AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಕೊಲೆಗೆ ಯತ್ನ; ಕಾಮುಕ ಅರೆಸ್ಟ್​

ರಾಯಚೂರು ಜಿಲ್ಲೆಯ ಲಿಂಗಸುಗೂರು ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಬಹಿರ್ದೆಸೆಗೆ ತೆರಳಿದ್ದ 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಬಳಿಕ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ಇದೀಗ ಆರೋಪಿ ಬಸವರಾಜ್​ ಎಂಬಾತ​ನನ್ನ ಪೊಲೀಸರು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿದ್ದಾರೆ.

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಕೊಲೆಗೆ ಯತ್ನ; ಕಾಮುಕ ಅರೆಸ್ಟ್​
ಅತ್ಯಾಚಾರ ಆರೋಪಿ
ಭೀಮೇಶ್​​ ಪೂಜಾರ್
| Updated By: ಕಿರಣ್ ಹನುಮಂತ್​ ಮಾದಾರ್|

Updated on:Jun 22, 2024 | 2:48 PM

Share

ರಾಯಚೂರು, ಜೂ.22: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಬಳಿಕ ಕೊಲೆಗೆ ಯತ್ನಿಸಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು(Lingasugur) ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದೆ. 17 ವರ್ಷದ ಅಪ್ರಾಪ್ತೆ ಬಹಿರ್ದೆಸೆಗೆ ತೆರಳಿದ್ದ ವೇಳೆ ಆಕೆಯನ್ನ ಎಳೆದೊಯ್ದು ಪೊದೆಯೊಂದರಲ್ಲಿ ಅತ್ಯಾಚಾರವೆಸಗಿ ಬಳಿಕ ಕಲ್ಲಿನಿಂದ ಜಜ್ಜಿ ಹತ್ಯೆಗೈಯಲು ಯತ್ನಿಸಿದ್ದಾನೆ. ಇದೀಗ ಆರೋಪಿ ಬಸವರಾಜ್​ ಎಂಬಾತ​ನನ್ನ ಪೊಲೀಸರು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚೆಗಷ್ಟೇ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಪೆರ್ನೆಯ‌ ಬಿಳಿಯೂರು ಎಂಬಲ್ಲಿ ಚಿಕ್ಕಮ್ಮನ ಮೇಲೆಯೇ ಬಾಲಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿ, ಸಹಕರಿಸದ ಹಿನ್ನಲೆಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ  ನಡೆದಿತ್ತು. ಹೇಮಾವತಿ(37) ಕೊಲೆಯಾದ ಮಹಿಳೆ. ಜೂ.17 ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇನ್ನು ಮೊದಲು ಮನೆ ಮಂದಿ ಎಲ್ಲರೂ ಪೋಲೀಸರಿಗೆ ಹೃದಯಾಘಾತದಿಂದ ಸಾವು ಎನ್ನುವ ಮಾಹಿತಿ ನೀಡಿದ್ದರು. ಆದರೆ, ಮೃತದೇಹವನ್ನು ಪರಿಶೀಲಿಸಿದ ಸಂದರ್ಭದಲ್ಲಿ ಕೊಲೆಯಾಗಿರುವ ವಿಚಾರ ಬೆಳಕಿಗೆ ಬಂದಿತ್ತು. ವಿಚಾರಣೆಯ ವೇಳೆ ಬಾಲಕ ಕೃತ್ಯವನ್ನು ಒಪ್ಪಿಕೊಂಡಿದ್ದ. ಇದೀಗ ರಾಯಚೂರು ಜಿಲ್ಲೆಯಲ್ಲಿ ಇಂತಹ ಪ್ರಕರಣ ಬೆಳಕಿಗೆ ಬಂದಿದೆ.

ಇದನ್ನೂ ಓದಿ:ಅತ್ಯಾಚಾರ ಪ್ರತಿರೋಧಿಸಿದ ನವವಿವಾಹಿತ ಮಹಿಳೆಗೆ ಚಾಕು ಇರಿತ

ಅಡ್ರೆಸ್ ಕೇಳುವ ನೆಪದಲ್ಲಿ ಸರಗಳ್ಳತನ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಸರಗಳವು ನಡೆದಿದೆ. ಕೆಂಪಲಿಂಗನಹಳ್ಳಿ ಬಳಿ ಹಿಂದಿ ಬಾಷೆಯಲ್ಲಿ ಅಡ್ರೆಸ್ ಕೇಳುವ ನೆಪದಲ್ಲಿ ಬಂದ ದುಷ್ಕರ್ಮಿಗಳು, ರಂಗಮ್ಮ(55) ಎಂಬುವವರ 2ಲಕ್ಷದ 25ಸಾವಿರ ಬೆಲೆಬಾಳುವ ಮಾಂಗಲ್ಯ ಸರ ಎಗರಿಸಿದ್ದಾರೆ. ಇತ್ತ ಚಿಕ್ಕಬಿದರಕಲ್ಲು ಬಳಿ ನಿರ್ಮಲಾ ಪ್ರಾವಿಜನ್ ಸ್ಟೋರ್ ನಲ್ಲಿ ಲೇಸ್ ಪಾಕೆಟ್ ಕೇಳುವ ನೆಪದಲ್ಲಿ 4ಲಕ್ಷದ 50ಸಾವಿರ ಬೆಲೆಬಾಳುವ ಮಾಂಗಲ್ಯ ಸರ ಕದ್ದಿದ್ದಾರೆ. ಪಲ್ಸರ್ ಬೈಕಿನಲ್ಲಿ ಬಂದಿದ್ದ ಇಬ್ಬರು ಸರಗಳ್ಳರಿಂದ ಈ ಕೃತ್ಯ ಎಸಗಲಾಗಿದೆ. ಈ ಕುರಿತು ನೆಲಮಂಗಲ ಗ್ರಾಮಾಂತರ ಹಾಗೂ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:43 pm, Sat, 22 June 24