AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಲ್ಲಿ ಚುನಾವಣೆ ಬಹಿಷ್ಕಾರದ ಎಚ್ಚರಿಕೆ: ಆದರ್ಶ ಗ್ರಾಮದಲ್ಲೆ ಇಲ್ಲ ಮೂಲಭೂತ ಸೌಕರ್ಯ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೊನ್ನಟಿಗಿ ಗ್ರಾಮದ ಜನರು ಚುನಾವಣೆಯನ್ನು ಬಹಿಷ್ಕಾರ ಹಾಕಿದ್ದಾರೆ.

ರಾಯಚೂರಲ್ಲಿ ಚುನಾವಣೆ ಬಹಿಷ್ಕಾರದ ಎಚ್ಚರಿಕೆ: ಆದರ್ಶ ಗ್ರಾಮದಲ್ಲೆ ಇಲ್ಲ ಮೂಲಭೂತ ಸೌಕರ್ಯ
ಚುನಾವಣೆ ಬಹಿಷ್ಕರಿಸಿದ ಜನ
ವಿವೇಕ ಬಿರಾದಾರ
|

Updated on: Mar 03, 2023 | 11:00 AM

Share

ರಾಯಚೂರು: ವಿಧಾನಸಭೆ ಚುನಾವಣೆ (Assembly Election) ಸನಿಹದಲ್ಲಿದ್ದು, ರಾಜಕೀಯ ನಾಯಕರು ಮತಗಳ ಕ್ರೋಢೀಕರಣಕ್ಕೆ ಓಡಾಡುತ್ತಿದ್ದರೇ, ಇತ್ತ ಪ್ರಜೆಗಳು ಚುನಾವಣೆಯನ್ನೇ ಬಹಿಷ್ಕಾರ ಹಾಕುತ್ತಿದ್ದಾರೆ. ಇತ್ತೀಚಿಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಜನರು ಅಭಿವೃದ್ಧಿ ವಿಚಾರವಾಗಿ ನಾವು ಈ ಬಾರಿ ಚುನಾವಣೆಯನ್ನು ಬಹಿಷ್ಕರಿಸಿದ್ದೇವೆ ಎಂಬ ಎಚ್ಚರಿಕೆ ಬ್ಯಾನರ್​ಗಳನ್ನು ಹಾಕಿದ್ದಾರೆ. ಅದರಂತೆ ಈಗ ರಾಯಚೂರು (Raichuru) ಜಿಲ್ಲೆಯ ದೇವದುರ್ಗ ತಾಲೂಕಿನ ಹೊನ್ನಟಿಗಿ ಗ್ರಾಮದ ಜನರು ಚುನಾವಣೆಯನ್ನು ಬಹಿಷ್ಕಾರ ಹಾಕಿದ್ದಾರೆ.

ಕಾರಣ 2018-19 ಸಾಲಿನಲ್ಲಿ ಆದರ್ಶ ಗ್ರಾಮವಾಗಿ ಈ ಗ್ರಾಮ ಆಯ್ಕೆಯಾಗಿದೆ. ಆದರೆ ಆದರ್ಶ ಗ್ರಾಮದಲ್ಲೆ ಮೂಲಭೂತ ಸೌಲಭ್ಯಗಳು ಮರಿಚಿಕೆಯಾಗಿವೆ. ಈ ಹಿನ್ನೆಲೆ ಗ್ರಾಮಸ್ಥರು ಪಕ್ಷಾತೀತವಾಗಿ ಈ ಬಾರಿಯ ವಿಧಾನಸಭಾ ಚುನಾವಣೆ ಬಹಿಷ್ಕಾರ ಹಾಕಿದ್ದಾರೆ. ತೆರೆದ ಬಾವಿಯಿಂದ ನೀರು ಸೇವನೆ, ಬಯಲು ಶೌಚಾಲಯ, ಗ್ರಾಮದಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ, ಮನೆ ಮುಂದೆ ಕೊಚ್ಚೆ ನೀರು ಸಂಗ್ರಹವಾಗುತ್ತಿದ್ದು, ಇದರಿಂದ ರೋಗಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ.

