ಸಿಂಧನೂರು ಅಪಘಾತ: ಮಂತ್ರಾಲಯ ಸಂಸ್ಕೃತ ಪಾಠ ಶಾಲೆಯ ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರ ಸಾವು

ರಾಯಚೂರು ಜಿಲ್ಲೆಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಸಿಂಧನೂರಿನ ಅರಗಿನಮರ ಕ್ಯಾಂಪ್ ಬಳಿ ಕ್ರೂಸರ್ ವಾಹನದ ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾಗಿ ದುರ್ಘಟನೆ ಸಂಭವಿಸಿದೆ. ಸುಮಾರು 10 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತ ಮಾಹಿತಿ ಇಲ್ಲಿದೆ.

ಸಿಂಧನೂರು ಅಪಘಾತ: ಮಂತ್ರಾಲಯ ಸಂಸ್ಕೃತ ಪಾಠ ಶಾಲೆಯ ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರ ಸಾವು
ಪಲ್ಟಿಯಾದ ವಾಹನ
Follow us
ಭೀಮೇಶ್​​ ಪೂಜಾರ್
| Updated By: Ganapathi Sharma

Updated on:Jan 22, 2025 | 9:50 AM

ರಾಯಚೂರು, ಜನವರಿ 22: ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಿಂಧನೂರು (Sindhanur) ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ನಡೆದಿದೆ. ಕ್ರೂಸರ್ ಚಾಲಕ ಶಿವ (24), ಮಂತ್ರಾಲಯದ (Mantralaya) ಸಂಸ್ಕೃತ ಪಾಠ ಶಾಲೆಯ ವಿದ್ಯಾರ್ಥಿಗಳಾದ ಅಯ್ಯವಂದನ್ (18), ಸುಜೇಂದ್ರ (22) ಹಾಗೂ ಅಭಿಲಾಷ್​(20) ಮೃತ ದುರ್ದೈವಿಗಳು. 10 ಜನರಿಗೆ ಗಂಭೀರ ಗಾಯವಾಗಿದ್ದು, ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಂಧನೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂತ್ರಾಲಯದಿಂದ ಹಂಪಿಯ ನರಹರಿ ಆರಾಧನೆಗೆ ತೆರಳಿದ್ದ ವಾಹನ ಅಪಘಾಕ್ಕೀಡಾಗಿದೆ.

ಹೆಚ್ಚಿನ ಮಾಹಿತಿ ಅಪ್ಡೇಟ್​ ಆಗುತ್ತಿದೆ…

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:37 am, Wed, 22 January 25