ರಾಯಚೂರು: ಪೆನ್ನು ಕದ್ದ ವಿದ್ಯಾರ್ಥಿಯನ್ನ ಹೊಡೆದು ಕತ್ತಲ ಕೋಣೆಗೆ ಹಾಕಿದ ರಾಮಕೃಷ್ಣ ಆಶ್ರಮ ಗುರೂಜಿ

ವಿದ್ಯಾರ್ಥಿಯೋರ್ವ ಪೆನ್ನು ಕದ್ದ ಎಂಬ ಕಾರಣಕ್ಕೆ ರಾಯಚೂರು ರಾಮ ಕೃಷ್ಣ ಆಶ್ರಮದಲ್ಲಿ ಗುರೂಜಿ ವಿದ್ಯಾರ್ಥಿಯ ಮೇಲೆ ಮನ ಬಂದಂತೆ ಹಲ್ಲೆ ನಡೆಸಿದ್ದು ಮೂರು ದಿನಗಳ ಕಾಲ ಕತ್ತಲ ಕೋಣೆಯಲ್ಲಿ ಕೂಡು ಹಾಕಿ ದರ್ಪ ಮೆರೆದಿದ್ದಾರೆ. ಬಾಲಕನ ತಾಯಿ ಆಶ್ರಮಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ರಾಯಚೂರು: ಪೆನ್ನು ಕದ್ದ ವಿದ್ಯಾರ್ಥಿಯನ್ನ ಹೊಡೆದು ಕತ್ತಲ ಕೋಣೆಗೆ ಹಾಕಿದ ರಾಮಕೃಷ್ಣ ಆಶ್ರಮ ಗುರೂಜಿ
ಪೆನ್ನು ಕದ್ದ ವಿದ್ಯಾರ್ಥಿಯನ್ನ ಹೊಡೆದು ಕತ್ತಲ ಕೋಣೆಗೆ ಹಾಕಿದ ಗುರೂಜಿ
Follow us
ಭೀಮೇಶ್​​ ಪೂಜಾರ್
| Updated By: ಆಯೇಷಾ ಬಾನು

Updated on: Aug 03, 2024 | 12:20 PM

ರಾಯಚೂರು, ಆಗಸ್ಟ್.03: ರಾಯಚೂರಿನ ರಾಮಕೃಷ್ಣ ಆಶ್ರಮದಲ್ಲಿ (Ramakrishna Ashram) ಅಮಾನವೀಯ ಘಟನೆಯೊಂದು ನಡೆದಿದೆ. ವಿದ್ಯಾರ್ಥಿಯೋರ್ವ ಪೆನ್ನು ಕದ್ದಿದ್ದಾನೆ ಎಂಬ ಕಾರಣಕ್ಕೆ ಆಶ್ರಮದ ಗುರೂಜಿ ವಿದ್ಯಾರ್ಥಿಯನ್ನು ಮನಬಂದಂತೆ ಥಳಿಸಿದ್ದಾರೆ (Assault Case) ಎಂಬ ಆರೋಪ ಕೇಳಿ ಬಂದಿದೆ. ಅಷ್ಟೇ ಅಲ್ಲದೆ ವಿದ್ಯಾರ್ಥಿಯನ್ನು ಮೂರು ದಿನಗಳ ಕಾಲ ಕತ್ತಲೆ ಕೋಣೆಯಲ್ಲಿ ಕೂಡಿಟ್ಟಿದ್ದಾರೆ. ವಿದ್ಯಾರ್ಥಿಯ ಕಣ್ಣುಗಳು ಬಾವು ಬರುವಂತೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ವಿದ್ಯಾರ್ಥಿ ಶ್ರವಣ್ ಕುಮಾರ್ ಹಲ್ಲೆಗೊಳಗಾದ ಬಾಲಕ. ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಶ್ರವಣ್ ಕುಮಾರ್ ಕುಟುಂಬದಲ್ಲಿ ಕಡು ಬಡತನ ಹಿನ್ನೆಲೆ ಆಶ್ರಮದಲ್ಲಿದ್ದ. ತನ್ನ ಸಹಪಾಠಿಗಳ ಜೊತೆ ಆಟವಾಡುತ್ತಾ ಒಮ್ಮೆ ಪೆನ್ನು ಕದ್ದಿದ್ದ. ಈ ವಿಚಾರ ಸಂಬಂಧ ಶ್ರವಣಕುಮಾರ್ ಸಹಪಾಠಿಗಳು ಆತನ ವಿರುದ್ಧ ದೂರೂ ನೀಡಿದ್ದರು. ದೂರಿನ್ವಯ ರಾಮಕೃಷ್ಣ ಮಠದ ಗುರೂಜಿ ವೇಣುಗೋಪಾಲ ಎಂಬುವವರು ಶ್ರವಣ್ ಕುಮಾರ್​ನನ್ನು ಕರೆದು ಮನಬಂದಂತೆ ಥಳಿಸಿದ್ದಾರೆ. ಜೊತೆಗೆ ಮೂರು ದಿನಗಳ ಕಾಲ ಕತ್ತಲೇ ಕೋಣೆಯಲ್ಲಿ ಕೂಡಿ ಹಾಕಿದ್ದಾರೆ.

