AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​​ಗೆ ಲಾರಿ ಡಿಕ್ಕಿ: ಹಿಟ್​​ ಆ್ಯಂಡ್​​ ರನ್​​ಗೆ ಮೂವರು ಯುವಕರು ಬಲಿ

ಹಿಟ್​​ ಆ್ಯಂಡ್​​ ರನ್​​ಗೆ ಮೂವರು ಯುವಕರು ಬಲಿಯಾಗಿರುವ ಘಟನೆ ರಾಯಚೂರು ನಗರದಲ್ಲಿ ನಡೆದಿದೆ. ಹೈದರಾಬಾದ್​​​​ ಮಾರ್ಗದಿಂದ ಮಂತ್ರಾಲಯದ ಕಡೆ ಹೊರಟಿದ್ದ ಟ್ರಕ್ ಬೈಕ್​​ಗೆ ಗುದ್ದಿದ ಪರಿಣಾಮ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಟ್ರಕ್​​ ಸಮೇತ ಚಾಲಕ ಎಸ್ಕೇಪ್​​ ಆಗಿದ್ದು, ಮೃತ ಯುವಕರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಬೈಕ್​​ಗೆ ಲಾರಿ ಡಿಕ್ಕಿ: ಹಿಟ್​​ ಆ್ಯಂಡ್​​ ರನ್​​ಗೆ ಮೂವರು ಯುವಕರು ಬಲಿ
ಅಪಘಾತವಾದ ಬೈಕ್​​Image Credit source: Tv9 Kannada
ಭೀಮೇಶ್​​ ಪೂಜಾರ್
| Edited By: |

Updated on:Feb 28, 2026 | 10:13 AM

Share

ರಾಯಚೂರು, ಫೆಬ್ರವರಿ 28: ಬೈಕ್​​ ಮತ್ತು ಟ್ರಕ್​ ನಡುವೆ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಮೂವರು ಯುವಕರು ಮೃತಪಟ್ಟಿರುವ ಆಘಾತಕಾರಿ ಘಟನೆ ರಾಯಚೂರು ನಗರದ ಬಸವೇಶ್ವರ ವೃತ್ತದಲ್ಲಿ ನಡೆದಿದೆ. ಮೊಹಮ್ಮದ್​​ ಅಲಿ(24), ನೂರ್ ಮೊಹಮ್ಮದ್(19) ಮತ್ತಯ ಫಯಾಜ್(26) ಮೃತ ದುರ್ದೈವಿಗಳಾಗಿದ್ದಾರೆ. ಮೃತ ಮೂವರೂ ರಾಯಚೂರುನಗರದ ಸುಖಾಣಿ ಕಾಲೋನಿಯ ನಿವಾಸಿಗಳು ಎಂಬುದು ತಿಳಿದುಬಂದಿದೆ.

ಟ್ರಕ್ ಸಮೇತ ಚಾಲಕ ಪರಾರಿ

ಬಸವೇಶ್ವರ ವೃತ್ತದಿಂದ ಚಂದ್ರಮೌಳೇಶ್ವರ ವೃತ್ತದ ಕಡೆ ತೆರಳುತ್ತಿದ್ದ ಬೈಕ್​​ಗೆ ಹೈದರಾಬಾದ್​​​​ ಮಾರ್ಗದಿಂದ ಮಂತ್ರಾಲಯದ ಕಡೆ ಹೊರಟಿದ್ದ ಟ್ರಕ್ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಬೈಕ್​​ನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಅಪಘಾತದ ಬಳಿಕ ಟ್ರಕ್ ಸಮೇತ ಚಾಲಕ ಪರಾರಿಯಾಗಿದ್ದು, ಸ್ಥಳಕ್ಕೆ ರಾಯಚೂರು ಟ್ರಾಫಿಕ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಜ್ಯೋತಿಷಿ ಭವಿಷ್ಯಕ್ಕೆ ಹೆದರಿ ಟೆಕ್ಕಿ ಆತ್ಮಹತ್ಯೆ? ಹಸೆಮಣೆ ಏರಬೇಕಿದ್ದವಳ ದಾರುಣ ಅಂತ್ಯ

ಕಾರಿಗೆ ಲಾರಿ ಡಿಕ್ಕಿ

Lorry Hits Car

ಕಾರಿಗೆ ಡಿಕ್ಕಿ ಹೊಡೆದ ಲಾರಿ

ಸಿಗ್ನಲ್ ಕ್ರಾಸ್ ಮಾಡ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರಿನ ಕಾರ್ಪೊರೇಷನ್ ಸರ್ಕಲ್ ಬಳಿ ಬೆಳಿಗ್ಗೆ 7.30ರ ವೇಳೆಗೆ ನಡೆದಿದೆ. ಘಟನೆಯಲ್ಲಿ ಕಾರಿನ ಚಾಲಕ ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಗುದ್ದಿರುವ ರಭಸಕ್ಕೆ ಕಾರಿನ ಡೋರ್​​ ಜಖಂ ಆಗಿದ್ದು, ಸ್ಥಳಕ್ಕೆ ಹಲಸೂರು ಟ್ರಾಫಿಕ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಘಟನೆ ಸಬಂಧ ವಾಹನಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ಈ ವೇಳೆ ಲಾರಿ ಚಾಲಕ ಡ್ರಿಂಕ್ ಆ್ಯಂಡ್​​ ಡ್ರೈವ್ ಮಾಡಿರೋದು ಗೊತ್ತಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published On - 8:15 am, Sat, 28 February 26

Follow Us