AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಮರಳು ದಂಧೆ ವಿರುದ್ಧ ಸಮರ ಸಾರಿದ ಜೆಡಿಎಸ್​ ಶಾಸಕಿ ಮನೆಗೆ ನುಗ್ಗಿ ಧಮ್ಕಿ

ರಾಯಚೂರಿನ ಹಲವೆಡೆ ಅಕ್ರಮ ಮರಳು ದಂಧೆ ಎಗ್ಗಿಲ್ಲದೇ ನಡೆಯುತ್ತಿದೆ. ಅದರಲ್ಲೂ ದಂಧೆಕೋರರಿಂದ ದೇವದುರ್ಗ ತಾಲೂಕಿನಲ್ಲಿ ಕೃಷ್ಣಾ ನದಿಯನ್ನು ಬಗೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದೇವದುರ್ಗ ಜೆಡಿಎಸ್ ಶಾಸಕಿ ಕರೆಮ್ಮ ಅವರು ಮೊದಲಿನಿಂದಲೂ ಅಕ್ರಮ ಮರಳು ದಂಧೆ ವಿರುದ್ಧ ಸಮರ ಸಾರುತ್ತ ಬಂದಿದ್ದಾರೆ. ಇದರಿಂದ ರೊಚ್ಚಿಗೆದ್ದ ದಂಧೆಕೋರರು, ಈಗ ಓರ್ವ ಶಾಸಕಿಯ ಮನೆಗೆ ನುಗ್ಗಿ ತಂಟೆಗೆ ಬರದಂತೆ ವಾರ್ನಿಂಗ್ ಕೊಟ್ಟಿರುವ ಘಟನೆ ನಡೆದಿದೆ.

ಅಕ್ರಮ ಮರಳು ದಂಧೆ ವಿರುದ್ಧ ಸಮರ ಸಾರಿದ ಜೆಡಿಎಸ್​ ಶಾಸಕಿ ಮನೆಗೆ ನುಗ್ಗಿ ಧಮ್ಕಿ
Jds Mla Karemma Nayak
ಭೀಮೇಶ್​​ ಪೂಜಾರ್
| Edited By: |

Updated on: Jan 20, 2026 | 5:03 PM

Share

ರಾಯಚೂರು, (ಜನವರಿ 20): ಅಕ್ರಮ ಮರಳು ದಂಧೆ (illegal sand mining )ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ದೇವದುರ್ಗ (Devadurga) ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಶಾಸಕಿ ಕರೆಮ್ಮ ನಾಯಕ್ (Karemma Nayak) ಮನೆಗೆ ನುಗ್ಗಿ ಧಮ್ಕಿ ಹಾಕಿರುವ ಆರೋಪ ಕೇಳಿಬಂದಿದೆ. ಕೃಷ್ಣಾ ನದಿ ತೀರದಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆಕೋರರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಪೊಲಿಸರಿಗೆ ಶಾಸಕಿ ಕರೆಮ್ಮ ಸೂಚನೆ ನೀಡಿದ್ದರು. ಈ ಸೂಚನೆ ಮೇರೆಗೆ ಪೊಲೀಸರು, ಅಕ್ರಮ ಮರಳು ದಂಧೆ ಮೇಲೆ ದಾಳಿ ಮಾಡಿದ್ದು, ಜೆಸಿಬಿ,ಟಿಪ್ಪರ್, ಟ್ರಾಕ್ಟರ್ ಗಳು ಸೇರಿದಂತೆ ಏಳು ವಾಹನಗಳನ್ನು ಜಪ್ತಿ ಮಾಡಿ ಕೇಸ್ ದಾಖಲಿಸಿದ್ದರು. ಇದರಿಂದ ಆಕ್ರೋಶಗೊಂಡ ದಂಧೆಕೋರರು ಶಾಸಕಿ ಕರೆಮ್ಮ ನಿವಾಸಕ್ಕೆ ನುಗ್ಗಿ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕದಂತೆ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಸ್ವತಃ ಶಾಸಕಿ ಕರೆಮ್ಮ ಆರೋಪಿಸಿದ್ದು, ಈ ಸಂಬಂಧ ದೇವದುರ್ಗ ಠಾಣೆಯಲ್ಲಿ ಸುಮಾರು 60ಕ್ಕೂ ಹೆಚ್ಚು ಜನರ ವಿರುದ್ಧ ಎಫ್​​ಐಆರ್ ದಾಖಲಾಗಿದೆ.

