ರಾಯಚೂರು ಓಪೆಕ್ ಆಸ್ಪತ್ರೆ ನಿರ್ಲಕ್ಷ್ಯ; ಗಾಯಾಳು ಮಹಿಳೆಯ ತಲೆಯಲ್ಲಿ ಹುಳುಗಳು ಪತ್ತೆ!

ರಾಯಚೂರಿನ ಸರ್ಕಾರಿ ಓಪೆಕ್ ಆಸ್ಪತ್ರೆಯಲ್ಲಿ ವೈದ್ಯರ ಹಾಗೂ ಸಿಬ್ಬಂದಿಯ ಘೋರ ನಿರ್ಲಕ್ಷ್ಯ ಮುನ್ನೆಲೆಗೆ ಬಂದಿದೆ. ಅಪಘಾತದಲ್ಲಿ ಗಾಯಗೊಂಡು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಗೆ ಸರಿಯಾಗಿ ಡ್ರೆಸ್ಸಿಂಗ್ ಮಾಡದ ಕಾರಣ ತಲೆಯ ಗಾಯದಲ್ಲಿ ಹುಳುಗಳು ಪತ್ತೆಯಾಗಿವೆ. ಸೂಕ್ತ ಚಿಕಿತ್ಸೆ ನೀಡದೆ ಕಾಲಹರಣ ಮಾಡುತ್ತಿರುವ ಸಿಬ್ಬಂದಿ ಹಾಗೂ ತಜ್ಞ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ತಕ್ಷಣವೇ ಕಠಿಣ ಕ್ರಮಕ್ಕೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ರಾಯಚೂರು ಓಪೆಕ್ ಆಸ್ಪತ್ರೆ ನಿರ್ಲಕ್ಷ್ಯ; ಗಾಯಾಳು ಮಹಿಳೆಯ ತಲೆಯಲ್ಲಿ ಹುಳುಗಳು ಪತ್ತೆ!
ಗಾಯಾಳು ಮಹಿಳೆಯ ತಲೆಯಲ್ಲಿ ಹುಳುಗಳು ಪತ್ತೆ!
Edited By:

Updated on: Oct 14, 2026 | 10:01 AM

ಮುಖ್ಯಾಂಶಗಳು

  • ರಾಯಚೂರು ಓಪೆಕ್ ಆಸ್ಪತ್ರೆ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ.
  • ಐಸಿಯುನಲ್ಲಿದ್ದ ಗಾಯಾಳು ಮಹಿಳೆಯ ತಲೆಯ ಗಾಯದಲ್ಲಿ ಹುಳುಗಳು ಪತ್ತೆಯಾಗಿರುವ ಆಘಾತಕಾರಿ ಘಟನೆ.
  • ತಜ್ಞ ವೈದ್ಯರಿಲ್ಲದೆ ಆಸ್ಪತ್ರೆಯಲ್ಲಿ ರೋಗಿಗಳು ಅನುಭವಿಸುತ್ತಿರುವ ಶೋಚನೀಯ ಪರಿಸ್ಥಿತಿ ಬಿಚ್ಚಿಟ್ಟ ಸಾರ್ವಜನಿಕರು.

ರಾಯಚೂರು, ಅಕ್ಟೋಬರ್ 14: ರೋಗಿಗಳಿಗೆ ಉತ್ತಮ ಹಾಗೂ ಗುಣಮಟ್ಟದ ವೈದ್ಯಕೀಯ ಸೇವೆ ನೀಡಬೇಕಾದ ರಾಯಚೂರಿನ ಸರ್ಕಾರಿ ಓಪೆಕ್ ಆಸ್ಪತ್ರೆಯಲ್ಲಿ ಸಿಬ್ಬಂದಿಯ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯ ಮುನ್ನೆಲೆಗೆ ಬಂದಿದೆ. ಅಪಘಾತದಲ್ಲಿ ಗಾಯಗೊಂಡು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರ ತಲೆಯಲ್ಲಿ ಹುಳುಗಳು ಪತ್ತೆಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೂರು ತಿಂಗಳಾದರೂ ಸೂಕ್ತ ಚಿಕಿತ್ಸೆ ಇಲ್ಲ

