AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು ಕೃಷಿ ವಿವಿ 11ನೇ ಘಟಿಕೋತ್ಸವ; ಬಿಎಸ್​ಸಿ ಅಗ್ರಿಕಲ್ಚರ್ ವಿದ್ಯಾರ್ಥಿನಿ ಗೀತಿಕಾ 6 ಚಿನ್ನದ ಪದಕಗಳ ಸಾಧನೆ

ಕೃಷಿ ವಿಜ್ಞಾನಗಳ ಮಹಾವಿದ್ಯಾಲಯದ 11ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಡಾ.ಥಾವರ್ ಚಂದ್ ಗೆಹ್ಲೋಟ್ ಒಟ್ಟು 303 ಸ್ನಾತಕ, 107 ಸ್ನಾತಕೋತ್ತರ ಹಾಗೂ 26 ಡಾಕ್ಟರೇಟ್ ಪದವಿಗಳನ್ನು ಪ್ರದಾನ ಮಾಡಿದರು. ಜೊತೆಗೆ ಸ್ನಾತಕ ಪದವಿಯಲ್ಲಿ 21 ಚಿನ್ನದ ಪದಕ, ಸ್ನಾತಕೋತ್ತರ ಪದವಿಯಲ್ಲಿ 14 ಚಿನ್ನದ ಪದಕ ಹಾಗೂ ಡಾಕ್ಟರೇಟ್ ಪದವಿಯಲ್ಲಿ 10 ಚಿನ್ನದ ಪದಕಗಳನ್ನು ರಾಜ್ಯಪಾಲ ಡಾ.ಥಾವರ್ ಚಂದ್ ಗೆಹ್ಲೋಟ್ ವಿದ್ಯಾರ್ಥಿಗಳಿಗೆ ಪ್ರದಾನ ಮಾಡಿದರು.

ರಾಯಚೂರು ಕೃಷಿ ವಿವಿ 11ನೇ ಘಟಿಕೋತ್ಸವ; ಬಿಎಸ್​ಸಿ ಅಗ್ರಿಕಲ್ಚರ್ ವಿದ್ಯಾರ್ಥಿನಿ ಗೀತಿಕಾ 6 ಚಿನ್ನದ ಪದಕಗಳ ಸಾಧನೆ
ಕೃಷಿ ವಿಜ್ಞಾನಗಳ ಮಹಾವಿದ್ಯಾಲಯದ 11 ನೇ ಘಟಿಕೋತ್ಸವ
TV9 Web
| Edited By: |

Updated on: Nov 29, 2021 | 3:22 PM

Share

ರಾಯಚೂರು: ಕೃಷಿ ವಿಜ್ಞಾನಗಳ ಮಹಾವಿದ್ಯಾಲಯದ 11 ನೇ ಘಟಿಕೋತ್ಸವ ಇಂದು ರಾಯಚೂರಿನಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ರಾಜ್ಯಪಾಲ ಡಾ.ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಉದ್ಘಾಟಿಸಿದ್ದಾರೆ. ಮೊದಲು ರಾಯಚೂರಿನ ಗಾಂಧಿ ಸರ್ಕಲ್ ಬಳಿಯ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ಬಳಿಕ ಕೃಷಿ ವಿವಿ ಘಟಿಕೋತ್ಸವಕ್ಕೆ ಆಗಮಿಸಿದ್ದಾರೆ. ರಾಜ್ಯಪಾಲ ಡಾ.ಥಾವರ್ ಚಂದ್ ಗೆಹ್ಲೋಟ್ ಅವರ ಜೊತೆ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ವಿಸ್ತರಣಾ ವಿಭಾಗದ ಉಪ ಮಹಾನಿರ್ದೇಶಕ ಡಾ.ಎ.ಕೆ.ಸಿಂಗ್ ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು.

ಕೃಷಿ ವಿಜ್ಞಾನಗಳ ಮಹಾವಿದ್ಯಾಲಯದ 11ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಡಾ.ಥಾವರ್ ಚಂದ್ ಗೆಹ್ಲೋಟ್ ಒಟ್ಟು 303 ಸ್ನಾತಕ, 107 ಸ್ನಾತಕೋತ್ತರ ಹಾಗೂ 26 ಡಾಕ್ಟರೇಟ್ ಪದವಿಗಳನ್ನು ಪ್ರದಾನ ಮಾಡಿದರು. ಜೊತೆಗೆ ಸ್ನಾತಕ ಪದವಿಯಲ್ಲಿ 21 ಚಿನ್ನದ ಪದಕ, ಸ್ನಾತಕೋತ್ತರ ಪದವಿಯಲ್ಲಿ 14 ಚಿನ್ನದ ಪದಕ ಹಾಗೂ ಡಾಕ್ಟರೇಟ್ ಪದವಿಯಲ್ಲಿ 10 ಚಿನ್ನದ ಪದಕಗಳನ್ನು ರಾಜ್ಯಪಾಲ ಡಾ.ಥಾವರ್ ಚಂದ್ ಗೆಹ್ಲೋಟ್ ವಿದ್ಯಾರ್ಥಿಗಳಿಗೆ ಪ್ರದಾನ ಮಾಡಿದರು.

