ರಾಯಚೂರಿನಲ್ಲಿ ದಾಖಲೆಯ ತಾಪಮಾನ: ಮಾರ್ಚ್​ನಲ್ಲಿ 20 ವರ್ಷಗಳ ಗರಿಷ್ಠ ಮಟ್ಟಕ್ಕೆ ಉಷ್ಣಾಂಶ

ಶುಕ್ರವಾರ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವಾಡಿಕೆಗಿಂತ (1.6 ಡಿಗ್ರಿಯಿಂದ 3 ಡಿಗ್ರಿ ಸೆಲ್ಸಿಯಸ್​) ನಷ್ಟು ಅಧಿಕ ತಾಪಮಾನವು ದಾಖಲಾಗಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯವಾಗಿದೆ. ರಾಯಚೂರು ಜಿಲ್ಲೆಯಲ್ಲಿ ಜನ ಬಿಸಿಲ ಬೇಗೆಯಿಂದಾಗಿ ಮನೆಯಿಂದ ಹೊರ ಬಾರದೆ ಇರುವುದರಿಂದ ರಸ್ತೆಗಳು ಬಿಕೋ ಎನ್ನುತ್ತಿವೆ.

ರಾಯಚೂರಿನಲ್ಲಿ ದಾಖಲೆಯ ತಾಪಮಾನ: ಮಾರ್ಚ್​ನಲ್ಲಿ 20 ವರ್ಷಗಳ ಗರಿಷ್ಠ ಮಟ್ಟಕ್ಕೆ ಉಷ್ಣಾಂಶ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on: Mar 30, 2024 | 10:33 AM

ರಾಯಚೂರು, ಮಾರ್ಚ್​​ 30: ರಾಯಚೂರಿನಲ್ಲಿ (Raichur) ತಾಪಮಾನ (Temperature) ತೀವ್ರವಾಗಿ ಏರಿಕೆ ಕಂಡಿದ್ದು, ಮಾರ್ಚ್​ ತಿಂಗಳ ಉಷ್ಣಾಂಶ 20 ವರ್ಷಗಳ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. 20 ವರ್ಷಗಳ ಅವಧಿಯಲ್ಲಿನ ಮಾರ್ಚ್ ತಿಂಗಳ ಜಿಲ್ಲೆಯ ಸರಾಸರಿ ತಾಪಮಾನ 0.5 ಡಿಗ್ರಿಯಷ್ಟು ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 41 ಡಿಗ್ರಿ ಸೆಲ್ಸಿಯಸ್ ತಾಪಮಾನ ಮುಂದುವರಿಕೆಯಾಗಿದೆ. ಮುಂಬರುವ ದಿನಗಳಲ್ಲಿ °ತಾಪಮಾನ 41 ಡಿಗ್ರಿ ಗಡಿ ದಾಟುವ ಸಾಧ್ಯತೆ ಇದೆ. ಪರಿಣಾಮವಾಗಿ ರಾಯಚೂರು ಜಿಲ್ಲೆಯ ಜನ ಬಿಸಿಲ ಬೇಗೆಯಲ್ಲಿ ಬೇಯುತ್ತಿರುವಂತಾಗಿದೆ.

ರಾಯಚೂರು ಜಿಲ್ಲೆಯ ಹಡಗನಹಾಳ್ ಹೋಬಳಿಯಲ್ಲಿ ಅತ್ಯಧಿಕ, ಅಂದರೆ 42.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಲಬುರಗಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ವಿಜಯಪುರ, ಬೀದ‌ರ್, ಗದಗ, ದಾವಣಗೆರೆ, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ನಿನ್ನೆ 41 ಡಿಗ್ರಿಯಿಂದ ನಿಂದ 42.6 ಡಿಗ್ರಿ ನಡುವೆ ಗರಿಷ್ಠ ತಾಪಮಾನ ದಾಖಲಾಗಿದೆ ಎಂದು ಇಲಾಖೆ ತಿಳಿಸಿದೆ.

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (KSNDMC) ಹವಾಮಾನ ನಿರ್ವಹಣಾ ಜಾಲದ ಮಾಹಿತಿ ಪ್ರಕಾರ, ರಾಯಚೂರು ಜಿಲ್ಲೆಯ 10 ಸ್ಥಳಗಳು, ಕಲಬುರಗಿ ಜಿಲ್ಲೆಯಲ್ಲಿ 9 ಸ್ಥಳಗಳು, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ತಲಾ 4 ಸ್ಥಳಗಳು, ಬಳ್ಳಾರಿ ಜಿಲ್ಲೆಯಲ್ಲಿ 3 ಸ್ಥಳಗಳು, ವಿಜಯಪುರ ಜಿಲ್ಲೆಯಲ್ಲಿ 2 ಸ್ಥಳಗಳು, ಬೀದರ್, ಗದಗ, ದಾವಣಗೆರೆ, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಯ ತಲಾ 1 ಸ್ಥಳಗಳಲ್ಲಿ, ಗರಿಷ್ಠ 41 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಶುಕ್ರವಾರ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವಾಡಿಕೆಗಿಂತ (1.6 ಡಿಗ್ರಿಯಿಂದ 3 ಡಿಗ್ರಿ ಸೆಲ್ಸಿಯಸ್​) ನಷ್ಟು ಅಧಿಕ ತಾಪಮಾನವು ದಾಖಲಾಗಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯವಾಗಿದೆ.

ರಾಯಚೂರು ಜಿಲ್ಲೆಯಲ್ಲಿ ಜನ ಬಿಸಿಲ ಬೇಗೆಯಿಂದಾಗಿ ಮನೆಯಿಂದ ಹೊರ ಬಾರದೆ ಇರುವುದರಿಂದ ರಸ್ತೆಗಳು ಬಿಕೋ ಎನ್ನುತ್ತಿವೆ. ಅನಿವಾರ್ಯ ಸಂದರ್ಭಗಳಲ್ಲಿ ಜನ ಹೊರಹೋಗುವುದಿದ್ದರೂ ಛತ್ರಿ ಹಿಡಿದು, ಮುಖಕ್ಕೆ‌ ಸ್ಕಾರ್ಪ್ ಹಾಕಿಕೊಂಡೇ ಓಡಾಡುವ ಸ್ಥಿತಿ ಇದೆ.

ಇದನ್ನೂ ಓದಿ: ಉತ್ತರ ಕರ್ನಾಟಕದ 7 ಜಿಲ್ಲೆಗಳಲ್ಲಿ ಮುಂದಿನ 2-3 ದಿನ ಉಷ್ಣಾಂಶ ಹೆಚ್ಚಳ ಸಾಧ್ಯತೆ

ಇನ್ನು ಮಕ್ಕಳು, ವೃದ್ಧರು ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆ ನಡುವಣ ಅವಧಿಯಲ್ಲಿ ಹೊರಗೆ ಓಡಾಡದಂತೆ ಸಲಹೆ ನೀಡಲಾಗಿದೆ. ಸನ್ ಸ್ಟ್ರೋಕ್, ನಿರ್ಜಲೀಕರಣದಂತಹ ಸಮಸ್ಯೆ ಎದುರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ತಜ್ಞರ ಸಲಹೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