ರಾಯಚೂರು ನಗರದ ಸ್ಟೇಷನ್ ರಸ್ತೆಯಲ್ಲಿರುವ ರಾಮಕೃಷ್ಣ ಆಶ್ರಮಕ್ಕೆ ಆಕಸ್ಮಿಕವಾಗಿ ಶ್ರವಣ್ ಕುಮಾರ್ ತಾಯಿ ಭೇಟಿ ನೀಡಿದಾಗ ವಿಷಯ ಬಹಿರಂಗವಾಗಿದೆ. ಸದ್ಯ ಶ್ರವಣಕುಮಾರ್‌ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೈಕೈ ತುಂಬಾ ಗಾಯಗಳಾಗಿದ್ದು, ಕಣ್ಣು ಪೂರ್ತಿ ಬಾವು ಬಂದಿದೆ. ರಾಯಚೂರು ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಗನ ಸ್ಥಿತಿಗೆ ಪೋಷಕರು ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ಫೋನ್​​​ ಪಕ್ಕಕ್ಕಿಡು ಎಂದು ಗದರಿಸಿದ ಹೆತ್ತವರ ವಿರುದ್ದ ಎಫ್ಐಆರ್ ದಾಖಲಿಸಿದ ಮಕ್ಕಳು

ರೋಗಿ ನೆಪದಲ್ಲಿ ಬಂದು ವೈದ್ಯಯ ಚಿನ್ನದ ಸರ ಎಗರಿಸಿದ್ರು!

ರೋಗಿ ನೆಪದಲ್ಲಿ ಆಸ್ಪತ್ರೆಗೆ ಬಂದ ಕಳ್ಳ, ವೈದ್ಯೆಯ ಚಿನ್ನದ ಮಾಂಗಲ್ಯ ಸರ ಎಗರಿಸಿದ್ದಾನೆ. ವಿಜಯಪುರ ಜಿಲ್ಲೆಯ ಕಾಳಿಕಾನಗರದ ಪಾಟೀಲ್ ಕ್ಲಿನಿಕ್​ನಲ್ಲಿ ಕಳೆದ ಜುಲೈ 30ರಂದು ಘಟನೆ ನಡೆದಿದ್ದು, ಪಾಟೀಲ್ ಕ್ಲಿನಿಕ್ ವೈದ್ಯೆ ಡಾ.ಸರೋಜಿನಿ ಪಾಟೀಲ್ ಎಂಬುವರ 11 ಗ್ರಾಂ ಚಿನ್ನದ ಸರ ಕಸಿದು ಖದೀಮರು ಎಸ್ಕೇಪ್ ಆಗಿದ್ದಾರೆ. ಹಲ್ಲು ನೋವು ಎಂದು ಇಂಗ್ಲಿಷ್​​ನಲ್ಲಿ ಮಾತನಾಡಿ ವೈದ್ಯೆಯ ಚಿನ್ನದ ಸರ ಕಸಿದ್ದಾನೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು