ರಾಯಚೂರು: ನೀರಾವರಿ ಅಧಿಕಾರಿಗಳಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್

ಕಾಲುವೆ ಪರಿಶೀಲನೆ ವೇಳೆ ಅಧಿಕಾರಿಗಳ ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ಈ ವಿಚಾರವಾಗಿ ಅಧಿಕಾರಿಗಳನ್ನು ತರಾಟೆಗೆ ತೆಗದುಕೊಂಡ ಶಾಸಕರು, ---- ಪದಗಳಿಂದ ಪುರುಷ ಅಧಿಕಾರಿಗೆ ಬೈದಿದ್ದಾರೆ. ಇಷ್ಟೇ ಅಲ್ಲದೆ, ರೈತರಿಂದ ಚಪ್ಪಲಿಯಿಂದ ಹೊಡೆಸುತ್ತೇನೆ ಎಂದು ಮಹಿಳಾ ಅಧಿಕಾರಿಗೆ ಎಚ್ಚರಿಕೆ ನೀಡಿದ್ದಾರೆ.

Follow us
ಭೀಮೇಶ್​​ ಪೂಜಾರ್
| Updated By: Ganapathi Sharma

Updated on:Oct 19, 2023 | 9:42 PM

ರಾಯಚೂರು, ಅಕ್ಟೋಬರ್ 19: ರಾಯಚೂರು ಗ್ರಾಮೀಣ ಕಾಂಗ್ರೆಸ್ ಶಾಸಕ (Congress MLA) ಬಸನಗೌಡ ದದ್ದಲ್ (Basanagouda Daddal) ಅವರು ನೀರಾವರಿ ಅಧಿಕಾರಿಗಳಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ವಿಡಿಯೋ ವೈರಲ್ ಆಗಿದೆ. ರೈತರ ಕಷ್ಟಕ್ಕೆ ನೀರಾವರಿ‌ ಅಧಿಕಾರಿಗಳು ಸ್ಪಂದಿಸದ ವಿಚಾರವಾಗಿ ಶಾಸಕರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದೇ ವೇಳೆ ಸಿಟ್ಟಾದ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಕಾಲುವೆಗೆ ನೀರು ಹರಿಸೋ ಬಗ್ಗೆ ಅಧಿಕಾರಿಗಳ ಕಳ್ಳಾಟದ ವಿರುದ್ಧ ಅವರು ಕೋಪಗೊಂಡಿದ್ದರು. ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದ ಐಬಿಯಲ್ಲಿ ಘಟನೆ ನಡೆದಿದೆ.

ಕಾಲುವೆ ಪರಿಶೀಲನೆ ವೇಳೆ ಅಧಿಕಾರಿಗಳ ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ಈ ವಿಚಾರವಾಗಿ ಅಧಿಕಾರಿಗಳನ್ನು ತರಾಟೆಗೆ ತೆಗದುಕೊಂಡ ಶಾಸಕರು, —- ಪದಗಳಿಂದ ಪುರುಷ ಅಧಿಕಾರಿಗೆ ಬೈದಿದ್ದಾರೆ. ಇಷ್ಟೇ ಅಲ್ಲದೆ, ರೈತರಿಂದ ಚಪ್ಪಲಿಯಿಂದ ಹೊಡೆಸುತ್ತೇನೆ ಎಂದು ಮಹಿಳಾ ಅಧಿಕಾರಿಗೆ ಎಚ್ಚರಿಕೆ ನೀಡಿದ್ದಾರೆ. ತುಂಗಭದ್ರಾ ಎಡದಂಡೆ ಕಾಲುವೆ ಇಇ ಸತ್ಯನಾರಾಯಣ ಶೆಟ್ಟಿ ಹಾಗೂ ಸಿರವಾರ ವಿಭಾಗದ ಎಇಇ ವಿಜಯಲಕ್ಷ್ಮಿ ಪಾಟೀಲ್ ಮೇಲೆ ಸಚಿವರು ಗರಂ ಆಗಿದ್ದಾರೆ.

7 ಕಡೆ ಡಿಸ್ಟ್ರಿಬೂಟರ್ ಗೇಟ್ ಮುರಿದು ಹಾಕಿರೊ ಹಿನ್ನೆಲೆ ಕೆಳ ಭಾಗದ ರೈತರಿಗೆ ನೀರು ತಲುಪಿರಲಿಲ್ಲ. ಗೇಟ್ ಮುರಿದು ಇಷ್ಟೂ ದಿನವಾದ್ರೂ ದುರಸ್ಥಿ ಮಾಡಿಲ್ಲದ ಬಗ್ಗೆ ಶಾಸಕರು ಅಧಿಕಾರಿಗಳ ವಿರುದ್ಧ ಹರಿಹಾಯ್ದರು. ದುರಸ್ಥಿ ಕಾರ್ಯ ಮಾಡದ ಹಿನ್ನೆಲೆ ಕೆಳ ಭಾಗದ ಮಾನ್ವಿ, ಸಿರವಾರ, ರಾಯಚೂರು ತಾಲ್ಲೂಕಿನ ಭಾಗಕ್ಕೆ ನೀರು ತಲುಪಿರಲಿಲ್ಲ.

ಇದನ್ನೂ ಓದಿ: ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್​ಐಆರ್ ದಾಖಲು, ಏನಿದು ಪ್ರಕರಣ?

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿರುವ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್ ವಿಡಿಯೋ ವೈರಲ್ ಆಗಿದೆ. ಹರೀಶ್ ಪೂಂಜಾ ಅವರ ವಿರುದ್ಧ ಅರಣ್ಯಾಧಿಕಾರಿಗಳು ನೀಡಿದ ದೂರಿನ ಅನ್ವಯ ಎಫ್​ಐಆರ್​ ದಾಖಲಿಸಲಾಗಿದೆ. ಅರಣ್ಯಾಧಿಕಾರಿಗಳು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೂ ದೂರು ನೀಡಿದ್ದಾರೆ. ಇದರ ವಿರುದ್ಧ ಬಿಜೆಪಿ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಬಸನಗೌಡ ದದ್ದಲ್ ಅಧಿಕಾರಿಗಳ ವಿರುದ್ಧ ಅವಾಚ್ಯ ಶಬ್ದಗಳಲ್ಲಿ ನಿಂದಿಸಿದ್ದು, ಇದು ಕೂಡ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:09 pm, Thu, 19 October 23

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್