ರಾಯಚೂರು: ಊಟ ಸೇವಿಸಿದ್ದ ಹಾಸ್ಟೆಲ್ನ 14 ವಿದ್ಯಾರ್ಥಿಯರು ಅಸ್ವಸ್ಥ
ಹಾಸ್ಟೆಲ್ನಲ್ಲಿ ಊಟ ಸೇವಿಸಿದ್ದ 14 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ಅಸ್ವಸ್ಥಗೊಂಡಿರುವ ವಿದ್ಯಾರ್ಥಿನಿಯರ ಪೈಕಿ ಒಬ್ಬಳನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಯಚೂರು, ಡಿ.10: ಹಾಸ್ಟೆಲ್ನಲ್ಲಿ ಊಟ ಸೇವಿಸಿದ್ದ 14 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ರಾಯಚೂರು (Raichur) ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ಅಸ್ವಸ್ಥಗೊಂಡಿರುವ ವಿದ್ಯಾರ್ಥಿನಿಯರ ಪೈಕಿ ಒಬ್ಬಳನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ಹಾಸ್ಟೆಲ್ನಲ್ಲಿ ನಡೆದ ಘಟನೆ ಇದಾಗಿದೆ. ಮಧ್ಯಾಹ್ನ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯರು ಪಲಾವ್ ಸೇವಿಸಿದ್ದರು. ಬಳಿಕ ಮಕ್ಕಳಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ಅಸ್ವಸ್ಥ ವಿದ್ಯಾರ್ಥಿನಿಯರ ಕಂಡು ಉಳಿದವರಲ್ಲಿ ಆತಂಕ ಉಂಟಾಗಿದೆ. ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದರೂ ವಾರ್ಡನ್ ಹಾಸ್ಟೆಲ್ಗೆ ಆಗಮಿಸದೇ ನಿರ್ಲಕ್ಷ್ಯ ತೋರಿದ್ದಾರೆ. ಹೀಗಾಗಿ ವಾರ್ಡನ್ ಪಾರ್ವತಿ ವಿರುದ್ಧ ವಿದ್ಯಾರ್ಥಿನಿಯರು ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ: ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ; ಪ್ರಿನ್ಸಿಪಾಲ್, ಮೇಲ್ವಿಚಾರಕಿ ಅಮಾನತು ಮಾಡಿದ ಡಿಸಿ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:53 pm, Sun, 10 December 23