ರಾಯಚೂರಿನಲ್ಲಿ ಟ್ರಾಕ್ಟರ್ ಚಾಲಕನ ಮೇಲೆ ಹಲ್ಲೆ‌ ಪ್ರಕರಣ: ಪಿಎಸ್​ಐ ವಿರುದ್ಧ ಎಫ್​ಐಆರ್​ ದಾಖಲು

| Updated By: ವಿವೇಕ ಬಿರಾದಾರ

Updated on: Sep 24, 2023 | 1:33 PM

ಟ್ರಾಕ್ಟರ್ ಚಾಲಕನ ಮೇಲೆ ಹಲ್ಲೆ‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಮಣಿಕಂಠ ವಿರುದ್ಧ ಮಸ್ಕಿ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ರಾಯಚೂರಿನಲ್ಲಿ ಟ್ರಾಕ್ಟರ್ ಚಾಲಕನ ಮೇಲೆ ಹಲ್ಲೆ‌ ಪ್ರಕರಣ: ಪಿಎಸ್​ಐ ವಿರುದ್ಧ ಎಫ್​ಐಆರ್​ ದಾಖಲು
ಪಿಎಸ್​ಐ ಮಣಿಕಂಠ
Follow us on

ರಾಯಚೂರು ಸೆ.23: ಟ್ರಾಕ್ಟರ್ (Tractor) ಚಾಲಕನ ಮೇಲೆ ಹಲ್ಲೆ‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ (PSI) ಮಣಿಕಂಠ ವಿರುದ್ಧ ಮಸ್ಕಿ (Maski) ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಹಲ್ಲೆ, ಬೆದರಿಕೆ, ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿದೆ.

ಸೆಪ್ಟೆಂಬರ್ 20 ರಂದು ಮಸ್ಕಿ ಪಟ್ಟಣದಲ್ಲಿ ನಿರುಪಾದಿ ಎಂಬುವರು ಟ್ರ್ಯಾಕ್ಟರ್​ನಲ್ಲಿ ಮಣ್ಣು ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಪಿಎಸ್​ಐ ಮಣಿಕಂಠ ಟ್ರ್ಯಾಕ್ಟರ್ ತಡೆದು ಮಣ್ಣು ತೆಗೆದುಕೊಂಡು ಹೋಗಲು 20 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದರು. ಅಲ್ಲದೇ ತನ್ನ ಜೀಪ್​ನಲ್ಲಿದ್ದ ಪೈಪ್ ತೆಗೆದುಕೊಂಡು ನಿರುಪಾದಿ ಅವರಿಗೆ ಮನಬಂದಂತೆ ಥಳಿಸಿದ್ದಾರೆ. ಹಾಗೇ ಪಿಎಸ್​ಐ ಮಣಿಕಂಠ ಜಾತಿ ನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ.

ವಾಲ್ಮೀಕಿ ನಾಯಕ ಸಮಾಜದ ಯುವಕ ನಿರುಪಾದಿ ಮೇಲೆ ಹಲ್ಲೆ ನಡೆದು ಮೂರು ದಿನಗಳಾದರೂ ಪ್ರಕರಣ ದಾಖಲಾಗಿರಲಿಲ್ಲ. ಶುಕ್ರವಾರ ವಾಲ್ಮೀಕಿ ನಾಯಕ ಮಾಹಾಸಭಾ ತಾಲೂಕು ಘಟಕವು ಪಿಎಸ್​ಐ ವಿರುದ್ಧ ಕ್ರಮ ಕೈಗೊಳ್ಳುವಂತೆ ಲಿಂಗಸೂರು ಡಿವೈಎಸ್​​ಪಿ ಮಂಜುನಾಥ ಹಾಗೂ ಸಿಪಿಐ ಬಾಲಚಂದ್ರ ಲಕ್ಕಂ ಅವರಿಗೆ ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ: ಜೈಲಿನಿಂದ ಎಸ್ಕೇಪ್ ಆಗಿದ್ದ ಕೊಲೆ ಆರೋಪಿಯನ್ನು ಪೋಷಕರು ವಾಪಸ್​​ ಕರೆತಂದು ಪೊಲೀಸರಿಗೆ ಒಪ್ಪಿಸಿದರು!

ಆದರೆ ಪೊಲೀಸ್​​ ಅಧಿಕಾರಿಗಳು ಯಾವುದೇ ಕ್ರಮ ಕೈಗಪೊಳ್ಳದ ಹಿನ್ನೆಲೆಯಲ್ಲಿ ಶನಿವಾರ ಬೆಳಿಗ್ಗೆಯಿಂದಲೇ ಪಿಎಸ್​​ಐ ವಿರುದ್ಧ ದೂರು ದಾಖಲಿಸುವಂತೆ ಮಹಾಸಭಾ ನೇತೃತ್ವದಲ್ಲಿ ನೂರಾರು ಜನರು ಪೊಲೀಸ್​ ಠಾಣೆ ಎದರು ಪ್ರತಿಭಟನೆ ನಡೆಸಿದರು.   ಪಿಎಸ್​ಐ ವಿರುದ್ಧ ದೂರು ದಾಖಲು ಮಾಡಿಕೊಳ್ಳದೇ ಅವರನ್ನು ರಕ್ಷಣೆಗೆ ಹಿರಿಯ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಪಿಎಸ್​ಐ ಮಣಿಕಂಠ ವಿರುದ್ಧ ಘೋಷಣೆ ಹಾಕಿದರು.

ಹಿರಿಯ ಮಹಾದೇವಪ್ಪಗೌಡ ಪೊಲೀಸ್‌ ಪಾಟೀಲ ಪ್ರತಿಭಟನೆ ಸ್ಥಳಕ್ಕೆ ಆಗಮಿಸಿ ಚರ್ಚಿಸಿದರು. ವಿಷಯ ತಿಳಿಯುತ್ತಲೇ ಡಿವೈಎಸ್​​ಪಿ ಮಂಜುನಾಥ ಪಟ್ಟಣಕ್ಕೆ ಆಗಮಿಸಿ  ಧರಣಿನಿರದ ಮನವೊಲಿಸಲು ಯತ್ನಿಸಿದರು. ಕೊನೆಗೆ ಪಿಎಸ್​ಐ ವಿರುದ್ಧ ದೂರು ದಾಖಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:04 am, Sun, 24 September 23