AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಆರ್​ಬಿ ತಿಮ್ಮಾಪುರ ಒಡೆತನದ ಕಂಪನಿ ವಿರುದ್ಧ ಸರ್ಕಾರಿ ಭೂಮಿ ಕಬಳಿಕೆ ಆರೋಪ

ಅಬಕಾರಿ ಸಚಿವ ಆರ್​ಬಿ ತಿಮ್ಮಾಪುರ ಒಡೆತನದ ಆರ್​​ಬಿ ಶುಗರ್ಸ್ ಕಂಪನಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಕಂದಾಯ ಇಲಾಖೆಯ ಭೂಮಿಯನ್ನು ಅಕ್ರಮವಾಗಿ ಕಬಳಿಕೆ ಮಾಡಿಕೊಂಡಿರುವ ಆರೋಪವಿದೆ. ಈ ಬಗ್ಗೆ ರೈತ ಸಂಘ ಲಿಂಗಸುಗೂರು ತಹಶೀಲ್ದಾರ್ಗೆ ದೂರು ನೀಡಿದೆ.

ಸಚಿವ ಆರ್​ಬಿ ತಿಮ್ಮಾಪುರ ಒಡೆತನದ ಕಂಪನಿ ವಿರುದ್ಧ ಸರ್ಕಾರಿ ಭೂಮಿ ಕಬಳಿಕೆ ಆರೋಪ
ರೈತ ಸಂಘ ದೂರು
ಭೀಮೇಶ್​​ ಪೂಜಾರ್
| Edited By: |

Updated on:Sep 18, 2024 | 10:35 AM

Share

ರಾಯಚೂರು, ಸೆಪ್ಟೆಂಬರ್​ 17: ಸಚಿವ ಆರ್​ಬಿ ತಿಮ್ಮಾಪುರ (RB Timmapur) ಒಡೆತನದ ಆರ್​​ಬಿ ಶುಗರ್ಸ್​​ ಕಂಪನಿ ವಿರುದ್ಧ ಸರ್ಕಾರಿ ಭೂಮಿ (Government Land) ಕಬಳಿಸಿರುವ ಆರೋಪ ಕೇಳಿಬಂದಿದೆ. ಚಿಕ್ಕ ಉಪ್ಪೇರಿ ಗ್ರಾಮದ ಸರ್ವೆ ನಂ62ರ ಗೈರಾಣಿ ಜಮೀನನ್ನು ಅಕ್ರಮವಾಗಿ ವಶಪಡಿಸಿಕೊಳ್ಳಲಾಗಿದೆ ಎಂದು ರೈತ ಸಂಘ ಲಿಂಗಸುಗೂರು ತಹಶೀಲ್ದಾರ್​ರಿಗೆ ಪತ್ರ ಬರೆದಿದೆ. ಈ ಭೂಮಿ ಆರ್​ಬಿ ಶುಗರ್ಸ್ ಕಂಪನಿ ಹೆಸರಿನಲ್ಲಿದೆ.

ರೈತ ಸಂಘ ಆರೋಪ

ಪ್ರಭಾವಿ ವ್ಯಕ್ತಿಗಳು ಸುಣಕಲ್​ ಸಿಮಾಂತರದಲ್ಲಿ ಜಮೀನು ಖರೀದಿ ಮಾಡಿ ಅದರ ಪಕ್ಕದಲ್ಲೇ ಇರುವ ಗೈರಾಣಿ ಭೂಮಿಯನ್ನು ಹೆಚ್ಚುವರಿಯಾಗಿ ವಶಪಡಿಸಿಕೊಂಡಿದ್ದಾರೆ. ಆದರೆ, ಈ ಭೂಮಿ ಜಾನುವಾರು ಅಭಿವೃದ್ಧಿಗಾಗಿ ಸೀಮಿತವಾಗಿದೆ. ಈ ಭೂಮಿಯಲ್ಲಿ ಸಕ್ಕರೆ ಕಾರ್ಖಾನೆ ನಿರ್ಮಿಸುವ ವಂದತಿ ಹಬ್ಬಿದ್ದು, ಸುತ್ತಮುತ್ತಲಿನ ಗ್ರಾಮಕ್ಕೆ ಪರಿಸರ ಮಾಲಿನ್ಯವಾಗಲಿದೆ. ಹಾಗೂ ಕಲುಷಿತ ತ್ಯಾಜ್ಯ ಪಕ್ಕದಲ್ಲಿರುವ ಕೃಷ್ಣ ನದಿಗೆ ಹರಿದು ಬರುವ ಸಾಧ್ಯತೆ ಇದೆ.

ಇದನ್ನೂ ಓದಿ: ಸರ್ಕಾರಿ ಭೂಮಿ ಕಬಳಿಕೆ; ದಕ್ಷಿಣ ಕರ್ನಾಟಕದಲ್ಲಿ ಮುಂಚೂಣಿಯಲ್ಲಿದೆ ಚಿಕ್ಕಮಗಳೂರು

ಇದರಿಂದ ರೈತರ ಬೆಳೆಗೆ ಮತ್ತು ಜಾನುವಾರುಗಳಿಗೆ ತೊಂದರೆಯಾಗಲಿದೆ. ಹೀಗಾಗಿ ಸಕ್ಕರೆ ಕಾರ್ಖಾನೆ ನಿರ್ಮಾಣವಾಗದಂತೆ ತಡೆ ಹಿಡಿದು, ಸರ್ಕಾರಿ ಗೈರಾಣಿ ಭೂಮಿಯನ್ನು ರಕ್ಷಿಸಿ ದನಕರುಗಳು,  ಕುರಿ ಮತ್ತು ಮೇಕೆಗಳಿಗೆ ಮೀಸಲಿಡಬೇಕು ಎಂದು ರೈತ ಸಂಘ ಪತ್ರದಲ್ಲಿ ಉಲ್ಲೇಖಿಸಿದೆ. ಅಲ್ಲದೆ ಚಿಕ್ಕ ಉಪ್ಪೇರಿ ಗ್ರಾಮದ ಮಧ್ಯದಲ್ಲಿ 50 ಫೀಟ್​​​ ರಸ್ತೆ ನಿರ್ಮಾಣ ಮಾಡಲು ನಿರ್ಧರಿಸಲಾಗಿದ್ದು, ಇದನ್ನು ತಡೆಯಬೇಕು ಎಂದು ಒತ್ತಾಯಿಸಿದೆ.

ಇದಲ್ಲದೇ ಅರಣ್ಯ ಹಾಗೂ ಕಂದಾಯ ಇಲಾಖೆಯ ಭೂಮಿ‌ ಕೂಡ ಕಬಳಿಕೆ ಮಾಡಿರುವ ಆರೋಪ ಕೇಳಿಬಂದಿದೆ. ಕಂದಾಯ‌ ಇಲಾಖೆಯ 49 ಎಕರೆ, ಹಾಗೂ ಅರಣ್ಯ ಇಲಾಖೆಯ 43 ಎಕರೆ ಕಬಳಿಕೆ ಮಾಡಿರುವ ಆರೋಪವಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:19 am, Wed, 18 September 24

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