AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನ ರಿಮ್ಸ್​ ಆಸ್ಪತ್ರೆಯಲ್ಲಿ ತಡರಾತ್ರಿ ಸೀರೆಯುಟ್ಟು ವ್ಯಕ್ತಿ ಓಡಾಟ: ಹಸುಗೂಸು ಕಳ್ಳತನದ ಶಂಕೆ, ಬಂಧನ

ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಓರ್ವ ವ್ಯಕ್ತಿ ತಡರಾತ್ರಿ ಸೀರೆ ಧರಿಸಿ ಓಡಾಡಿ ಆತಂಕ ಸೃಷ್ಟಿಸಿದ್ದ ಘಟನೆ ನಡೆದಿದೆ. ಹಸುಗೂಸು ಕಳ್ಳತನ ಜಾಲದ ಶಂಕೆ ಹಿನ್ನೆಲೆ ಪೊಲೀಸರಿಗೆ ಸ್ಥಳೀಯರು ದೂರು ಹಿನ್ನೆಲೆ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೆಲ ಕಾಲ ಆಸ್ಪತ್ರೆಯಲ್ಲಿ ಆತಂಕ ಸೃಷ್ಟಿ ಆಗಿತ್ತು.

ರಾಯಚೂರಿನ ರಿಮ್ಸ್​ ಆಸ್ಪತ್ರೆಯಲ್ಲಿ ತಡರಾತ್ರಿ ಸೀರೆಯುಟ್ಟು ವ್ಯಕ್ತಿ ಓಡಾಟ: ಹಸುಗೂಸು ಕಳ್ಳತನದ ಶಂಕೆ, ಬಂಧನ
ರಿಮ್ಸ್​ ಆಸ್ಪತ್ರೆ, ಆತಂಕ ಮೂಡಿಸಿದ ವ್ಯಕ್ತಿ
ಭೀಮೇಶ್​​ ಪೂಜಾರ್
| Edited By: |

Updated on:Jul 10, 2025 | 12:38 PM

Share

ರಾಯಚೂರು, ಜುಲೈ 10: ರಿಮ್ಸ್ ಆಸ್ಪತ್ರೆಯಲ್ಲಿನ ಬಾಣಂತಿಯರು ಹುಷಾರಾಗಿ ಇರಬೇಕಾದ ಪರಿಸ್ಥಿತಿ ಎದುರಾಗಿದೆ. ಅಪ್ಪಿತಪ್ಪಿ ರಾತ್ರಿ ಮೈಮರತರೇ ಹಸುಗೂಸು (baby) ಕಳ್ಳತನವಾಗುವ ಸಾಧ್ಯತೆ ಇದ್ದು, ಇದೇ ಶಂಕೆ ಹಿನ್ನೆಲೆ ಇದೀಗ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ (arrested). ಶರಣಪ್ಪ(32) ಬಂಧಿತ ವ್ಯಕ್ತಿ. ಸೀರೆ ಧರಿಸಿ ಬಂದು ಆಸ್ಪತ್ರೆಯಲ್ಲಿ ತಡರಾತ್ರಿ ಓಡಾಡಿ ಆತಂಕ ಸೃಷ್ಟಿಸಿದ್ದ. ಸ್ಥಳೀಯರ ದೂರು ಹಿನ್ನೆಲೆ ಇದೀಗ ನಗರದ ಮಾರ್ಕೆಟ್ ಯಾರ್ಡ್ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಎಮರ್ಜನ್ಸಿ ವಾರ್ಡ್​​ಗೆ ನುಗ್ಗಲು ಯತ್ನ

ಬಂಧಿತ ಶರಣಪ್ಪ ರಾತ್ರೋರಾತ್ರಿ ಸೀರೆಯುಟ್ಟು ಆಸ್ಪತ್ರೆ ಎಮರ್ಜನ್ಸಿ ವಾರ್ಡ್​ ಒಳಹೋಗುತ್ತಿದ್ದ. ಯಾವ ವಾರ್ಡ್​ಗೆ ಹೋಗಬೇಕು, ಹೆಸರೇನು ಎಂದು ಸ್ಥಳೀಯರು ಪ್ರಶ್ನೆ ಮಾಡಿದ್ದು, ಈ ವೇಳೆ ಏನೇನೋ ಹೇಳಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ.

