Coal shortage in RTPS: ಆರ್​ಟಿ​ಪಿಎಸ್ ಘಟಕಗಳಲ್ಲಿ ಕಲ್ಲಿದ್ದಲು ಕೊರತೆ; ಕತ್ತಲಲ್ಲಿ ಮುಳುಗಲಿದೆ ಅರ್ಧ ರಾಜ್ಯ

ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಎಂಟು ಘಟಕಗಳಿಂದ ನಿತ್ಯ 1720 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತೆ. ಆದ್ರೆ ಕಲ್ಲಿದ್ದಲು ಕೊರತೆಯಿಂದ ನಾಲ್ಕು ಘಟಕಗಳು ವಿದ್ಯುತ್ ಉತ್ಪಾದನೆಯನ್ನು ನಿಲ್ಲಿಸಿವೆ.

Coal shortage in RTPS: ಆರ್​ಟಿ​ಪಿಎಸ್ ಘಟಕಗಳಲ್ಲಿ ಕಲ್ಲಿದ್ದಲು ಕೊರತೆ; ಕತ್ತಲಲ್ಲಿ ಮುಳುಗಲಿದೆ ಅರ್ಧ ರಾಜ್ಯ
RTPS ಘಟಕ

ರಾಯಚೂರು: ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರಕ್ಕೆ(Raichur Thermal Power Station) ಕಲ್ಲಿದ್ದಲು ಕೊರತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವಿದ್ಯುತ್ ಅಭಾವ ಉಂಟಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ಸಿಕ್ಕಿದೆ. ರಾಜ್ಯಕ್ಕೆ ಶೇ. 45 ರಷ್ಟು ವಿದ್ಯುತ್ ನೀಡುವ ಆರ್​ಟಿ​ಪಿಎಸ್ ಘಟಕಗಳಲ್ಲಿ ಕಲ್ಲಿದ್ದಲು ಕೊರತೆ ಉಂಟಾಗಿದ್ದು ವಿದ್ಯುತ್ ಉತ್ಪಾದನೆಯಲ್ಲಿ ಸಮಸ್ಯೆ ಎದುರಾಗಿದೆ.

ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಎಂಟು ಘಟಕಗಳಿಂದ ನಿತ್ಯ 1720 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತೆ. ಆದ್ರೆ ಕಲ್ಲಿದ್ದಲು ಕೊರತೆಯಿಂದ ನಾಲ್ಕು ಘಟಕಗಳು ವಿದ್ಯುತ್ ಉತ್ಪಾದನೆಯನ್ನು ನಿಲ್ಲಿಸಿವೆ. ಕೇವಲ 4 ಘಟಕಗಳಿಂದ 480 ರಿಂದ 500 ಮೆಗಾ ವ್ಯಾಟ್ ವಿದ್ಯುತ್ ಮಾತ್ರ ಉತ್ಪಾದನೆಯಾಗುತ್ತಿದೆ. ಇಂದಿಗೆ 12,010 ಮೆಟ್ರಿಕ್ ಟನ್ ಕಲ್ಲಿದ್ದಲು ಮಾತ್ರ ಸ್ಟಾಕ್ ಇದ್ದು, ನಾಲ್ಕು ಘಟಕಗಳಿಗೆ ಮಾತ್ರ ಕಲ್ಲಿದ್ದಲು ಪೂರೈಕೆಯಾಗುತ್ತಿದೆ.

ಎಂಟು ಘಟಕಗಳು ಉತ್ಪಾದನೆಗೆ 25 ಸಾವಿರ ಮೆಟ್ರಿಕ್ ಟನ್ ಕಲ್ಲಿದ್ದಲು ಬೇಕು. ಸಿಂಗರೇಣಿ, ಮಹಾನದಿ ಮತ್ತು ವೆಸ್ಟರ್ನ್ ಕೋಲ್ ಗಣಿಯಿಂದ ದಿನಕ್ಕೆ 8 ರಿಂದ 9 ರೇಕ ಕಲ್ಲಿದ್ದಲು ಬರ್ತಾ ಇತ್ತು. ಪ್ರಸ್ತುತ ಕೇವಲ 3 ರಿಂದ 4 ರೇಕ ಕಲ್ಲಿದ್ದಲು ಬರ್ತಿದೆ. ಇಂದು ಕಲ್ಲಿದ್ದಲು ಬಾರದಿದ್ದರೆ ವಿದ್ಯುತ್ ಉತ್ಪಾದಿಸುತ್ತಿರುವ 4 ಘಟಕಗಳು ಬಂದ್ ಆಗುವ ಆತಂಕ ಎದುರಾಗಿದೆ. ಇನ್ನೂ ವೈಟಿಪಿಎಸ್ ಒಂದೇ ಘಟಕದಿಂದ ವಿದ್ಯುತ್ ಉತ್ಪಾದನೆಯಾಗುತ್ತಿದ್ದು 25 ಸಾವಿರ ಮೆಟ್ರಿಕ್ ಟನ್ ಕಲ್ಲಿದ್ದಲು ಸ್ಟಾಕ್ ಇದ್ದು, ಎರಡು ದಿನಕ್ಕೆ ಮಾತ್ರ ಸಾಕಾಗಲಿದೆ. ಹೀಗಾಗಿ ರಾಜ್ಯಕ್ಕೆ ವಿದ್ಯುತ್ ಕ್ಷಾಮ ಎದುರಾಗುವ ಸಾಧ್ಯತೆ ಇದೆ ಎಂದು ಆರ್​ಟಿ​ಪಿಎಸ್ ಘಟಕದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಆರ್​ಟಿಪಿಎಸ್ ಘಟಕದಲ್ಲಿನ 7 ವಿದ್ಯುತ್ ಉತ್ಪಾದನೆ ಘಟಕ ಸ್ಥಗಿತ ; ಬೇಡಿಕೆ ಹೆಚ್ಚಾದರೂ ಪೂರೈಕೆಗೆ ಹಿಂದೇಟು

Read Full Article

Click on your DTH Provider to Add TV9 Kannada