AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಮ್ಮಗನ ಮದುವೆ ನೋಡುವ ಆಸೆಯಲ್ಲಿದ್ದ ಅಜ್ಜಿಗೆ ಶಾಕ್​​​: ಇಡೀ ಊರಿಗೆ ಬಾಡೂಟ ಹಾಕಿಸಿ ಮದುಮಗ ನಾಪತ್ತೆ!

ರಾಯಚೂರಿನ ಮಾನ್ವಿ ತಾಲೂಕಿನ ಬೆಟ್ಟದೂರಿನ 25ರ ಯುವಕ ಮುದ್ದುರಂಗಪ್ಪ, ಮದುವೆಗೆ ಸಿದ್ಧನಾಗಿ ಊರಿಗೆ ಬಾಡೂಟ ಹಾಕಿಸಿದ ಮರುದಿನವೇ ನಾಪತ್ತೆಯಾಗಿದ್ದಾನೆ. ಇನ್ನೇನು ಒಂದು ತಿಂಗಳಲ್ಲಿ ಮದುವೆಯಾಗಬೇಕಿದ್ದ ಈತ ಕಾಣೆಯಾಗಿರುವುದು ಕುಟುಂಬಕ್ಕೆ ಆಘಾತ ತಂದಿದೆ. ಅಜ್ಜಿ ನಾಗಮ್ಮ ಮೊಮ್ಮಗನ ನಿರೀಕ್ಷಣೆಯಲ್ಲಿ ಉಪವಾಸ ಕುಳಿತಿದ್ದಾರೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದಾರೆ.

ಮೊಮ್ಮಗನ ಮದುವೆ ನೋಡುವ ಆಸೆಯಲ್ಲಿದ್ದ ಅಜ್ಜಿಗೆ ಶಾಕ್​​​: ಇಡೀ ಊರಿಗೆ ಬಾಡೂಟ ಹಾಕಿಸಿ ಮದುಮಗ ನಾಪತ್ತೆ!
ಮುದ್ದುರಂಗಪ್ಪ ನಾಪತ್ತೆ
ಭೀಮೇಶ್​​ ಪೂಜಾರ್
| Edited By: |

Updated on: Feb 21, 2026 | 8:04 PM

Share

ರಾಯಚೂರು, ಫೆ.21: ಇನ್ನೊಂದು ತಿಂಗಳಲ್ಲಿ ಮದುವೆಯಾಗಿ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಯುವಕನೊಬ್ಬ, ಇಡೀ ಊರಿಗೆ ಬಾಡೂಟ ಹಾಕಿಸಿದ ಮಾರನೇ ದಿನವೇ ನಾಪತ್ತೆಯಾಗಿರುವ ವಿಚಿತ್ರ ಹಾಗೂ ಆತಂಕಕಾರಿ ಘಟನೆ ಮಾನ್ವಿ ತಾಲೂಕಿನ ಬೆಟ್ಟದೂರು ಗ್ರಾಮದಲ್ಲಿ (Raichur missing groom) ನಡೆದಿದೆ. ಬೆಟ್ಟದೂರು ಗ್ರಾಮದ ನಿವಾಸಿ 25 ವರ್ಷದ ಮುದ್ದುರಂಗಪ್ಪ ನಾಪತ್ತೆಯಾದ ಯುವಕ. ಬಿಎ ಪದವೀಧರನಾಗಿದ್ದ ಈತ ಹೊಲದ ಕೆಲಸ ಮಾಡಿಕೊಂಡಿದ್ದ. ಕಳೆದ ಒಂದು ವರ್ಷದ ಹಿಂದೆ ಸಂಬಂಧಿಕರ ಯುವತಿಯೊಂದಿಗೆ ಈತನ ಮದುವೆ ನಿಶ್ಚಯವಾಗಿತ್ತು. ಇನ್ನೇನು ಒಂದು ತಿಂಗಳಲ್ಲಿ ಮದುವೆ ನಡೆಯಬೇಕಿತ್ತು.