ಇದನ್ನೂ ಓದಿ: ಗಂಡೆಂದು ಹೆಣ್ಣು ಮಗು ಕೊಟ್ಟ ಸಿಬ್ಬಂದಿ: ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ಅದಲು-ಬದಲು

ಇದನ್ನೂ ಓದಿ
Image
ನಕಲಿ ಎಲೆಕ್ಟ್ರಿಕ್ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಮಳಿಗೆಗಳ ಮೇಲೆ ದಾಳಿ
Image
ಗಂಡೆಂದು ಹೆಣ್ಣು ಮಗು ಕೊಟ್ಟ ಸಿಬ್ಬಂದಿ: ಆಸ್ಪತ್ರೆಯಲ್ಲಿ ಶಿಶು ಅದಲು-ಬದಲು
Image
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
Image
ಹೆರಿಗೆ ವಾರ್ಡ್​ನಲ್ಲಿ ಮಲಗಿ ಬೇರೆ ಮಗು ಕದ್ದು ತನ್ನದೆಂದ ಮಹಿಳೆ!

ಹಸುಗೂಸು ಕಳ್ಳತನದ ಶಂಕೆ ಹಿನ್ನೆಲೆ ಪೊಲೀಸರಿಗೆ ಸ್ಥಳೀಯರು ದೂರು ನೀಡಿದ್ದು, ಬಳಿಕ ಶರಣಪ್ಪ ನನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ ತಾನು ಮಂಗಳಮುಖಿ ಎಂದು ಹೇಳಿಕೊಂಡಿದ್ದು, ಆಸ್ಪತ್ರೆಯಲ್ಲಿ ಮಲಗಲು ಹೋಗಿದ್ದೆ ಎಂದು ಹೇಳಿದ್ದಾರೆ.

ಬೇರೆಯವರ ಮಗು ಕದ್ದು ತನ್ನದೆಂದ ಮಹಿಳೆ

ಇನ್ನು ಇತ್ತೀಚೆಗೆ ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಓರ್ವ ಮಹಿಳೆ ಬೇರೆಯವರ ಹೆಣ್ಣು ಮಗುವನ್ನು ಕಳ್ಳತನ ಮಾಡಿ, ತನ್ನ ಮಗುವೆಂದಿದ್ದ ಘಟನೆ ನಡೆದಿತ್ತು. ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಖಾನಪೇಟೆ ನಿವಾಸಿ ಸಾಕ್ಷಿ ಯಾದವಾಡ ಮಗು ಕದಿದ್ದ ಮಹಿಳೆ.

ಇದನ್ನೂ ಓದಿ: ನಕಲಿ ಎಲೆಕ್ಟ್ರಿಕ್ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ರಾಯಚೂರಿನ ಪ್ರಸಿದ್ಧ ಮಳಿಗೆಗಳ ಮೇಲೆ ದಾಳಿ

ಪ್ರಕರಣಕ್ಕೆ ಸಂಬಂಧಿದಂತೆ ನಾಲ್ವರನ್ನು ಬಾಗಲಕೋಟೆ ನವನಗರ ಪೊಲೀಸರು ಬಂಧಿಸಿದ್ದಾರೆ. ಮಗುವಿನ ರಕ್ಷಣೆ ಮಾಡಲಾಗಿದೆ. ಬಂಧಿತರು 2024 ರಿಂದಲೇ ಮಗು ಕದಿಯಲು ಪ್ಲ್ಯಾನ್​​ ಮಾಡಿದ್ದು, ಮಹಿಳೆಗೆ ಆಕೆಯ ತಾಯಿ, ಸಹೋದರಿಯರು ಸೇರಿ ಮೂವರು ಸಾಥ್​ ನೀಡಿದ್ದರು. ಇನ್ನು ಈ ಸಾಕ್ಷಿ ಯಾದವಾಡ ಜಿಲ್ಲೆಯ ಕಡಕೋಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಕಲಿ ತಾಯಿ ಕಾರ್ಡ್​ ಮಾಡಿಸಿದ್ದು, ತನ್ನಗೆ ಅನುಕೂಲಕ್ಕೆ ತಕ್ಕಂತೆ ದಿನಾಂಕ ತಿದ್ದುಪಡಿ ಮಾಡುತ್ತಿದ್ದ ವಿಚಾರ ಪೊಲೀಸ್​ ತನಿಖೆಯಲ್ಲಿ ಬಯಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:37 pm, Thu, 10 July 25

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್