ರಾಜ್ಯದ ನಾನಾ ಭಾಗದಲ್ಲೂ ಮತದಾನ ಬಹಿಷ್ಕಾರ

ಈ ರೀತಿ ರಾಜ್ಯದ ನಾನಾ ಭಾಗದಲ್ಲೂ ಜನರು ಮತದಾನವನ್ನು ಬಹಿಷ್ಕರಿಸಿದ್ದಾರೆ. ನಿನ್ನೆ (ಫೆ.24) ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿನ ಹಳ್ಳಕ್ಕೆ ತೂಗು ಸೇತುವೆ ಇಲ್ಲದೆ ಜನರು ಪರದಾಡುತ್ತಿದ್ದಾರೆ. ತೂಗು ಸೇತುವೆ ನಿರ್ಮಾಣ ಮಾಡಿಕೊಡಿ ಎಂದು ಜನಪ್ರತಿನಿಧಿಗಳಿಗೆ ಮತ್ತು ಅಧಿಕಾರಿಗಳಿಗೆ ಎಷ್ಟೇ ಮನವಿ ಮಾಡಿದರೂ ಉಪಯೋಗವಾಗಿಲ್ಲ. ಈ ಹಿನ್ನೆಲೆ ಈಗ ಗ್ರಾಮಸ್ಥರು ‘ರಾಜಕಾರಣಿಗಳಿಗೆ ನಮ್ಮ ಊರಿಗೆ ಪ್ರವೇಶವಿಲ್ಲ’ ಎಂಬ ಫಲಕಗಳನ್ನು ಹಾಕಿದ್ದರು. ಅಲ್ಲದೇ ತೂಗು ಸೇತುವೆ ನಿರ್ಮಿಸಿಕೊಡುವವರೆಗೆ ಮತ ಹಾಕುವುದಿಲ್ಲ ಎಂದು ಬ್ಯಾನರ್​ ಹಾಕಿದ್ದರು.

ಕೆಲ ದಿನಗಳ ಹಿಂದೆ ಇದೇ ಜಿಲ್ಲೆಯ ಜೋಯಿಡಾ ತಾಲೂಕಿನ ಗ್ರಾಮ ಪಂಚಾಯ್ತಿ ಹೆಬ್ಬಾಳ ಮತ್ತು ನೇತಾರ್ಗು ಗ್ರಾಮಗಳಿಗೆ ಹೆಬ್ಬಾಳ ಶಾಲೆಯಲ್ಲಿ ಮತಗಟ್ಟೆ ಸ್ಥಾಪನೆ, ಕಾಯಂ ಶಿಕ್ಷಕರ ನೇಮಕ, ರಸ್ತೆ, ವಿದ್ಯುತ್​ ಸಂಪರ್ಕಕ್ಕೆ ಆಗ್ರಹಿಸಿ ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡಿದ್ದರು.

ಹಾಗೇ ಮೈಸೂರಿನ ನಂಜನಗೂಡು ತಾಲೂಕಿನ ಉಪ್ಪನಹಳ್ಳಿ ಗ್ರಾಮದಲ್ಲಿ ಚರಂಡಿ ಸಮಸ್ಯೆ ಉದ್ಭವಿಸಿದ್ದು, ಚರಂಡಿ ಸಮಸ್ಯೆ ಬಗೆಹರಿಯುವವರೆಗು ಮತದಾನ ಮಾಡುವುದಿಲ್ಲ ಎಂದಿದ್ದರು. ಈ ಮೂಲಕ ಮತದಾನವನ್ನೇ ಬಹಿಷ್ಕಾರ ಮಾಡುವ ಎಚ್ಚರಿಕೆ ನೀಡಿದ್ದರು. ಇದೇ ರೀತಿಯಾಗಿ ಶಿವಮೊಗ್ಗ ಜಿಲ್ಲೆಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಸ್ವಕ್ಷೇತ್ರವಾದ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಮೇಗರವಳ್ಳಿ ಸಮೀಪದ ಅಣ್ಣುವಳ್ಳಿಗೆ ಸಂಪರ್ಕ ಕಲ್ಪಿಸುವ ದಾರಿ ಮತ್ತು ಹಳ್ಳದ ಕಾಲುಸೇತುವೆ ಹಾಳಾಗಾಗಿದ್ದು, ಇದನ್ನು ಸರಿಪಡಿಸುವವರೆಗು ಮತದಾನ ಮಾಡುವುದಿಲ್ಲವೆಂದು ಬಹಿಷ್ಕರಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