
ರಾಯಚೂರು, ಜುಲೈ 10: ರಿಮ್ಸ್ ಆಸ್ಪತ್ರೆಯಲ್ಲಿನ ಬಾಣಂತಿಯರು ಹುಷಾರಾಗಿ ಇರಬೇಕಾದ ಪರಿಸ್ಥಿತಿ ಎದುರಾಗಿದೆ. ಅಪ್ಪಿತಪ್ಪಿ ರಾತ್ರಿ ಮೈಮರತರೇ ಹಸುಗೂಸು (baby) ಕಳ್ಳತನವಾಗುವ ಸಾಧ್ಯತೆ ಇದ್ದು, ಇದೇ ಶಂಕೆ ಹಿನ್ನೆಲೆ ಇದೀಗ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ (arrested). ಶರಣಪ್ಪ(32) ಬಂಧಿತ ವ್ಯಕ್ತಿ. ಸೀರೆ ಧರಿಸಿ ಬಂದು ಆಸ್ಪತ್ರೆಯಲ್ಲಿ ತಡರಾತ್ರಿ ಓಡಾಡಿ ಆತಂಕ ಸೃಷ್ಟಿಸಿದ್ದ. ಸ್ಥಳೀಯರ ದೂರು ಹಿನ್ನೆಲೆ ಇದೀಗ ನಗರದ ಮಾರ್ಕೆಟ್ ಯಾರ್ಡ್ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಬಂಧಿತ ಶರಣಪ್ಪ ರಾತ್ರೋರಾತ್ರಿ ಸೀರೆಯುಟ್ಟು ಆಸ್ಪತ್ರೆ ಎಮರ್ಜನ್ಸಿ ವಾರ್ಡ್ ಒಳಹೋಗುತ್ತಿದ್ದ. ಯಾವ ವಾರ್ಡ್ಗೆ ಹೋಗಬೇಕು, ಹೆಸರೇನು ಎಂದು ಸ್ಥಳೀಯರು ಪ್ರಶ್ನೆ ಮಾಡಿದ್ದು, ಈ ವೇಳೆ ಏನೇನೋ ಹೇಳಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ.
ಇದನ್ನೂ ಓದಿ: ಗಂಡೆಂದು ಹೆಣ್ಣು ಮಗು ಕೊಟ್ಟ ಸಿಬ್ಬಂದಿ: ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ಅದಲು-ಬದಲು
ಹಸುಗೂಸು ಕಳ್ಳತನದ ಶಂಕೆ ಹಿನ್ನೆಲೆ ಪೊಲೀಸರಿಗೆ ಸ್ಥಳೀಯರು ದೂರು ನೀಡಿದ್ದು, ಬಳಿಕ ಶರಣಪ್ಪ ನನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ ತಾನು ಮಂಗಳಮುಖಿ ಎಂದು ಹೇಳಿಕೊಂಡಿದ್ದು, ಆಸ್ಪತ್ರೆಯಲ್ಲಿ ಮಲಗಲು ಹೋಗಿದ್ದೆ ಎಂದು ಹೇಳಿದ್ದಾರೆ.
ಇನ್ನು ಇತ್ತೀಚೆಗೆ ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಓರ್ವ ಮಹಿಳೆ ಬೇರೆಯವರ ಹೆಣ್ಣು ಮಗುವನ್ನು ಕಳ್ಳತನ ಮಾಡಿ, ತನ್ನ ಮಗುವೆಂದಿದ್ದ ಘಟನೆ ನಡೆದಿತ್ತು. ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಖಾನಪೇಟೆ ನಿವಾಸಿ ಸಾಕ್ಷಿ ಯಾದವಾಡ ಮಗು ಕದಿದ್ದ ಮಹಿಳೆ.
ಇದನ್ನೂ ಓದಿ: ನಕಲಿ ಎಲೆಕ್ಟ್ರಿಕ್ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ರಾಯಚೂರಿನ ಪ್ರಸಿದ್ಧ ಮಳಿಗೆಗಳ ಮೇಲೆ ದಾಳಿ
ಪ್ರಕರಣಕ್ಕೆ ಸಂಬಂಧಿದಂತೆ ನಾಲ್ವರನ್ನು ಬಾಗಲಕೋಟೆ ನವನಗರ ಪೊಲೀಸರು ಬಂಧಿಸಿದ್ದಾರೆ. ಮಗುವಿನ ರಕ್ಷಣೆ ಮಾಡಲಾಗಿದೆ. ಬಂಧಿತರು 2024 ರಿಂದಲೇ ಮಗು ಕದಿಯಲು ಪ್ಲ್ಯಾನ್ ಮಾಡಿದ್ದು, ಮಹಿಳೆಗೆ ಆಕೆಯ ತಾಯಿ, ಸಹೋದರಿಯರು ಸೇರಿ ಮೂವರು ಸಾಥ್ ನೀಡಿದ್ದರು. ಇನ್ನು ಈ ಸಾಕ್ಷಿ ಯಾದವಾಡ ಜಿಲ್ಲೆಯ ಕಡಕೋಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಕಲಿ ತಾಯಿ ಕಾರ್ಡ್ ಮಾಡಿಸಿದ್ದು, ತನ್ನಗೆ ಅನುಕೂಲಕ್ಕೆ ತಕ್ಕಂತೆ ದಿನಾಂಕ ತಿದ್ದುಪಡಿ ಮಾಡುತ್ತಿದ್ದ ವಿಚಾರ ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 12:37 pm, Thu, 10 July 25