ರಾಯಚೂರು: ಊಟ ಸೇವನೆ ಬಳಿಕ ಹೊಟ್ಟೆನೋವು, ಒಂದೇ ಕುಟುಂಬದ ಮೂವರು ಸಾವು

ರಾತ್ರಿ ಊಟ ಮಾಡಿ ಮಲಗಿದ್ದ ಒಂದೇ ಕುಟುಂಬದ ಮೂವರು ಹೊಟ್ಟೆನೋವಿನಿಂದ ನರಳಿ ಮೃತಪಟ್ಟ ಹೃದಯವಿದ್ರಾವಕ ಘಟನೆ ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕೆ.ತಿಮ್ಮಾಪುರದಲ್ಲಿ ನಡೆದಿದೆ. ಇದರಿಂದಾಗಿ ಕೆ.ತಿಮ್ಮಾಪುರ ಗ್ರಾಮದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಅಸ್ವಸ್ಥಗೊಂಡ 6 ಮಂದಿಯ ಪೈಕಿ ಮೂವರಿಗೆ ಚಿಕಿತ್ಸೆ ಮುಂದುವರಿದಿದೆ.

ರಾಯಚೂರು: ಊಟ ಸೇವನೆ ಬಳಿಕ ಹೊಟ್ಟೆನೋವು, ಒಂದೇ ಕುಟುಂಬದ ಮೂವರು ಸಾವು
ಲಿಂಗಸುಗೂರು ಆಸ್ಪತ್ರೆ
Edited By:

Updated on: Jul 22, 2025 | 11:26 AM

ರಾಯಚೂರು, ಜುಲೈ 22: ಊಟ ಸೇವಿಸಿದ ಬಳಿಕ ಹೊಟ್ಟೆನೋವು ಕಾಣಿಸಿಕೊಂಡು ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ರಾಯಚೂರು (Raichur) ಜಿಲ್ಲೆ ಸಿರವಾರ ತಾಲೂಕಿನ ಕೆ.ತಿಮ್ಮಾಪುರದಲ್ಲಿ (K Timmapur) ಸಂಭವಿಸಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ರಮೇಶ್(35), ಪುತ್ರಿ ನಾಗಮ್ಮ(8) ಮೃತಪಟ್ಟರೆ, ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ದೀಪಾ(6) ಸಾವಿಗೀಡಾಗಿದ್ದಾಳೆ. ಸದ್ಯ ರಮೇಶ್ ಅವರ​ ಪತ್ನಿ ಪದ್ಮಾರನ್ನು ರಿಮ್ಸ್​ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ.

ಮತ್ತಿಬ್ಬರು ಮಕ್ಕಳಾದ ಕೃಷ್ಣ, ಚೈತ್ರಾಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಕುಟುಂಬದವರೆಲ್ಲ ಸೋಮವಾರ ರಾತ್ರಿ ಚವಳಿಕಾಯಿ ಪಲ್ಯ, ರೊಟ್ಟಿ, ಅನ್ನ, ಸಾಂಬಾರ್ ಸೇವನೆ ಮಾಡಿದ್ದರು. ಊಟ ಮಾಡಿ ಮಲಗಿದ್ದ 6 ಜನರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಹೊಟ್ಟೆ ನೋವಿನಿಂದ ನರಳಾಡುತ್ತಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮುಂಜಾನೆ 4 ಗಂಟೆ ಸುಮಾರಿಗೆ ಲಿಂಗಸುಗೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಿಸದೆ ತಂದೆ ರಮೇಶ್, ಪುತ್ರಿ ನಾಗಮ್ಮ ಸಾವಿಗೀಡಾಗಿದ್ದಾರೆ. ಮತ್ತೋರ್ವ ಪುತ್ರಿ ದೀಪಾ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾಳೆ.

