುದು ದುರ್ದೈವ: ನಾನು 100 ವರ್ಷ ಬದುಕಬೇಕು ಎಂದ ಸಿದ್ದರಾಮಯ್ಯ

ಇದೇ ಮದರಸಾದಲ್ಲಿ ಈ ಹಿಂದೆಯೂ ಮತ್ತೊಬ್ಬ ಬಾಲಕನ ಮೇಲೆ ಹಲ್ಲೆ ನಡೆದು, ಕಾಲು ಮುರಿಯಲಾಗಿತ್ತು ಹಾಗೂ ಆ ಪ್ರಕರಣವನ್ನು ಮುಚ್ಚಿಹಾಕಲಾಗಿತ್ತು ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಬಗ್ಗೆಯೂ ಸೂಕ್ತ ತನಿಖೆ ನಡೆಸಲಾಗುವುದು ಎಂದು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ತಿಳಿಸಿದ್ದಾರೆ. ಮಕ್ಕಳಿಗೆ ಓದಲು-ಬರೆಯಲು ಬಾರದಿದ್ದರೆ ಪೋಷಕರಿಗೆ ಮಾಹಿತಿ ನೀಡಬೇಕೇ ವಿನಃ ಈ ರೀತಿ ದೈಹಿಕ ಹಲ್ಲೆ ನಡೆಸುವುದು ಕಾನೂನಿನಡಿ ಗಂಭೀರ ಅಪರಾಧ ಎಂದು ಎಸ್ಪಿ ಅರುಣಾಂಗ್ಷು ಗಿರಿ ಶಿಕ್ಷಕರಿಗೆ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭೀಮೇಶ್​​ ಪೂಜಾರ್
ಭೀಮೇಶ್​​ ಪೂಜಾರ್

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
ರಸ್ತೆ ಗುಂಡಿ ಮುಚ್ಚಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ನಟ ವಿನೋದ್ ರಾಜ್
ರಸ್ತೆ ಗುಂಡಿ ಮುಚ್ಚಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ನಟ ವಿನೋದ್ ರಾಜ್
ಮಂಜ ಬಂದಿದ್ದೆ, ಮತ್ತೆ ರದ್ದಾಯ್ತು ಟಾಸ್ಕ್: ವಿಡಿಯೋ
ಮಂಜ ಬಂದಿದ್ದೆ, ಮತ್ತೆ ರದ್ದಾಯ್ತು ಟಾಸ್ಕ್: ವಿಡಿಯೋ
ಕರಡಿ ಬೆನ್ನಟ್ಟಿದ ಹುಲಿರಾಯ: ಅಪರೂಪದ ದೃಶ್ಯ ಕಣ್ತುಂಬಿಕೊಂಡ ಸಫಾರಿಗರು
ಕರಡಿ ಬೆನ್ನಟ್ಟಿದ ಹುಲಿರಾಯ: ಅಪರೂಪದ ದೃಶ್ಯ ಕಣ್ತುಂಬಿಕೊಂಡ ಸಫಾರಿಗರು
ಹಾಸನಾಂಬೆ ದರ್ಶನೋತ್ಸವ ಸಂಪನ್ನ: ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಬಂದ್
ಹಾಸನಾಂಬೆ ದರ್ಶನೋತ್ಸವ ಸಂಪನ್ನ: ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಬಂದ್
ಈ ವರ್ಷ ಪಟಾಕಿ ಅವಘಡಗಳಿಂದ ಹೆಚ್ಚು ಮಂದಿಗೆ ಗಾಯ: ವೈದ್ಯರಿಂದ ಮಾಹಿತಿ
ಈ ವರ್ಷ ಪಟಾಕಿ ಅವಘಡಗಳಿಂದ ಹೆಚ್ಚು ಮಂದಿಗೆ ಗಾಯ: ವೈದ್ಯರಿಂದ ಮಾಹಿತಿ
ನಮ್ಮ ಮೆಟ್ರೋ; ಮುಂದಿನ ವರ್ಷ ಕಾರ್ಯರೂಪಕ್ಕೆ: ಕೃಷ್ಣ ಬೈರೇಗೌಡ
ನಮ್ಮ ಮೆಟ್ರೋ; ಮುಂದಿನ ವರ್ಷ ಕಾರ್ಯರೂಪಕ್ಕೆ: ಕೃಷ್ಣ ಬೈರೇಗೌಡ
ನಂದಿನಿ ಬೆನ್ನಲ್ಲೇ ಮದರ್ ಡೈರಿ ಹಾಲಿನ ದರದಲ್ಲಿಯೂ ಏರಿಕೆ
ನಂದಿನಿ ಬೆನ್ನಲ್ಲೇ ಮದರ್ ಡೈರಿ ಹಾಲಿನ ದರದಲ್ಲಿಯೂ ಏರಿಕೆ
ಬಸ್​​ ಟಿಕೆಟ್​​ ದರ ಏರಿಕೆ ಬಳಿಕವೂ ಬಿಎಂಟಿಸಿಯಿಂದ 'ಡಕೋಟಾ ಬಸ್'​​ ಸೇವೆ!
ಬಸ್​​ ಟಿಕೆಟ್​​ ದರ ಏರಿಕೆ ಬಳಿಕವೂ ಬಿಎಂಟಿಸಿಯಿಂದ 'ಡಕೋಟಾ ಬಸ್'​​ ಸೇವೆ!
ಮಂತ್ರಘೋಷಗಳು ಮೊಳಗುತ್ತಿದ್ದಂತೆ ತೆರೆದುಕೊಳ್ಳುವ ದೇಗುಲದ ಗರ್ಭಗುಡಿ ಬಾಗಿಲು!
ಮಂತ್ರಘೋಷಗಳು ಮೊಳಗುತ್ತಿದ್ದಂತೆ ತೆರೆದುಕೊಳ್ಳುವ ದೇಗುಲದ ಗರ್ಭಗುಡಿ ಬಾಗಿಲು!
‘ಒಂದು ತಿಂಗಳು ಹೊರಗಿದ್ದ ಬಚ್ಚಾ ನೀನು’; ಮಂಜುಗೆ ಪ್ರಶಾಂತ್ ಅವಾಜ್
‘ಒಂದು ತಿಂಗಳು ಹೊರಗಿದ್ದ ಬಚ್ಚಾ ನೀನು’; ಮಂಜುಗೆ ಪ್ರಶಾಂತ್ ಅವಾಜ್