AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raksha Bandhan: ರಾಯಚೂರಿನ ವಿದ್ಯಾರ್ಥಿಗಳಿಗೆ ರಾಖಿ ಕಟ್ಟಿದ ರಾಷ್ಟಪತಿ ದ್ರೌಪದಿ ಮುರ್ಮು

ರಾಷ್ಟ್ರಪತಿ ದ್ರೌಪದಿ ಮುರ್ಮು ರಕ್ಷಾ ಬಂಧನದಂದು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕೊತ್ತದೊಡ್ಡಿ ಗ್ರಾಮದ ಐವರು ವಿದ್ಯಾರ್ಥಿಗಳಿಗೆ ರಾಖಿ ಕಟ್ಟಿದ್ದಾರೆ. ಏಕಲವ್ಯ ಮಾದರಿ ವಸತಿ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಪತಿ ಭವನದಲ್ಲಿ ಈ ವಿಶೇಷ ಸಮಾರಂಭದಲ್ಲಿ ಭಾಗವಹಿಸಿದ್ದರು. ರಾಷ್ಟ್ರಪತಿಯವರು ಪರಿಸರ ಸಂರಕ್ಷಣೆಯ ಪ್ರಾಮುಖ್ಯತೆಯನ್ನು ಒತ್ತಿಹೇಳಿದರು ಮತ್ತು ಮಕ್ಕಳಿಗೆ ಸಿಹಿ ವಿತರಿಸಿದರು.

Raksha Bandhan: ರಾಯಚೂರಿನ ವಿದ್ಯಾರ್ಥಿಗಳಿಗೆ ರಾಖಿ ಕಟ್ಟಿದ ರಾಷ್ಟಪತಿ ದ್ರೌಪದಿ ಮುರ್ಮು
ರಾಯಚೂರಿನ ವಿದ್ಯಾರ್ಥಿಗಳಿಗೆ ರಾಖಿ ಕಟ್ಟಿದ ರಾಷ್ಟಪತಿ ದ್ರೌಪದಿ ಮುರ್ಮು
ಭೀಮೇಶ್​​ ಪೂಜಾರ್
| Updated By: Ganapathi Sharma|

Updated on: Aug 11, 2025 | 10:55 AM

Share

ರಾಯಚೂರು, ಆಗಸ್ಟ್ 11: ಭ್ರಾತೃತ್ವದ ಸಂಕೇತವಾದ ರಕ್ಷಾ ಬಂಧನದ (Raksha Bandhan) ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ರಾಯಚೂರಿನ ವಿದ್ಯಾರ್ಥಿಗಳಿಗೆ ರಾಖಿ ಕಟ್ಟಿ ಶುಭ ಹಾರೈಸಿದ್ದಾರೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕೊತ್ತದೊಡ್ಡಿ ಗ್ರಾಮದ ಐವರು ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಇದೇ ವೇಳೆ ವಿದ್ಯಾರ್ಥಿಗಳು ರಾಷ್ಟ್ರಪತಿಗಳಿಂದ ರಾಖಿ ಕಟ್ಟಿಸಿಕೊಂಡು ಸಂತಸಪಟ್ಟಿದ್ದಾರೆ. ಏಕಲವ್ಯ ಮಾದರಿ ವಸತಿ ಶಾಲೆ ವಿದ್ಯಾರ್ಥಿಗಳಾದ ಸುರೇಶ, ಚನ್ನಬಸವ, ಮಂಜುನಾಥ, ಭರತ್‌ ಮತ್ತು ಮಣಿಕಂಠಗೆ ಮುರ್ಮು ರಾಖಿ ಕಟ್ಟಿದ್ದಾರೆ. ಈ ವೇಳೆ ಶಿಕ್ಷಕ ರವಿಕುಮಾ‌ರ್ ವಿದ್ಯಾರ್ಥಿಗಳ ಜೊತೆ ಹಾಹರಿದ್ದರು.

ಕೊತ್ತದೊಡ್ಡಿ ಏಕಲವ್ಯ ವಸತಿ ಶಾಲೆ ಕೇಂದ್ರ ಬುಡಕಟ್ಟು ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿದೆ. ಈ ಹಿನ್ನೆಲೆ, ಬುಡಕಟ್ಟು ಇಲಾಖೆಯ ಶಾಲಾ ಮಕ್ಕಳಿಗೆ ರಾಷ್ಟ್ರಪತಿಗಳು ಆಹ್ವಾನ ನೀಡಿದ್ದರು. ರಾಯಚೂರಿನ ದೇವದುರ್ಗ ಸೇರಿ ರಾಜ್ಯದ ನಾಲ್ಕು ಬುಡಕಟ್ಟು ಶಾಲೆಗಳ ಮಕ್ಕಳಿಗೆ ಆಹ್ವಾನ ನೀಡಲಾಗಿತ್ತು. ರಾಖಿ ಕಟ್ಟಿದ ಬಳಿಕ ರಾಷ್ಟ್ರಪತಿಗಳು ಮಕ್ಕಳಿಗೆ ಶುಭಾಶಯ ತಿಳಿಸಿ ಸಿಹಿ ವಿತರಿಸಿದ್ದಾರೆ.

