ರಾಯಚೂರಿನ ಪಟಾಕಿ ಗೋಡೌನ್​ಗಳ ಮೇಲೆ ಪೊಲೀಸರ ದಾಳಿ; 24 ಲಕ್ಷ ಮೌಲ್ಯದ ಪಟಾಕಿ ಜಪ್ತಿ

ಪರವಾನಗಿ ಇಲ್ಲದೆ ಅಕ್ರಮವಾಗಿ ಪಟಾಕಿ ದಾಸ್ತಾನು ಮಾಡಿದ್ದ ರಾಯಚೂರಿನ ಬೆಸ್ತವಾರಪೇಟೆಯ ರಮೇಶ್ ಮನೆ ಮೇಲೆ ಸದರ್ ಬಜಾರ್ ಠಾಣಾ ಪೊಲೀಸರು ದಾಳಿ ಮಾಡಿದ್ದು, 50 ಸಾವಿರ ಮೌಲ್ಯದ 30 ಕೆಜಿ ಪಟಾಕಿ ವಶಕಪಡಿಸಿಕೊಂಡಿದ್ದಾರೆ.

ರಾಯಚೂರಿನ ಪಟಾಕಿ ಗೋಡೌನ್​ಗಳ ಮೇಲೆ ಪೊಲೀಸರ ದಾಳಿ; 24 ಲಕ್ಷ ಮೌಲ್ಯದ ಪಟಾಕಿ ಜಪ್ತಿ
ಪಟಾಕಿ ಜಪ್ತಿ ಮಾಡಿದ ಪೊಲೀಸರು
Follow us
ಭೀಮೇಶ್​​ ಪೂಜಾರ್
| Updated By: ವಿವೇಕ ಬಿರಾದಾರ

Updated on:Oct 14, 2023 | 8:59 AM

ರಾಯಚೂರು ಅ.14: ಬೆಂಗಳೂರಿನಲ್ಲಿ ಪಟಾಕಿ ದುರಂತ ಪ್ರಕರಣ ಬೆನ್ನಲ್ಲೆ ರಾಯಚೂರಿನಲ್ಲಿ ಅಲರ್ಟ್ ಆದ ಪೊಲೀಸರು ಅಕ್ರಮವಾಗಿ ಪಟಾಕಿ (Firecracker) ದಾಸ್ತಾನು ಮಾಡಿದ್ದ ಗುಂಜಳ್ಳಿ ಗ್ರಾಮದ ಹಾಗೂ ರಾಯಚೂರು (Raichur) ನಗರದ ಸದರ್ ಬಜಾರ್​​ನ ಗೋಡೌನ್​​ಗಳ (Firecracker Godown) ​​ಮೇಲೆ ದಾಳಿ ಮಾಡಿದ್ದಾರೆ. ಪರವಾನಗಿ ಇಲ್ಲದೆ ಅಕ್ರಮವಾಗಿ ಪಟಾಕಿ ದಾಸ್ತಾನು ಮಾಡಿದ್ದ ರಾಯಚೂರಿನ ಬೆಸ್ತವಾರಪೇಟೆಯ ರಮೇಶ್ ಮನೆ ಮೇಲೆ ನಗರದ ಸದರ್ ಬಜಾರ್ ಠಾಣಾ ಪೊಲೀಸರು ದಾಳಿ ಮಾಡಿದ್ದು, 50 ಸಾವಿರ ಮೌಲ್ಯದ 30 ಕೆಜಿ ಪಟಾಕಿ ವಶಕಪಡಿಸಿಕೊಂಡಿದ್ದಾರೆ.

ಇನ್ನು ಸಿಂಧನೂರು ತಾಲೂಕಿನ ಗುಂಜಳ್ಳಿ‌ ಗ್ರಾಮದ ನಾಗರಾಜ್ ಎಂಬುವರ ಮನೆ ಮೇಲೂ ಪೊಲೀಸರು ದಾಳಿ ಮಾಡಿದ್ದು, ದಾಳಿ ವೇಳೆ 24 ಲಕ್ಷ ಮೌಲ್ಯದ 1,141 ಕೆಜಿ ವಿವಿಧ ಮಾದರಿಯ ಪಟಾಕಿ ಜಪ್ತಿ ಮಾಡಿಕೊಂಡಿದ್ದಾರೆ. ತುರ್ವಿಹಾಳ ಪೊಲೀಸರು ನಾಗರಾಜನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಎರಡೂ ದಾಳಿ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳು‌ ದಾಖಲಾಗಿವೆ. ಐಪಿಸಿ ಸೆಕ್ಷನ್ 286, 336 ಹಾಗೂ 9(ಬಿ)ಸ್ಫೋಟಕ ಕಾಯ್ದೆ 1884 ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಸರ್ಕಾರ ಸೂಚನೆ ಬೆನ್ನಲ್ಲೇ ಹಲವೆಡೆ ರೇಡ್; ಅಕ್ರಮವಾಗಿ ದಾಸ್ತಾನು ಮಾಡಿದ್ದ ಲಕ್ಷಾಂತರ ರೂ. ಮೌಲ್ಯದ ಪಟಾಕಿ ಜಪ್ತಿ

ರಾಜ್ಯಾದ್ಯಂತ ಇರುವ ಪಟಾಕಿ ಅಂಗಡಿ ಪರಿಶೀಲನೆಗೆ ಸರ್ಕಾರ​​ ಸೂಚನೆ

ಗಣೇಶ ಚತುರ್ಥಿ, ದೀಪಾವಳಿ ಸಾಲು ಸಾಲು ಹಬ್ಬ ಹಿನ್ನೆಲೆಯಲ್ಲಿ ಗೋದಾಮಿನಲ್ಲಿ ಪಟಾಕಿ ಸಂಗ್ರಹಿಸಲು ಮಾಲಿಕರು ಶರುಮಾಡಿಕೊಂಡಿದ್ದಾರೆ. ಆದರೆ ಪ್ರಾಥಮಿಕ ಮಾಹಿತಿ ಪ್ರಕಾರ ಯಾವುದೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದ ಹಿನ್ನೆಲೆಯಲ್ಲಿ ಪಟಾಕಿ ಗೋಡೌನ್​​ಗಳಲ್ಲಿ ಅಗ್ನಿ ಅವಘಡ ಸಂಭವಿಸುತ್ತಿವೆ. ಈ ಹಿಂದೆ ಹಾವೇರಿ ಹೊರವಲಯದ ಸಾತೇನಹಳ್ಳಿ ಬಳಿ ಕುಮಾರ್​ ಎಂಬುವವರಿಗೆ ಸೇರಿದ ಭೂಮಿಕಾ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ನಾಲ್ವರು ಮೃತಪಟ್ಟಿದ್ದರು. ಘಟನೆ ನಡೆದು ಎರಡುವರೆ ತಿಂಗಳಲ್ಲಿ ಅತ್ತಿಬೆಲೆ ಬಾಲಾಜಿ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿ 14 ಜನ ಸಾವಿಗೀಡಾಗಿದ್ದಾರೆ. ಇದರಿಂದ ಎಚ್ಚತ್ತ ರಾಜ್ಯ ಸರ್ಕಾರ ರಾಜ್ಯಾದ್ಯಂತ ಇರುವ ಪಟಾಕಿ ಅಂಗಡಿಗಳನ್ನು ಪರಿಶೀಲಿಸುವಂತೆ ಸೂಚನೆ ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:53 am, Sat, 14 October 23

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?