ಇಂದಿನಿಂದ ಮಂತ್ರಾಲಯದಲ್ಲಿ ರಾಯರ 350ನೇ ಆರಾಧನ ಮಹೋತ್ಸವ

ಹಲವಾರು ಹಳೆಯ ಕಟ್ಟಡಗಳನ್ನ ತೆರವುಗೊಳಿಸಲಾಗಿದೆ. ಮುಖ್ಯದ್ವಾರದ ಬಳಿಯಲ್ಲಿ ರಸ್ತೆ ಅಗಲೀಕರಣ ಮಾಡಲಾಗಿದೆ. ಹಳೆಯ ಪಾದಚಾರಿ ಮಾರ್ಗಗಳನ್ನ ನೆಲಸಮ ಮಾಡಲಾಗಿದೆ. ನವ ಮಂತ್ರಾಲಯ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ.

ಇಂದಿನಿಂದ ಮಂತ್ರಾಲಯದಲ್ಲಿ ರಾಯರ 350ನೇ ಆರಾಧನ ಮಹೋತ್ಸವ
ಸುಭುದೇಂದ್ರ ತೀರ್ಥರು
Follow us
TV9 Web
| Updated By: sandhya thejappa

Updated on:Aug 21, 2021 | 1:18 PM

ರಾಯಚೂರು: ಇಂದಿನಿಂದ (ಆಗಸ್ಟ್ 21) ಮಂತ್ರಾಲಯದಲ್ಲಿ (Mantralayam) ರಾಯರ 350ನೇ ಆರಾಧನ ಮಹೋತ್ಸವ ನಡೆಯುತ್ತಿದೆ. ಮಂತ್ರಾಲಯ ಶ್ರೀಮಠದಲ್ಲಿ ರಾಯರ ಆರಾಧನೆ ಸಂಭ್ರಮ ಕಳೆಗಟ್ಟಿದೆ. ಏಳು ದಿನಗಳ ಕಾಲ ನಡೆಯುವ ರಾಯರ ಆರಾಧನೆ ಹಿನ್ನೆಲೆ ನಾಡಿನ ಹೆಸರಾಂತ ವಿದ್ವಾಂಸರಿಂದ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಆಯೊಜನೆ ಮಾಡಲಾಗಿದೆ. ಇನ್ನು 350ನೇ ಆರಾಧನೆ ಹಿನ್ನೆಲೆ ಮಂತ್ರಾಲಯದಲ್ಲಿ ಅಭಿವೃದ್ಧಿ ಪರ್ವಕ್ಕೆ ಚಾಲನೆ ನೀಡಲಾಗಿದೆ. ಶ್ರೀಮಠದ ಪೀಠಾಧಿಪತಿ ಸುಭುದೇಂದ್ರ ತೀರ್ಥರ ನೇತೃತ್ವದಲ್ಲಿ ಅಭಿವೃದ್ದಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ.

ಹಲವಾರು ಹಳೆಯ ಕಟ್ಟಡಗಳನ್ನ ತೆರವುಗೊಳಿಸಲಾಗಿದೆ. ಮುಖ್ಯದ್ವಾರದ ಬಳಿಯಲ್ಲಿ ರಸ್ತೆ ಅಗಲೀಕರಣ ಮಾಡಲಾಗಿದೆ. ಹಳೆಯ ಪಾದಚಾರಿ ಮಾರ್ಗಗಳನ್ನ ನೆಲಸಮ ಮಾಡಲಾಗಿದೆ. ನವ ಮಂತ್ರಾಲಯ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ.

350ನೇ ಆರಾಧನ ಮಹೋತ್ಸವದ ಬಗ್ಗೆ ಸುಭುದೇಂದ್ರ ತೀರ್ಥರು ಕೆಲ ಮಾಹಿತಿಯನ್ನು ನೀಡಿದ್ದಾರೆ. ರಾಯರು ಬೃಂದಾವನ ಸೇರಿ 350 ವರ್ಷವಾಗಿದೆ. ಆಗಸ್ಟ್ 21, 22, 23, 24, 25, 26, 27ರ ವರೆಗೆ ಏಳು ದಿನ ಸಪ್ತ ರಾತ್ರೋತ್ಸವ (Saptha Rathotsava) ನಡೆಯಲಿದೆ. 22, 23, 24ರಂದು ರಾಯರ ಆರಾಧನೆ ಮಹೋತ್ಸವ ಹಿನ್ನೆಲೆ ವಿಶೇಷ ಪೂಜೆ ಮಹಾಭಿಷೇಕ ನಡೆಯಲಿದೆ. ಕೊರೊನಾ ಸಂಕಷ್ಟ ಗಮನದಲ್ಲಿಟುಕೊಂಡು ಅತ್ಯಂತ ಸರಳವಾಗಿ ಆರಾಧನ ಮಹೋತ್ಸವ ರೂಪಿಸಲಾಗಿದೆ ಎಂದು ಸುಭುದೇಂದ್ರ ತೀರ್ಥರು ಆಗಸ್ಟ್ 19ರಂದು ನಡೆದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.

ವಯೋ ವೃದ್ಧರಿಗೆ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಅಂಬುಲೆನ್ಸ್ ಸೇರಿ ತುರ್ತು ಸೇವೆಯ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರಿಮಳ ಪ್ರಸಾದದ ವ್ಯವಸ್ಥೆ ಸಹ ಮಾಡಲಾಗಿದೆ. ವಯೋ ವೃದ್ಧರಿಗೆ ಶೀಘ್ರ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ನಾಡಿನ ಮೂಲೆ ಮೂಲೆಯಿಂದಲೂ ಅಸಂಖ್ಯಾತ ಭಕ್ತರು ಶ್ರಿಮಠಕ್ಕೆ ಆಗಮಿಸುವ ಸಾಧ್ಯತೆ ಇದೆ. ಹೀಗಾಗಿ ಕೊವಿಡ್ ನಿಯಮಗಳನ್ನ ತಪ್ಪದೆ ಪಾಲಿಸುತ್ತ ಎಲ್ಲ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಸುಭುದೇಂದ್ರ ತೀರ್ಥರು ಹೇಳಿದ್ದಾರೆ.

ಇದನ್ನೂ ಓದಿ

ಹಂಪಿಯ ವಿರೂಪಾಕ್ಷ ದೇವಸ್ಥಾನಕ್ಕೆ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಭೇಟಿ; ಇಲ್ಲಿವೆ ಚಿತ್ರಗಳು ಮಂತ್ರಾಲಯದಲ್ಲಿ ಗುರು ರಾಯರ 350ನೇ ಆರಾಧನೆ; ಆ.21ರಿಂದ 27ರ ವರೆಗೆ ಸಪ್ತ ರಾತ್ರೋತ್ಸವ

(Rayara 350th Worshipful Jubilee will be held in Mantralayam from today)

Published On - 1:16 pm, Sat, 21 August 21

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