ರಾಷ್ಟ್ರಪತಿಗಳು ದೇಶದಾದ್ಯಂತ ವಿವಿಧ ಶಾಲೆಗಳ ವಿದ್ಯಾರ್ಥಿಗಳನ್ನು ಆಹ್ವಾನಿಸುವ ಮೂಲಕ ರಕ್ಷಾ ಬಂಧನವನ್ನು ಆಚರಿಸಿದ್ದಾರೆ. ಸರ್ಕಾರಿ ಶಾಲೆಗಳು, ಕೇಂದ್ರೀಯ ವಿದ್ಯಾಲಯಗಳು, ಜವಾಹರ್ ನವೋದಯ ವಿದ್ಯಾಲಯಗಳು, ಕಸ್ತೂರ್ಬಾ ಗಾಂಧಿ ಬಾಲಿಕಾ ವಿದ್ಯಾಲಯಗಳು (ಕೆಜಿಬಿವಿಗಳು) ಹಾಗೂ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಶಾಲಾ ಮಕ್ಕಳು ಆಚರಣೆಯಲ್ಲಿ ಭಾಗವಹಿಸಿದ್ದಾರೆ. ಇದರಲ್ಲಿ ಕರ್ನಾಟಕದ ನಾಲ್ಕು ಬುಡಕಟ್ಟು ಶಾಲೆಗಳ ಮಕ್ಕಳು ಕೂಡ ಭಾಗವಹಿಸಿದ್ದಾರೆ.

ಇದನ್ನೂ ಓದಿ
Image
ಮೋದಿ ಜೀ ಬೆಂಗಳೂರಿನ ರಸ್ತೆಗಳು ತುಂಬಾ ಕೆಟ್ಟದಾಗಿವೆ! ಮೋದಿಗೆ ಪುಟಾಣಿಯ ಪತ್ರ
Image
ಮೈಸೂರು ದಸರಾ 2025 ರ ಉದ್ಘಾಟಕರು ಯಾರು? ಸಚಿವ ಮಹದೇವಪ್ಪ ಕೊಟ್ಟರು ಸುಳಿವು
Image
ಸಿಎಂ ಉದ್ಘಾಟಿಸಿದ್ದರೂ ಮಾದಪ್ಪನ ಭಕ್ತರ ಬಳಕೆಗೆ ಸಿಗದ ವಜ್ರಮಲೆ ಭವನ
Image
ಇಂದಿನಿಂದ ವಿಧಾನಸಭೆ ಅಧಿವೇಶನ: ಸರ್ಕಾರದ ವಿರುದ್ಧ ಸಮರಕ್ಕೆ ವಿಪಕ್ಷಗಳ ತಂತ್ರ

ಸಮಾರಂಭದಲ್ಲಿ ಮಾತನಾಡಿದ ಮುರ್ಮು, ರಕ್ಷಾ ಬಂಧನವು ಸಹೋದರ ಸಹೋದರಿಯರ ನಡುವಿನ ಪ್ರೀತಿಯ ಹಬ್ಬ ಮಾತ್ರವಲ್ಲದೆ, ಹಿರಿಯರು, ಗೆಳೆಯರು ಮತ್ತು ಪರಿಸರ ಸೇರಿದಂತೆ ಯಾರೊಂದಿಗೂ ಹಂಚಿಕೊಳ್ಳಬಹುದಾದ ಸಾರ್ವತ್ರಿಕ ಬಂಧವಾಗಿದೆ ಎಂದು ಹೇಳಿದ್ದಾರೆ. ಭೂಮಿಯ ರಕ್ಷಕರಾಗಿ ಮರಗಳ ಪಾತ್ರದ ಬಗ್ಗೆ ಅವರು ಗಮನ ಸೆಳೆದಿದ್ದಾರೆ. ಪ್ರಕೃತಿಯ ಮೇಲಿನ ಪ್ರೀತಿ ಮತ್ತು ಜವಾಬ್ದಾರಿಯ ಸೂಚಕವಾಗಿ ಅವುಗಳನ್ನು ನೆಟ್ಟು ಪೋಷಿಸಲು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ.

ರಕ್ಷಾ ಬಂಧನವು ಪ್ರೀತಿ, ಕಾಳಜಿ ಮತ್ತು ರಕ್ಷಣೆಯನ್ನು ಸಂಕೇತಿಸುತ್ತದೆ. ಈ ಮೌಲ್ಯಗಳು ಜನರ ನಡುವಿನ ಸಂಬಂಧಗಳನ್ನು ಮೀರಿ ಪರಿಸರದ ಬಗ್ಗೆ ನಮ್ಮ ಕರ್ತವ್ಯದವರೆಗೆ ವಿಸ್ತರಿಸುತ್ತವೆ ಎಂದು ಮುರ್ಮು ಅಭಿಪ್ರಾಯಟ್ಟಿದ್ದರೆ.

ಇದನ್ನೂ ಓದಿ: ಕೈತುಂಬ ರಾಖಿ, ಮುಖದ ತುಂಬ ನಗು; ಮಕ್ಕಳ ಜೊತೆ ಮಗುವಿನಂತೆ ಸಂಭ್ರಮಿಸಿದ ಪ್ರಧಾನಿ ಮೋದಿ

ಶಿಕ್ಷಣ ಖಾತೆ ರಾಜ್ಯ ಸಚಿವ ಮತ್ತು ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ರಾಜ್ಯ ಸಚಿವ (ಸ್ವತಂತ್ರ ನಿರ್ವಹಣೆ) ಜಯಂತ್ ಚೌಧರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕಾರ್ಯದರ್ಶಿ ಸಂಜಯ್ ಕುಮಾರ್ ಮತ್ತು ಶಿಕ್ಷಣ ಸಚಿವಾಲಯದ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