ಅಕ್ರಮ ವಿರುದ್ಧ ಸಮರ ಸಾರಿದ್ದಕ್ಕೆ ಬೆದರಿಕೆ

ಕರೆಮ್ಮ ಗೆದ್ದ ಮೇಲಿಂದಲೂ ಸಹ  ಕೃಷ್ಣಾ ನದಿ ತೀರದಲ್ಲಿ ನಡೆಯುತ್ತಿದ್ದ ಅಕ್ರಮ‌ ಮರಳು ದಂಧೆ ವಿರುದ್ಧ ಸಮರ ಸಾರುತ್ತಲೇ ಬಂದಿದ್ದಾರೆ.  ಈ ಸಂಬಂಧ ದೇವದುರ್ಗ ಠಾಣೆಯಲ್ಲಿ ಏಳು ಪ್ರತ್ಯೇಕ ಅಕ್ರಮ ಮರಳು ಸಾಗಾಟ ಪ್ರಕರಣ ದಾಖಲಾಗಿದ್ದವು. ಈ ಪ್ರಕರಣ ಸಂಬಂಧ ಪೊಲೀಸರು ಜನವರಿ‌ 18ರಂದು ಜೆಸಿಬಿ,ಟಿಪ್ಪರ್,ಟ್ರಾಕ್ಟರ್ ಗಳು ಸೇರಿ ಏಳು ವಾಹನಗಳನ್ನು ಜಪ್ತಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ದಂಧೆಕೋರರು, ಶಾಸಕಿ ಕರೆಮ್ಮ ಮನೆಗೆ ನುಗ್ಗಿ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕದಂತೆ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಶಾಸಕಿ ಕರೆಮ್ಮ ಸಹ ರಾಯಚೂರು ಎಸ್ ಪಿ ಅರುಣಾಂಗ್ಷುಗಿರಿ ಅವರಿಗೆ ದೂರು ನೀಡಿದ್ದು, ಬೆದರಿಕೆ ಹಾಕಿರುವವರು ಹಾಗೂ ಅಕ್ರಮ ಮರಳು ದಂಧೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ರಾಯಚೂರು: 2 ಕೋಟಿ ರೂ ಬಿಲ್ ಪಾವತಿಸದ ಸಮಾಜ ಕಲ್ಯಾಣ ಇಲಾಖೆಗೆ ಕೋರ್ಟ್ ತಕ್ಕ ಶಾಸ್ತಿ

ಶಾಸಕಿ ಕರೆಮ್ಮ ಹೇಳಿದ್ದೇನು?

ಈ ಬಗ್ಗೆ ಟಿವಿ9ಗೆ ಶಾಸಕಿ ಕರೆಮ್ಮಾ ನಾಯಕ್ ಪ್ರತಿಕ್ರಿಯಿಸಿದ್ದು, ನಿರಂತರವಾಗಿ ಅಕ್ರಮ ಮರಳು ದಂಧೆ ವಿರುದ್ಧ ಕ್ರಮಕ್ಕೆ‌ ಸೂಚಿಸುತ್ತಿದ್ದೇನೆ. ಜಿಲ್ಲಾಧಿಕಾರಿಗಳ ಜೊತೆಗಿನ ಸಭೆಯಲ್ಲಿ ಅಕ್ರಮ ಮರಳು ಸಾಗಾಟದ ಬಗ್ಗೆಯೂ ಪ್ರಸ್ತಾಪಿಸಿದ್ದೇನೆ. ಈ ಬಗ್ಗೆ ಪೊಲೀಸರು ಅಕ್ರಮ ಮರಳು ದಂಧೆ ಬಗ್ಗೆ ಕ್ರಮಕೈಗೊಂಡಿದ್ದಾರೆ. ಹೀಗಾಗಿ ನನ್ನ ಮನೆಗೆ ನುಗ್ಗಿ ಬೆದರಿಕೆ ಹಾಕಿದ್ದಾರೆ. ಈ ಘಟನೆ ಬಗ್ಗೆ ನನ್ನ ಬೆಂಬಲಿಗರೊಬ್ಬರು ದೇವದುರ್ಗ ಠಾಣೆಯಲ್ಲಿ ದೂರು‌ ದಾಖಲಿಸಿದ್ದಾರೆ ಎಂದರು. 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಶಿವನಗವಡ ನಾಯಕ್​ ಅವರನ್ನು ಕರೆಮ್ಮ ಮಣಿಸಿದ್ದು, ಅಂದಿನಿಂದಲೂ ಇಬ್ಬರ ನಡುವೆಯೂ ಒಂದಲ್ಲ ಒಂದು ಕಾರಣಕ್ಕೆ ರಾಜಕೀಯ ಕಿತ್ತಾಟಗಳು ನಡೆಯುತ್ತಲೇ ಇವೆ. ಅದರಲ್ಲೂ ಮುಖ್ಯವಾಗಿ ಶಿವನಗೌಡ ನಾಯಕ್ ಬೆಂಬಲಿಗರು ಅಕ್ರಮ ಮರಳು ದಂಧೆಯಲ್ಲಿ ತೊಡಗಿದ್ದಾರೆ.  ಇದಕ್ಕೆ ಪೊಲೀಸರು ಸಹ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಈ ಹಿಂದೆಯೇ ಬಹಿರಂಗವಾಗಿಯೇ ಆರೋಪಿಸಿದ್ದರು. ಈ ಸಂಬಂಧ ಪ್ರತಿಭಟನೆ ಸಹ ಮಾಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಭೀಮೇಶ್​​ ಪೂಜಾರ್
ಭೀಮೇಶ್​​ ಪೂಜಾರ್

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