ಯಾದಗಿರಿ ಮೂಲದ ಮಹೇಶ್ವರಿ (30) ಎಂಬುವವರು ಅಕ್ಟೋಬರ್ 9ರಂದು ಸಂಭವಿಸಿದ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ರಾಯಚೂರಿನ ಸರ್ಕಾರಿ ಓಪೆಕ್ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್‌ನ ಐಸಿಯುನಲ್ಲಿ ದಾಖಲಿಸಲಾಗಿತ್ತು. ಆದರೆ ಕಳೆದ ಮೂರು ದಿನಗಳಿಂದ ಆಕೆಗೆ ತಜ್ಞ ವೈದ್ಯರಿಂದ ಯಾವುದೇ ಸೂಕ್ತ ಚಿಕಿತ್ಸೆ ದೊರೆತಿಲ್ಲ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಶುಕ್ರವಾರ ರಾತ್ರಿ ಬ್ಯಾಂಡೇಜ್ ಮಾಡಿದ ಸಿಬ್ಬಂದಿ, ನಂತರ ಸರಿಯಾಗಿ ಡ್ರೆಸ್ಸಿಂಗ್ ಮಾಡಿಲ್ಲ. ಇದರ ಪರಿಣಾಮವಾಗಿ ಸ್ಕ್ಯಾನಿಂಗ್ ವೇಳೆ ಮಹಿಳೆಯ ತಲೆಯ ಗಾಯದ ಜಾಗದಲ್ಲಿ ಹುಳುಗಳು ಹೊರಬಂದಿದ್ದು, ಇದನ್ನು ಕಂಡು ಕುಟುಂಬಸ್ಥರು ಬೆಚ್ಚಿಬಿದ್ದಿದ್ದಾರೆ.

ಐಸಿಯು ರೋಗಿಗಳಿಗಿಲ್ಲ ಫ್ಯಾನ್!

ತಜ್ಞ ವೈದ್ಯರು ರಜೆಯಲ್ಲಿದ್ದಾರೆ ಎಂದು ಹೇಳುತ್ತಾ ಸಿಬ್ಬಂದಿ ಕಾಲಹರಣ ಮಾಡಿದ್ದರಿಂದಲೇ ರೋಗಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ಕನಿಷ್ಠ ಮಾನವೀಯತೆಯೂ ಇಲ್ಲದಂತಾಗಿದೆ. ಸ್ಕ್ಯಾನಿಂಗ್‌ಗಾಗಿ ರೋಗಿಗಳು ಗಂಟೆಗಟ್ಟಲೇ ಕಾಯಬೇಕಾದ ಪರಿಸ್ಥಿತಿಯಿದೆ. ಇತ್ತ ಐಸಿಯು ವಾರ್ಡ್‌ನಲ್ಲಿ ಫ್ಯಾನ್‌ಗಳೂ ಇಲ್ಲದೆ, ರೋಗಿಗಳಿಗೆ ಅವರ ಸಂಬಂಧಿಕರು ಸೀರೆಯ ಸೆರಗಿನಿಂದ ಗಾಳಿ ಬೀಸುವಂತಹ ಶೋಚನೀಯ ಸ್ಥಿತಿ ನಿರ್ಮಾಣವಾಗಿದೆ.

ಕೂಡಲೇ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಆರೋಗ್ಯ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಂಡು, ಕರ್ತವ್ಯಲೋಪ ಎಸಗಿರುವ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಜೊತೆಗೆ, ಆಸ್ಪತ್ರೆಯಲ್ಲಿ ರೋಗಿಗೆ ಅತ್ಯುತ್ತಮ ಚಿಕಿತ್ಸೆ ನೀಡಿ, ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:49 am, Wed, 14 October 26

ಭೀಮೇಶ್​​ ಪೂಜಾರ್

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
Loading...
Unable to load recommendations.
Follow Us