ಚಿನ್ನದ ಪದಕ ಪಡೆದ ವಿದ್ಯಾರ್ಥಿಗಳ ಪೈಕಿ, ಕೇರಳ ಮೂಲದ ರಾಯಚೂರು ಕೃಷಿ ವಿವಿಯ ಬಿಎಸ್​ಸಿ ಅಗ್ರಿಕಲ್ಚರ್ ವಿದ್ಯಾರ್ಥಿನಿ ಗೀತಿಕಾ ಟಿ.ವಿ ಒಟ್ಟು 6 ಚಿನ್ನದ ಪದಕ ಪಡೆದು ಸಾಧನೆ ಮಾಡಿದ್ದಾರೆ. ಅಲ್ಲದೇ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಚಿನ್ನದ ಪದಕ ಪಡೆದ ವಿದ್ಯಾರ್ಥಿಗಳ ಜೊತೆ ಸೆಲ್ಫಿ ತೆಗೆದುಕೊಳ್ಳುವ ಮೂಲಕ ಸಂಭ್ರಮಿಸಿದರು.

ತಂತ್ರಜ್ಞಾನ ಅಭಿವೃದ್ಧಿ 2019-2020 ನೇ ಸಾಲಿನಲ್ಲಿ ಒಟ್ಟು 44 ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗಿದ್ದು, ಅವುಗಳಲ್ಲಿ 10 ಬೆಳೆ ಉತ್ಪಾದನೆ ಹೆಚ್ಚಿಸುವಂತವುಗಳಾಗಿದ್ದು, 16 ತಂತ್ರಜ್ಞಾನಗಳು ಕೃಷಿ ತಾಂತ್ರಿಕತೆಗೆ ಸಂಬಂಧಿಸಿವೆ ಹಾಗೂ ಪೂರಕ ಸಂಶೋಧನೆಗಳಡಿಯಲ್ಲಿ 8 ತಂತ್ರಜ್ಞಾನಗಳನ್ನು ಸಮರ್ಪಿಸಲಾಗಿದೆ. ಅಲ್ಲದೇ ಇದೇ ಸಾಲಿನಲ್ಲಿ ರಾಯಚೂರು ಕೃಷಿ ವಿವಿ ಒಟ್ಟು 10,664 ಕ್ವಿಂಟಾಲ್ಗಳಷ್ಟು ವಿವಿಧ ಬೆಳೆಗಳ ಬೀಜೋತ್ಪಾನೆಯನ್ನು ಮಾಡಿದೆ.

ಇದರಲ್ಲಿ 3100 ಕ್ವಿಂಟಾಲ್ ತೊಗರಿ, 2975 ಕ್ವಿಂಟಾಲ್ ಭತ್ತ, 15 ಕ್ವಿಂಟಾಲ್ ಮೆಕ್ಕೆಜೋಳ, 390 ಕ್ವಿಂಟಾಲ್ ಸೋಯಾ, ಅವರೆ, 138 ಕ್ವಿಂಟಾಲ್ ಶೇಂಗಾ, 107 ಕ್ವಿಂಟಾಲ್ ಸಿರಿಧಾನ್ಯ, 5 ಕ್ವಿಂಟಾಲ್ ಸೂರ್ಯಕಾಂತಿ, 3330 ಕ್ವಿಂಟಾಲ್ ಕಡಲೆ ಹಾಗೂ 386 ಕ್ವಿಂಟಾಲ್ ಜೋಳದ ಬೀಜಗಳನ್ನು ಆಧ್ಯತೆಗನುಸಾರವಾಗಿ ಉತ್ಪಾದಿಸಿ ಯೋಗ್ಯ ದರದಲ್ಲಿ ರೈತರಿಗೆ ಪೂರೈಸಲಾಗಿದೆ.

ವರದಿ: ಭೀಮೇಶ್ ಪೂಜಾರ್

ಇದನ್ನೂ ಓದಿ: ರಾಯಚೂರು: ನ.29 ರಂದು ಕೃಷಿ ವಿವಿ 11 ನೇ ಘಟಿಕೋತ್ಸವ; ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ರಿಂದ ಉದ್ಘಾಟನೆ

ಮೈಸೂರು ವಿಶ್ವ ವಿದ್ಯಾಲಯದ 101ನೇ ಘಟಿಕೋತ್ಸವದ ಬಗ್ಗೆ ಕುಲಪತಿ ಪ್ರೊ. ಜಿ ಹೇಮಂತ್ ಕುಮಾರ್ ಮಾಹಿತಿ

Follow Us
TV9 Web
TV9 Web

TV9 Kannada

Read More
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