AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋದಿಂದ ಬಿದ್ದ ವಿದ್ಯಾರ್ಥಿ ಮೇಲೆ ಹರಿದ ಬಸ್; ಯುವಕ ಸ್ಥಳದಲ್ಲೇ ಸಾವು!

ರಾಯಚೂರು ನಗರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಿಎಸ್‌ಸಿ ವಿದ್ಯಾರ್ಥಿ ಬಸವರಾಜ್ ಸಾವನ್ನಪ್ಪಿದ್ದಾರೆ. ಆಟೋದಿಂದ ಬಿದ್ದ ಕೂಡಲೆ ಬಸ್ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಡುಬಡವರಾಗಿದ್ದ ಬಸವರಾಜ್ ಕೇಟರಿಂಗ್ ಕೆಲಸ ಮಾಡಿ ವಿದ್ಯಾಭ್ಯಾಸ ಮುಂದುವರಿಸುತ್ತಿದ್ದರು. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕುಟುಂಬಸ್ಥರು ಪರಿಹಾರಕ್ಕೆ ಆಗ್ರಹಿಸಿದ್ದಾರೆ.

ಆಟೋದಿಂದ ಬಿದ್ದ ವಿದ್ಯಾರ್ಥಿ ಮೇಲೆ ಹರಿದ ಬಸ್; ಯುವಕ ಸ್ಥಳದಲ್ಲೇ ಸಾವು!
ಆಟೋದಿಂದ ಬಿದ್ದ ವಿದ್ಯಾರ್ಥಿ ಮೇಲೆ ಹರಿದ ಬಸ್; ಯುವಕ ಸ್ಥಳದಲ್ಲೇ ಸಾವು!
ಭೀಮೇಶ್​​ ಪೂಜಾರ್
| Edited By: |

Updated on: Mar 01, 2026 | 12:40 PM

Share

ರಾಯಚೂರು, ಮಾರ್ಚ್ 01: ರಾಯಚೂರು ನಗರದ ಸ್ಟೇಷನ್ ರಸ್ತೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Accident) ಬಡ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ವೇಗದಲ್ಲಿದ್ದ ಆಟೋದಿಂದ ಕೆಳಕ್ಕೆ ಬಿದ್ದ ವಿದ್ಯಾರ್ಥಿ ಮೇಲೆ ಬಸ್ ಹರಿದಿದ್ದು, ಬಸವರಾಜ್ (21) ಎಂಬ ಬಿಎಸ್‌ಸಿ ಅಂತಿಮ ವರ್ಷದ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಭಯಾನಕ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕೇಟರಿಂಗ್ ಕೆಲಸಕ್ಕೆ ಹೋಗುವಾಗ ಘಟನೆ

ಬಸವರಾಜ್ ಆಶಾಪುರ ರಸ್ತೆಯಿಂದ ಬಸವೇಶ್ವರ ವೃತ್ತದ ಮಾರ್ಗವಾಗಿ ಸ್ನೇಹಿತರೊಂದಿಗೆ ಆಟೋದಲ್ಲಿ ಪ್ರಯಾಣಿಸುತ್ತಿದ್ದ. ಮುಖ್ಯರಸ್ತೆಯಲ್ಲಿ ನಿಂತಿದ್ದ ಮತ್ತೊಂದು ಆಟೋವನ್ನು ತಪ್ಪಿಸಲು ಚಾಲಕ ಏಕಾಏಕಿ ಕಟ್ ಹೊಡೆದ ವೇಳೆ ನಿಯಂತ್ರಣ ಕಳೆದುಕೊಂಡ ವಿದ್ಯಾರ್ಥಿ ಆಟೋದಿಂದ ಕೆಳಕ್ಕೆ ಬಿದ್ದಿದ್ದಾನೆ. ಇದೇ ಸಮಯದಲ್ಲಿ ಹಿಂಬದಿಯಿಂದ ಬರುತ್ತಿದ್ದ ಬಸ್ ಅವನ ಮೇಲೆ ಹರಿದಿದೆ. ಬಸ್ ಹರಿದ ರಭಸಕ್ಕೆ ತೀವ್ರವಾಗಿ ಗಾಯಗೊಂಡ ಬಸವರಾಜ್ ಕ್ಷಣಾರ್ಧದಲ್ಲೇ ಮೃತಪಟ್ಟಿದ್ದಾನೆ. ಘಟನೆ ಸಂಪೂರ್ಣವಾಗಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಸಾರಿಗೆ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಮೃತ ಬಸವರಾಜ್ ಎಸ್‌ಟಿ ಹಾಸ್ಟೆಲ್‌ನಲ್ಲಿ ವಾಸವಿದ್ದು, ಮನೆಯ ಕಡುಬಡತನದ ನಡುವೆಯೂ ವಿದ್ಯಾಭ್ಯಾಸ ಮುಂದುವರಿಸುತ್ತಿದ್ದನು. ಖಾಲಿ ಸಮಯದಲ್ಲಿ ಕೇಟರಿಂಗ್ ಕೆಲಸ ಮಾಡಿ ದಿನಗೂಲಿ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಕೇಟರಿಂಗ್ ಕೆಲಸಕ್ಕೆ ತೆರಳುವಾಗ ಈ ದುರಂತ ಸಂಭವಿಸಿದೆ. ಪರಿಹಾರ ನೀಡುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us