Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನಲ್ಲಿ ಮತ್ತೋರ್ವ ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ರಾಯಚೂರು ಜಿಲ್ಲೆಯಲ್ಲಿ ಫೆ. 05ರಂದು 2ನೇ ತರಗತಿ ಬಾಲಕಿ ಮೇಲೆ ನಡೆದ ಅತ್ಯಾಚಾರ ಮಾಸುವ ಮುನ್ನವೇ ಇದೀಗ ಮತ್ತೊಂದು ಹೇಯ ಕೃತ್ಯ ನಡೆದಿದೆ. ಆರನೇ ತರಗತಿಯ ಬಾಲಕಿಯ ಮೇಲೆ 43 ವರ್ಷದ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಸ್ಥಳೀಯರ ಸಹಾಯದಿಂದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ರಾಯಚೂರಿನಲ್ಲಿ ಮತ್ತೋರ್ವ ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ
ರಾಯಚೂರಿನಲ್ಲಿ ಮತ್ತೋರ್ವ ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ
Follow us
ಭೀಮೇಶ್​​ ಪೂಜಾರ್
| Updated By: ಗಂಗಾಧರ​ ಬ. ಸಾಬೋಜಿ

Updated on:Feb 10, 2025 | 10:41 PM

ರಾಯಚೂರು, ಫೆಬ್ರವರಿ 10: ಜಿಲ್ಲೆಯಲ್ಲಿ ಮತ್ತೊಬ್ಬ ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವಂತಹ (sexual assault) ಘಟನೆ ನಡೆದಿದೆ. ಮಾನಸಿಕ ಅಸ್ವಸ್ಥೆಯಾಗಿರುವ ಆರನೇ ತರಗತಿ ವಿದ್ಯಾರ್ಥಿನಿ ಮೇಲೆ 43 ವರ್ಷದ ಚಂದ್ರಶೇಖರ್​ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಜಿಲ್ಲೆಯ ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ. ಸದ್ಯ ಆರೋಪಿ‌ ಚಂದ್ರಶೇಖರ್​ನನ್ನು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಹಟ್ಟಿ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ಸಂತ್ರಸ್ತ ಬಾಲಕಿ ಆರನೇ ತರಗತಿ ವ್ಯಾಸಂಗ ಮಾಡುತ್ತಿದ್ದಾಳೆ. ಶಾಲೆಯಲ್ಲಿ‌ ಮಧ್ಯಾಹ್ನ ಊಟಕ್ಕೆ ಬಿಟ್ಟಾಗ ಚಾಕೊಲೇಟ್ ಕೊಡಿಸಿ ಬಾಲಕಿಯನ್ನ ಚಂದ್ರಶೇಖರ್ ಕರೆದೊಯ್ದಿದ್ದಾನೆ. ತನ್ನ ಮನೆಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಇದನ್ನೂ ಓದಿ: ರಾಯಚೂರು: ಅಪರಿಚಿತನೊಂದಿಗೆ ಮಗುವನ್ನು ಕಳುಹಿಸಿ ಶಾಲಾ ಸಿಬ್ಬಂದಿ, 2ನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ

ಸ್ಥಳೀಯರ ಮಾಹಿತಿ ಮೆರೆಗೆ ಹಟ್ಟಿ ಪೊಲೀಸ್ ಇನ್ಸ್ ಪೆಕ್ಟರ್ ಹೊಸಕೇರಪ್ಪರಿಂದ ಕಾರ್ಯಾಚರಣೆ ಮಾಡಿ, ಚಂದ್ರಶೇಖರ್ ಮನೆಗೆ ಬಂದ ಪೊಲೀಸರು​ ಬಾಗಿಲು ತಟ್ಟಿದರೂ ತೆಗೆದಿಲ್ಲ. ಬಳಿಕ ಬಾಗಿಲು ಮುರಿದು ಒಳನುಗ್ಗಿದ ಪೊಲೀಸರು ಬಾಲಕಿ ರಕ್ಷಿಸಿದ್ದಾರೆ.

ಇನ್ನು ಇದೇ ಫೆಬ್ರವರಿ 5 ರಂದು ಎರಡನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದ ಕೃತ್ಯ ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಆರೋಪಿ ಶಿವನಗೌಡ ಸಂತ್ರಸ್ತೆ ಬಾಲಕಿಯನ್ನು ಶಾಲೆಯಿಂದ ಮನೆಗೆ ಕರೆದುಕೊಂಡಿ ಹೋಗುವುದಾಗಿ ನೆಪಮಾಡಿ ಕರೆದುಕೊಂಡು ಹೋಗಿದ್ದ. ನಂತರ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ.

ಇದನ್ನೂ ಓದಿ: ಥಿನ್ನರ್ ಸೇವಿಸಿ ಬಾಲಕ ಸಾವು: ಜಾತ್ರೆ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಸೂತಕದ ಛಾಯೆ

ಪ್ರಕರಣದಲ್ಲಿ ಅತ್ಯಾಚಾರ ಆರೋಪಿ ಶಿವನಗೌಡ ಹಾಗೂ ಖಾಸಗಿ ಶಾಲೆಯ ವ್ಯವಸ್ಥಾಪಕ ರಾಜು ತಾಳಿಕೋಟೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದರು. ಸಂತ್ರಸ್ತೆ ಬಾಲಕಿಯನ್ನು ಅಪರಿಚಿತರೊಂದಿಗೆ ಕಳುಹಿಸಿದಕ್ಕೆ ಶಾಲಾ ಸಿಬ್ಬಂದಿ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:40 pm, Mon, 10 February 25