ಮುದ್ದುರಂಗಪ್ಪನ ಕುಟುಂಬದಲ್ಲಿ ಮದುವೆಗೂ ಮುನ್ನ ಮರಿ ಹೊಡೆದು ಇಡೀ ಊರಿಗೆ ಬಾಡೂಟ ಹಾಕಿಸುವ ಸಂಪ್ರದಾಯವಿದೆ. ಅದರಂತೆ ಕಳೆದ ಜನವರಿಯಲ್ಲಿ ಮುದ್ದುರಂಗಪ್ಪ ಸಂಭ್ರಮದಿಂದ ಇಡೀ ಊರಿಗೆ ಬಾಡೂಟ ಹಾಕಿಸಿದ್ದ. ಆದರೆ, ಈ ಸಂಭ್ರಮದ ಮರುದಿನವೇ ಆತ ಯಾರಿಗೂ ತಿಳಿಸದೆ ಏಕಾಏಕಿ ನಾಪತ್ತೆಯಾಗಿದ್ದಾನೆ.

ಮುದ್ದುರಂಗಪ್ಪ ಮತ್ತು ಆತನ ತಮ್ಮ-ತಂಗಿ ಚಿಕ್ಕವರಿದ್ದಾಗಲೇ ತಂದೆ-ತಾಯಿಯನ್ನು ಕಳೆದುಕೊಂಡಿದ್ದರು. ಅಂದಿನಿಂದ ಅಜ್ಜಿ ನಾಗಮ್ಮ ಅವರೇ ಕಷ್ಟಪಟ್ಟು ಮೊಮ್ಮಕ್ಕಳನ್ನು ಸಾಕಿ ಸಲಹಿದ್ದರು. ಮೊಮ್ಮಗ ಮದುವೆಯಾಗಿ ಸುಖವಾಗಿರುತ್ತಾನೆ ಎಂದು ಕನಸು ಕಂಡಿದ್ದ ಅಜ್ಜಿಗೆ ಈಗ ಮೊಮ್ಮಗ ನಾಪತ್ತೆಯಾಗಿರುವುದು ಅರಗಿಸಿಕೊಳ್ಳಲಾಗುತ್ತಿಲ್ಲ. ನನ್ನ ಮೊಮ್ಮಗ ಮರಳಿ ಬರಲಿ ಎಂದು ನಾಗಮ್ಮ ದೇವರಲ್ಲಿ ಪ್ರಾರ್ಥಿಸುತ್ತಾ ಉಪವಾಸ ಕುಳಿತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಮಹಿಳೆಯರೇ ಎಚ್ಚರ: ಮತ್ತೆ ನಗರದಲ್ಲಿ ಸರಗಳ್ಳರು ಹಾವಳಿ!

ಘಟನೆಗೆ ಸಂಬಂಧಿಸಿದಂತೆ ಮಾನ್ವಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕುಟುಂಬಸ್ಥರು ಮತ್ತು ಊರಿನವರು ಮಂತ್ರಾಲಯ, ಆಂಧ್ರಪ್ರದೇಶ, ತೆಲಂಗಾಣ, ಯಾದಗಿರಿ, ಬಳ್ಳಾರಿ ಹಾಗೂ ಕಲಬುರ್ಗಿ ಸೇರಿದಂತೆ ಹಲವೆಡೆ ಹುಡುಕಾಟ ನಡೆಸುತ್ತಿದ್ದಾರೆ. ಫೋಟೋದಲ್ಲಿರುವ ಯುವಕ (ಮುದ್ದುರಂಗಪ್ಪ) ಎಲ್ಲಾದರೂ ಕಂಡುಬಂದಲ್ಲಿ ಕೂಡಲೇ ಮಾನ್ವಿ ಪೊಲೀಸ್ ಠಾಣೆಗೆ ಅಥವಾ ಅವರ ಕುಟುಂಬಸ್ಥರಿಗೆ ಮಾಹಿತಿ ನೀಡಲು ಎಂದು ಸೋಶಿಯಲ್​ ಮೀಡಿಯಾದಲ್ಲೂ ಮನವಿ ಮಾಡಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!