ರಾಯಚೂರು: ಬೆಳಗಿನ ಉಪಹಾರ ಸೇವಿಸಿ ವಸತಿ ಶಾಲೆಯ 45ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ತ

| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 19, 2024 | 2:47 PM

ರಾಯಚೂರು ಜಿಲ್ಲೆಯ ಅರಕೇರಾ(Arakera) ಪಟ್ಟದಲ್ಲಿರುವ ಪರಿಶಿಷ್ಟ ಪಂಗಡದ ವಸತಿ ಶಾಲೆಯಲ್ಲಿ ಬೆಳಗಿನ ಉಪಹಾರ ಸೇವಿಸಿ 45ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ತರಾದ ಘಟನೆ ನಡೆದಿದೆ. ಕೂಡಲೇ ಆರೋಗ್ಯ ಕೇಂದ್ರಕ್ಕೆ ವಿದ್ಯಾರ್ಥಿನಿಯರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಯಚೂರು: ಬೆಳಗಿನ ಉಪಹಾರ ಸೇವಿಸಿ ವಸತಿ ಶಾಲೆಯ 45ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ತ
ಉಪಹಾರ ಸೇವಿಸಿ ವಿದ್ಯಾರ್ಥಿನಿಯರು ಅಸ್ವಸ್ಥ
Follow us on

ರಾಯಚೂರು, ಮಾ.19: ಬೆಳಗಿನ ಉಪಹಾರ ಸೇವಿಸಿ 45ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ತರಾದ ಘಟನೆ ರಾಯಚೂರು ಜಿಲ್ಲೆಯ ಅರಕೇರಾ(Arakera) ಪಟ್ಟದಲ್ಲಿರುವ ಪರಿಶಿಷ್ಟ ಪಂಗಡದ ವಸತಿ ಶಾಲೆಯಲ್ಲಿ ನಡೆದಿದೆ. ವಾಂತಿ-ಭೇದಿ ಮತ್ತು ತಲೆಸುತ್ತಿನಿಂದ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವಿದ್ಯಾರ್ಥಿನಿಯರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೋಷಕರು, ವಸತಿ ನಿಲಯದ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದೇ ಮಾ.15 ರಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರಿನಲ್ಲಿ ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥರಾಗಿದ್ದರು. ಬಳಿಕ ಮಾ.17 ರಂದು ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಓರ್ವ ಬಾಲಕ  ಸಾವನ್ನಪ್ಪಿದ್ದ. ಮನೆಬೆನ್ನೂರಿನ ಹಜರತ್ ಬಿಲಾಲ್ ಪುತ್ರ ಇರ್ಫಾನ್(6) ಮೃತ ಬಾಲಕ. ರಂಜಾನ್ ಹಬ್ಬ ಹಿನ್ನೆಲೆ ಮಕ್ಕಳು ಉಪವಾಸ ಇದ್ದರು. ನಂತರ ಜಾಮೀಯಾ ಮಸೀದಿ ಬಳಿ ಪಾನಿಪೂರಿ ಸೇವಿಸಿದ್ದರು.

ಇದನ್ನೂ ಓದಿ:ರಂಜಾನ್​ ಉಪವಾಸ ಅಂತ್ಯ ಮಾಡಿ ಪಾನಿಪುರಿ ಸೇವಿಸಿದ್ದ 19 ಮಕ್ಕಳು ಅಸ್ವಸ್ಥ: ನಾಲ್ವರ ಸ್ಥಿತಿ ಗಂಭೀರ

ವಾಂತಿ, ಭೇದಿ, ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳು

ಇನ್ನು ಅವರು ಕೂಡ ವಾಂತಿ, ಭೇದಿ, ಹೊಟ್ಟೆ ನೋವಿನಿಂದ ಮಕ್ಕಳು ಆಸ್ಪತ್ರೆ ದಾಖಲಾಗಿದ್ದರು. ಆ ಪೈಕಿ ತೀವ್ರ ಅಸ್ವಸ್ಥರಾಗಿದ್ದ ನಾಲ್ವರಿಗೆ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಬಾಲಕ ಇರ್ಫಾನ್ ಸಾವನ್ನಪ್ಪಿದ್ದ. ಗಂಭೀರ ಸ್ಥಿತಿಯಲ್ಲಿದ್ದ ಇನ್ನೂ‌ ಮೂರು ಮಕ್ಕಳು ಸದ್ಯ ಚೇತರಿಸಿಕೊಂಡಿದ್ದು. ಘಟನೆ ಬಳಿಕ ಪಾನಿಪುರಿ ಅಂಗಡಿ‌ ಮಾಲೀಕ ಪರಾರಿ ಆಗಿದ್ದಾನೆ. ಈ ಘಟನೆ ಮಲೆಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:47 pm, Tue, 19 March 24