ಸದ್ಯ ಈ ಘಟನೆ ಕೆ.ತಿಮ್ಮಾಪುರ ಗ್ರಾಮದಲ್ಲಿ ಆತಂಕಕ್ಕೆ ಕಾರಣವಾಗಿದೆ. ಕವಿತಾಳ ಪೊಲೀಸ್ ‌ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ
ಹೆಚ್ಚಾಯ್ತು ಡೆಂಗ್ಯೂ, ಮನೆ ಬಳಿ ಸ್ವಚ್ಛತೆ ಕಾಪಾಡದಿದ್ದರೆ ಭಾರೀ ಮೊತ್ತದ ದಂಡ
ರಸ್ತೆಯಲ್ಲಿ ಬರುತ್ತಿದ್ದ ಕಾರಿಗೆ ಏಕಾಏಕಿ ಅಡ್ಡಬಂದ ಕಾಡಾನೆ: ವಿಡಿಯೋ ವೈರಲ್
ಯುವಕನ ಜೊತೆ ಓಡಿ ಹೋದ ಮಗಳು, ಪೊಲೀಸ್ ಠಾಣೆ ಎದುರೇ ತಂದೆ ಆತ್ಮಹತ್ಯೆ
ಬಿಕ್ಲು ಶಿವ ಕೊಲೆ ಕೇಸ್: ಬಗೆದಷ್ಟು ಸ್ಫೋಟಕ ಮಾಹಿತಿ, ನಟ-ನಟಿಯರ ಜತೆಗೂ ನಂಟು

ಕ್ರಿಮಿನಾಶಕ‌ ಸಿಂಪಡಣೆ ಮಾಡಿದ್ದ ಚವಳೆಕಾಯಿ ತಿಂದಿರುವ ಶಂಕೆ

ಕ್ರಿಮಿನಾಶಕ‌ ಸಿಂಪಡಣೆ ಮಾಡಿದ್ದ ಚವಳೆಕಾಯಿ ತಿಂದಿರುವ ಕಾರಣ ಘಟನೆ ಸಂಭವಿಸಿರುವ ಬಗ್ಗೆ ಮೃತರ ಸಂಬಂಧಿಕರು ಶಂಕೆ ವ್ಯಕ್ತಪಡಿಸಿದ್ದಾರೆ. ಹೊಲದಲ್ಲಿ ಕ್ರಿಮಿನಾಶಕ ಸಿಂಪಡಣೆ ಮಾಡಿರುವ ಮಾಹಿತಿ ಬೆಳಕಿಗೆ ಬಂದಿದೆ. ಹೊಲದಲ್ಲಿ ಬೆಳೆದಿದ್ದ ಚವಳೆಕಾಯಿ ಗಿಡಕ್ಕೆ ಕ್ರಿಮಿನಾಶಕ ಸಿಂಪಡಣೆ ಮಾಡಲಾಗಿತ್ತು. ಆ ಚವಳೆಕಾಯಿಯಲ್ಲೇ ಪಲ್ಯ ಮಾಡಿ ಸೇವಿಸಿರುವ ಅನುಮಾನ ಇದೆ ಎಂದು ರಾಯಚೂರಿನಲ್ಲಿ ಮೃತರ ಸಂಬಂಧಿ ತಿಮ್ಮಯ್ಯ ‘ಟಿವಿ9’ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪತ್ನಿಯೇ ನದಿಗೆ ತಳ್ಳಿದ್ದಾಳೆಂದು ಆರೋಪಿಸಿದ್ದ ಪತಿ ತಾತಪ್ಪನಿಗೆ ಸಂಕಷ್ಟ!

ಸದ್ಯ ಅಸ್ವಸ್ಥರಾಗಿರುವ ಪದ್ಮಾವತಿ, ಮತ್ತಿಬ್ಬರು ಮಕ್ಕಳಾದ ಕೃಷ್ಣ ಹಾಗೂ ಚೈತ್ರಾಗೆ ರಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:15 am, Tue, 22 July 25