ರಾಯಚೂರು: ಲಾರಿ ಹರಿದು ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ (death) ಹೊಂದಿರುವಂತಹ ಘಟನೆ ರಾಯಚೂರು ತಾಲೂಕಿನ 7ನೇ ಮೈಲಿ ಬಳಿ ಸಂಭವಿಸಿದೆ. ಹುಣಸೆಹಾಳ ಹುಡಾ ಗ್ರಾಮದ ನಿವಾಸಿಗಳಾದ ಹನುಮೇಶ್(30), ಆಂಜನೇಯ(35) ಮೃತ ದುರ್ದೈವಿಗಳು. ಬೈಕ್ ಸವಾರರಿಬ್ಬರು ತಮ್ಮ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಲಾರಿ ಚಾಲಕನನ್ನು ವಶಕ್ಕೆ ಪಡೆದು ಗ್ರಾಮಾಂತರ ಪೊಲೀಸರಿಂದ ವಿಚಾರಣೆ ನಡೆಸಲಾಗುತ್ತಿದೆ.
ಬಾಗಲಕೋಟೆ: ಲೋಕಾಪುರ ಠಾಣಾ ಪೋಲೀಸರ ಕಾರ್ಯಾಚರಣೆ ಮಾಡಿ ಅಂತರ ಜಿಲ್ಲಾ ಮನೆ ಕಳ್ಳರ ಗ್ಯಾಂಗ್ ಅನ್ನು ಅರೆಸ್ಟ್ ಮಾಡಿದ್ದು, ಬಂಧಿತರಿಂದ 10,47,630 ರೂ. ಮೌಲ್ಯದ ಚಿನ್ನ, ಬೆಳ್ಳಿ ಮತ್ತು ಹಣ ಜಪ್ತಿ ಮಾಡಲಾಗಿದೆ. ಜಿಲ್ಲೆಯ ಮುಧೋಳ ನಗರ, ಲೋಕಾಪುರ, ಚಿಚಖಂಡಿ, ಮೆಟಗುಡ್ಡ, ಸೊರಗಾವಿ, ಶಿರೋಳ ಗ್ರಾಮದಲ್ಲಿ ಕಳ್ಳತನ ನಡೆದಿತ್ತು.
ಇದನ್ನೂ ಓದಿ: ವೈದ್ಯರಿಗೆ ಕೋಟ್ಯಾಂತರ ರೂಪಾಯಿ ವಂಚನೆ: ಮಾರುವೇಷದಲ್ಲಿದ್ದ ಎಕ್ಸ್-ರೇ ತಂತ್ರಜ್ಞ ಅರೆಸ್ಟ್
2022 ಹಾಗೂ 2023 ನೇ ಸಾಲಿನಲ್ಲಿ ನಡೆದ 10 ಕಳ್ಳತನ ಪ್ರಕರಣದಲ್ಲಿ ಮೂರು ಜನ ಆರೋಪಿಗಳ ಬಂಧನ ಮಾಡಲಾಗಿದೆ. ನಾಗಪ್ಪ ಅಲಿಯಾಸ್ ನಾಗ್ಯಾ, ಯಲ್ಲಪ್ಪ ಭೀಮಪ್ಪ ಕಾಂಬಳೆ, ರಾಮಾಚಾರಿ ಈರಪ್ಪ ಗಡ್ಡಿ ಬಂಧಿತರು. ಜಿಲ್ಲೆಯ ಮುಧೋಳ ತಾಲ್ಲೂಕಿನ ಲೋಕಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಹಾವೇರಿ: ವಿವಾಹಕ್ಕೆ ಪೋಷಕರ ವಿರೋಧ ಹಿನ್ನೆಲೆ ಪ್ರೇಮಿಗಳು ಸ್ಲೀಪರ್ ಕೋಚ್ ಬಸ್ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಾವೇರಿಯಲ್ಲಿ ನಡೆದ ಈ ಘಟನೆಯಲ್ಲಿ ಯುವತಿ ಸಾವನ್ನಪ್ಪಿದ್ದು, ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹೇಮಾ ರಾಮಕೃಷ್ಣಪ್ಪ (20) ಮೃತ ಯುವತಿ.
ಇದನ್ನೂ ಓದಿ: Mangaluru News: ಅಕ್ರಮ ಗೋಸಾಗಾಟ, ಮಂಗಳೂರಿನಲ್ಲಿ ನಾಲ್ವರ ಬಂಧನ
ಬಾಗಲಕೋಟೆ ಮೂಲದ ಅಖಿಲ್ ಮತ್ತು ಅಂತಿಮ ವರ್ಷದ ಬಿಕಾಂ ಓದುತ್ತಿದ್ದ ಬೆಂಗಳೂರು ಮೂಲದ ಹೇಮಾ ರಾಮಕೃಷ್ಣಪ್ಪ ಪರಸ್ಪರ ಪ್ರೀತಿಸುತ್ತಿದ್ದು, ಬಾಳುವುದಾದರೆ ಇಬ್ಬರೂ ಜೊತೆಗೆ ಬಾಳುವ ನಿರ್ಣಯ ಮಾಡಿಕೊಂಡು ಮದುವೆಯಾಗಲು ನಿರ್ಧರಿಸಿದ್ದಾರೆ. ಆದರೆ ಪ್ರೇಮ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ನೊಂದ ಅಖಿಲ್ ಮತ್ತು ಹೇಮಾ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದರು.
ತಮ್ಮ ಪ್ರೇಮ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ನೊಂದ ಪ್ರೇಮಿಗಳು ಸ್ಲೀಪರ್ ಕೋಚ್ ಬಸ್ ಹತ್ತಿದ್ದಾರೆ. ನಂತರ ವಿಷ ಸೇವಿಸಿಕೊಂಡ ಅಖಿಲ್ ಮತ್ತು ಹೇಮಾ ನಿದ್ರಿಸಿದ್ದಾರೆ. ಊಟಕ್ಕೆಂದು ಮಾರ್ಗಮಧ್ಯೆ ಹೋಟೆಲ್ ಬಳಿ ಬಸ್ ನಿಲ್ಲಿಸಿದ್ದಾಗ ವಿಷದ ವಾಸನೆ ಬರುವುದನ್ನು ಗಮನಿಸಿದ ಪ್ರಯಾಣಿಕರು ಪರಿಶೀಲನೆ ನಡೆಸಿದಾಗ ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದೆ.
Published On - 8:21 pm, Tue, 6 June 23