ರಾಯಚೂರು, ಜನವರಿ 22: ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಿಂಧನೂರು (Sindhanur) ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ನಡೆದಿದೆ. ಕ್ರೂಸರ್ ಚಾಲಕ ಶಿವ (24), ಮಂತ್ರಾಲಯದ (Mantralaya) ಸಂಸ್ಕೃತ ಪಾಠ ಶಾಲೆಯ ವಿದ್ಯಾರ್ಥಿಗಳಾದ ಅಯ್ಯವಂದನ್ (18), ಸುಜೇಂದ್ರ (22) ಹಾಗೂ ಅಭಿಲಾಷ್(20) ಮೃತ ದುರ್ದೈವಿಗಳು. 10 ಜನರಿಗೆ ಗಂಭೀರ ಗಾಯವಾಗಿದ್ದು, ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಂಧನೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂತ್ರಾಲಯ ಸಂಸ್ಕೃತ ಪಾಠಶಾಲೆಯ ವಿದ್ಯಾರ್ಥಿಗಳು ನರಹರಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಹಂಪಿಗೆ ಯಾತ್ರೆ ಹೊರಟಿದ್ದರು. ಇದೇ ವೇಳೆ ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ: ಯಲ್ಲಾಪುರ: ಗುಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ, 10 ಜನ ಸಾವು
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:37 am, Wed, 22 January 25