ರಾಯಚೂರಿನಲ್ಲಿ ಟ್ರಾಕ್ಟರ್ ಚಾಲಕನ ಮೇಲೆ ಹಲ್ಲೆ ಪ್ರಕರಣ: ಪಿಎಸ್ಐ ವಿರುದ್ಧ ಎಫ್ಐಆರ್ ದಾಖಲು
ಟ್ರಾಕ್ಟರ್ ಚಾಲಕನ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಮಣಿಕಂಠ ವಿರುದ್ಧ ಮಸ್ಕಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ರಾಯಚೂರು ಸೆ.23: ಟ್ರಾಕ್ಟರ್ (Tractor) ಚಾಲಕನ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ (PSI) ಮಣಿಕಂಠ ವಿರುದ್ಧ ಮಸ್ಕಿ (Maski) ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹಲ್ಲೆ, ಬೆದರಿಕೆ, ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿದೆ.
ಸೆಪ್ಟೆಂಬರ್ 20 ರಂದು ಮಸ್ಕಿ ಪಟ್ಟಣದಲ್ಲಿ ನಿರುಪಾದಿ ಎಂಬುವರು ಟ್ರ್ಯಾಕ್ಟರ್ನಲ್ಲಿ ಮಣ್ಣು ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಪಿಎಸ್ಐ ಮಣಿಕಂಠ ಟ್ರ್ಯಾಕ್ಟರ್ ತಡೆದು ಮಣ್ಣು ತೆಗೆದುಕೊಂಡು ಹೋಗಲು 20 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದರು. ಅಲ್ಲದೇ ತನ್ನ ಜೀಪ್ನಲ್ಲಿದ್ದ ಪೈಪ್ ತೆಗೆದುಕೊಂಡು ನಿರುಪಾದಿ ಅವರಿಗೆ ಮನಬಂದಂತೆ ಥಳಿಸಿದ್ದಾರೆ. ಹಾಗೇ ಪಿಎಸ್ಐ ಮಣಿಕಂಠ ಜಾತಿ ನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ.
ವಾಲ್ಮೀಕಿ ನಾಯಕ ಸಮಾಜದ ಯುವಕ ನಿರುಪಾದಿ ಮೇಲೆ ಹಲ್ಲೆ ನಡೆದು ಮೂರು ದಿನಗಳಾದರೂ ಪ್ರಕರಣ ದಾಖಲಾಗಿರಲಿಲ್ಲ. ಶುಕ್ರವಾರ ವಾಲ್ಮೀಕಿ ನಾಯಕ ಮಾಹಾಸಭಾ ತಾಲೂಕು ಘಟಕವು ಪಿಎಸ್ಐ ವಿರುದ್ಧ ಕ್ರಮ ಕೈಗೊಳ್ಳುವಂತೆ ಲಿಂಗಸೂರು ಡಿವೈಎಸ್ಪಿ ಮಂಜುನಾಥ ಹಾಗೂ ಸಿಪಿಐ ಬಾಲಚಂದ್ರ ಲಕ್ಕಂ ಅವರಿಗೆ ಮನವಿ ಸಲ್ಲಿಸಿದ್ದರು.
ಇದನ್ನೂ ಓದಿ: ಜೈಲಿನಿಂದ ಎಸ್ಕೇಪ್ ಆಗಿದ್ದ ಕೊಲೆ ಆರೋಪಿಯನ್ನು ಪೋಷಕರು ವಾಪಸ್ ಕರೆತಂದು ಪೊಲೀಸರಿಗೆ ಒಪ್ಪಿಸಿದರು!
ಆದರೆ ಪೊಲೀಸ್ ಅಧಿಕಾರಿಗಳು ಯಾವುದೇ ಕ್ರಮ ಕೈಗಪೊಳ್ಳದ ಹಿನ್ನೆಲೆಯಲ್ಲಿ ಶನಿವಾರ ಬೆಳಿಗ್ಗೆಯಿಂದಲೇ ಪಿಎಸ್ಐ ವಿರುದ್ಧ ದೂರು ದಾಖಲಿಸುವಂತೆ ಮಹಾಸಭಾ ನೇತೃತ್ವದಲ್ಲಿ ನೂರಾರು ಜನರು ಪೊಲೀಸ್ ಠಾಣೆ ಎದರು ಪ್ರತಿಭಟನೆ ನಡೆಸಿದರು. ಪಿಎಸ್ಐ ವಿರುದ್ಧ ದೂರು ದಾಖಲು ಮಾಡಿಕೊಳ್ಳದೇ ಅವರನ್ನು ರಕ್ಷಣೆಗೆ ಹಿರಿಯ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಪಿಎಸ್ಐ ಮಣಿಕಂಠ ವಿರುದ್ಧ ಘೋಷಣೆ ಹಾಕಿದರು.
ಹಿರಿಯ ಮಹಾದೇವಪ್ಪಗೌಡ ಪೊಲೀಸ್ ಪಾಟೀಲ ಪ್ರತಿಭಟನೆ ಸ್ಥಳಕ್ಕೆ ಆಗಮಿಸಿ ಚರ್ಚಿಸಿದರು. ವಿಷಯ ತಿಳಿಯುತ್ತಲೇ ಡಿವೈಎಸ್ಪಿ ಮಂಜುನಾಥ ಪಟ್ಟಣಕ್ಕೆ ಆಗಮಿಸಿ ಧರಣಿನಿರದ ಮನವೊಲಿಸಲು ಯತ್ನಿಸಿದರು. ಕೊನೆಗೆ ಪಿಎಸ್ಐ ವಿರುದ್ಧ ದೂರು ದಾಖಲಾಯಿತು.
ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:04 am, Sun, 24 September 23