ರಾಯಚೂರು: ಕುಡಿಯಲು ಹಣ ಕೊಡಲಿಲ್ಲವೆಂದು ಪತ್ನಿಯನ್ನೇ ಕೊಂದ ಪತಿ
ಕುಡಿಯಲು ಹಣ ಕೊಡಲಿಲ್ಲವೆಂದು ಸಲಾಕೆಯಿಂದ ಹೊಡೆದು ಪತ್ನಿಯನ್ನೇ ಪತಿ ಕೊಂದಿರುವಂತಹ ಘಟನೆ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಚಿಕ್ಕ ಉಪ್ಪೇರಿಯಲ್ಲಿ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚೋಳಶೆಟ್ಟಿಹಳ್ಳಿ ಗ್ರಾಮದಲ್ಲಿ ಚಿಕ್ಕಪ್ಪನನ್ನೇ ಮಚ್ಚಿನಿಂದ ಅಣ್ಣನ ಮಗ ಕೊಚ್ಚಿ ಕೊಲೆಗೈದಿರುವಂತಹ ಘಟನೆ ನಡೆದಿದೆ.
ರಾಯಚೂರು, ನವೆಂಬರ್ 27: ಮದ್ಯಪಾನ ಮಾಡಲು ಹಣ ಕೊಡಲಿಲ್ಲ ಎಂದು ಪತ್ನಿಯನ್ನು ಪತಿ (Husband) ಹತ್ಯೆ ಮಾಡಿರುವಂತಹ ಘಟನೆ ಜಿಲ್ಲೆಯ ಲಿಂಗಸ್ಗೂರು ತಾಲ್ಲೂಕಿನ ಚಿಕ್ಕ ಉಪ್ಪೇರಿಯಲ್ಲಿ ನಡೆದಿದೆ. ಸುನೀತಾ (28) ಮರತ ಮಹಿಳೆ. ಬಸವರಾಜ್ ಕೊಲೆಗೈದ ಪತಿ. ಜಮೀನಿನಲ್ಲಿ ಬೆಳಿಗ್ಗೆ ನೀರು ಬಿಡುವಾಗ ಇಬ್ಬರ ನಡುವೆ ಗಲಾಟೆ ಆಗಿದೆ. ಕುಡಿಯುವುದಕ್ಕೆ ಹಣ ನೀಡುವಂತೆ ಪತ್ನಿಗೆ ಕಿರುಕುಳ ನೀಡಿದ್ದಾನೆ. ಆಗ ಹಣ ಕೊಡದಿದ್ದಕ್ಕೆ ಸಲಾಕೆಯಿಂದ ಹೊಡೆದು ಪತ್ನಿಯನ್ನು ಕೊಲೆ ಮಾಡಲಾಗಿದೆ. ಪ್ರೀತಿಸಿ ಮದುವೆಯಾಗಿದ್ದರು. ಸ್ಥಳಕ್ಕೆ ಲಿಂಗಸ್ಗೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಚಿಕ್ಕಪ್ಪನನ್ನೇ ಮಚ್ಚಿನಿಂದ ಕೊಚ್ಚಿ ಕೊಲೆಗೈದ ಅಣ್ಣನ ಮಗ
ಚಿಕ್ಕಬಳ್ಳಾಪುರ: ಚಿಕ್ಕಪ್ಪನನ್ನೇ ಮಚ್ಚಿನಿಂದ ಅಣ್ಣನ ಮಗ ಕೊಚ್ಚಿ ಕೊಲೆಗೈದಿರುವಂತಹ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚೋಳಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹಾಲಿನ ಡೇರಿ ಮುಂಬಾಗದಲ್ಲಿ ಕೊಲೆ ಮಾಡಲಾಗಿದೆ.
ಇದನ್ನೂ ಓದಿ: ಯಾದಗಿರಿ: ಲಾರಿ ಡಿಕ್ಕಿ: ಟಾಟಾ ಏಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು
ರಾಮಕೃಷ್ಣ (50) ಕೊಲೆಯಾದ ವ್ಯಕ್ತಿ. ಅನೈತಿಕ ಸಂಬಂಧ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ರೈತ ಸಾವು
ಚಿಕ್ಕಮಗಳೂರು: ತೆಂಗಿನಕಾಯಿ ಕೀಳಲು ಮರ ಹತ್ತುವಾಗ ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ವಿದ್ಯುತ್ ಶಾಕ್ನಿಂದ ರೈತ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಪಟ್ಟಣಗೆರೆ ಗ್ರಾಮದಲ್ಲಿ ನಡೆದಿದೆ. ಅಭಿಷೇಕ್ (27) ಮೃತ ವ್ಯಕ್ತಿ. ತೆಂಗಿನ ಮರದಿಂದ ಏಣಿ ಬದಲಿಸುವಾಗ ವಿದ್ಯುತ್ ಲೈನ್ಗೆ ಏಣಿ ತಗುಲಿದೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ದೇವಸ್ಥಾನದಲ್ಲಿ ಮತ್ತೆ ಕಳ್ಳತನ: ಬೀಗ ಒಡೆದು ಹುಂಡಿ ಹೊತ್ತೊಯ್ದ ಕಳ್ಳರು
ಮಂಡ್ಯ: ದೇವಸ್ಥಾನದ ಬೀಗ ಒಡೆದು ಕಳ್ಳರು ಮತ್ತೆ ಹುಂಡಿ ಹೊತ್ತೊಯ್ದಿರುವಂತಹ ಘಟನೆ ಜಿಲ್ಲೆಯ ಮಳವಳ್ಳಿ ಪಟ್ಟಣದ ಶಕ್ತಿದೇವತೆ ದಂಡಿನ ಮಾರಮ್ಮ ದೇವಸ್ಥಾನದಲ್ಲಿ ನಡೆದಿದೆ. ಒಂದೇ ತಿಂಗಳಲ್ಲಿ ಎರಡೂ ಬಾರಿ ದೇವಸ್ಥಾನದಲ್ಲಿ ಕಳ್ಳತನ ಮಾಡಲಾಗಿದೆ. ದೇವಸ್ಥಾನದ ಫ್ಯೂಸ್ ಕಿತ್ತು, ದೊಣ್ಣೆಯಲ್ಲಿ ಬಲ್ಬ್ಗಳನ್ನ ಒಡೆದು ಹಾಕಿ ಹಣ ಕಳ್ಳತನ ಮಾಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ಮಾಡಿದ್ದಾರೆ. ಮಳವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.