ನೀತಿ ಆಯೋಗದ ಡೆಲ್ಟಾ ಶ್ರೇಯಾಂಕದಲ್ಲಿ ಮಸ್ಕಿ ತಾಲೂಕಿಗೆ ಪ್ರಥಮ ಸ್ಥಾನ
ಅಖಿಲ ಭಾರತ ಮಹತ್ವಾಕಾಂಕ್ಷೆಯ ಡೆಲ್ಟಾ ಶ್ರೇಯಾಂಕ ಪ್ರಕಟವಾಗಿದೆ. ಆರೋಗ್ಯ, ಪೌಷ್ಟಿಕಾಂಶ, ಶಿಕ್ಷಣ, ಕೃಷಿ ಮತ್ತು ನೀರಾವರಿ ಸಂಪನ್ಮೂಲಗಳು, ಆರ್ಥಿಕ ಅಭಿವೃದ್ಧಿ, ಕೌಶಲ್ಯಾಭಿವೃದ್ಧಿ ಮತ್ತು ಮೂಲಭೂತ ಸೌಕರ್ಯಗಳ ಅಂಶಗಳಲ್ಲಿ ಪ್ರಗತಿ ಸಾಧಿಸಿದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿಗೆ ಪ್ರಥಮ ಸ್ಥಾನ ಬಂದಿದೆ.
ರಾಯಚೂರು, ಡಿಸೆಂಬರ್ 08: ಅಖಿಲ ಭಾರತ ಮಹತ್ವಾಕಾಂಕ್ಷೆಯ ಡೆಲ್ಟಾ ಶ್ರೇಯಾಂಕ (Delta Ranking) ಪ್ರಕಟವಾಗಿದೆ. ಆರೋಗ್ಯ, ಪೌಷ್ಟಿಕಾಂಶ, ಶಿಕ್ಷಣ, ಕೃಷಿ ಮತ್ತು ನೀರಾವರಿ ಸಂಪನ್ಮೂಲಗಳು, ಆರ್ಥಿಕ ಅಭಿವೃದ್ಧಿ, ಕೌಶಲ್ಯಾಭಿವೃದ್ಧಿ ಮತ್ತು ಮೂಲಭೂತ ಸೌಕರ್ಯಗಳ ಅಂಶಗಳಲ್ಲಿ ಪ್ರಗತಿ ಸಾಧಿಸಿದ ಹಿನ್ನೆಲೆಯಲ್ಲಿ ರಾಯಚೂರು (Raihurur) ಜಿಲ್ಲೆಯ ಮಸ್ಕಿ (Maski) ತಾಲೂಕಿಗೆ ಪ್ರಥಮ ಸ್ಥಾನ ಬಂದಿದೆ. ನೀತಿ ಆಯೋಗದ ಮಾನದಂಡಗಳ ಅಡಿಯಲ್ಲಿ ದಕ್ಷಿಣ ಭಾರತದ 180 ತಾಲೂಕುಗಳ ಪೈಕಿ ಮಸ್ಕಿ ತಾಲೂಕಿಗೆ ಪ್ರಥಮ ಸ್ಥಾನ ಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 1 ಕೋಟಿ 50 ಲಕ್ಷ ರೂ. ಬಹುಮಾನ ಘೋಷಿಸಿದೆ.
ಏನಿದು ಡೆಲ್ಟಾ ಶ್ರೇಯಾಂಕ್
ಕೇಂದ್ರ ಸರ್ಕಾರದ ನೀತಿ ಆಯೋಗ (NITI)ವು ಡೆಲ್ಟಾ ಶ್ರೇಯಾಂಕವನ್ನು 2018ರಲ್ಲಿ ಪ್ರಾರಂಭಿಸಿತು. ನೀತಿ ಆಯೋಗದ ಮಹತ್ವಾಕಾಂಕ್ಷೆಯ ಜಿಲ್ಲಾ ಕಾರ್ಯಕ್ರಮವು ಪ್ರಮುಖ ಸಾಮಾಜಿಕ ಕ್ಷೇತ್ರಗಳಲ್ಲಿ ತುಲನಾತ್ಮಕ ಪ್ರಗತಿಯನ್ನು ಸಾಧಿಸಿದ ಜಿಲ್ಲೆಗಳಲ್ಲಿ ತ್ವರಿತ ಪರಿವರ್ತನೆಯನ್ನು ತರುವ ಗುರಿಯನ್ನು ಹೊಂದಿದೆ.
ಆರೋಗ್ಯ ಮತ್ತು ಪೋಷಣೆ, ಶಿಕ್ಷಣ, ಕೃಷಿ ಮತ್ತು ಜಲಸಂಪನ್ಮೂಲಗಳು, ಆರ್ಥಿಕ ಸೇರ್ಪಡೆ, ಕೌಶಲ್ಯ ಅಭಿವೃದ್ಧಿ ಮತ್ತು ಮೂಲಭೂತ ಮೂಲಸೌಕರ್ಯಗಳಲ್ಲಿ ಅಭಿವೃದ್ಧಿ ಸಾಧಿಸಿದ ಜಿಲ್ಲೆಗಳಿಗೆ ಶ್ರೇಯಾಂಕ ನೀಡುತ್ತದೆ. ಆಯೋಗ್ ಬಿಡುಗಡೆ ಮಾಡಿದ ಡೆಲ್ಟಾ ಶ್ರೇಯಾಂಕವು ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಪ್ರಗತಿಯನ್ನು ತೋರಿಸುತ್ತದೆ.
ಅಗಸ್ಟ್ ತಿಂಗಳಲ್ಲಿ ಕೂಡ ಡೆಲ್ಟಾ ಶ್ರೇಯಾಂಕ್ ಬಿಡುಗಡೆಯಾಗಿದ್ದು, ಕರ್ನಾಟಕದ ರಾಯಚೂರು ಜಿಲ್ಲೆ ಮೂಲಭೂತ ಸೌಕರ್ಯಗಳಲ್ಲಿ ಪ್ರಗತಿ ಸಾಧಿಸಿದ ಹಿನ್ನೆಲೆಯಲ್ಲಿ ನೀತಿ ಆಯೋಗದಿಂದ ದೇಶದಲ್ಲಿಯೇ ಮೊದಲ ರ‍್ಯಾಂಕ್ ಪಡೆದುಕೊಂಡಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