ರಾಯಚೂರಿನಲ್ಲಿ ಮರಳು ದಂಧೆಕೋರರ ಅಟ್ಟಹಾಸ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ

ಅಕ್ರಮ ಮರಳುಗಾರಿಕೆ ಕಾರ್ಯಾಚರಣೆ ವೇಳೆ ಐದಾರು ಜನ ಅಕ್ರಮ ಮರಳು ದಂಧೆಕೋರರು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಿಬ್ಬಂದಿ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿದ್ದಾರೆ.

ರಾಯಚೂರಿನಲ್ಲಿ ಮರಳು ದಂಧೆಕೋರರ ಅಟ್ಟಹಾಸ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ
ಮಾನವಿ ಪೊಲೀಸ್ ಠಾಣೆ
Follow us
| Updated By: ಆಯೇಷಾ ಬಾನು

Updated on: Aug 10, 2023 | 7:53 AM

ರಾಯಚೂರು, ಆ.10: ಜಿಲ್ಲೆಯಲ್ಲಿ ಅಕ್ರಮ ಮರಳು(Sand Mafia) ದಂಧೆಕೋರರ ಅಟ್ಟಹಾಸ ಹೆಚ್ಚಾಗಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮದ್ಲಾಪುರ ಬಳಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಅಕ್ರಮ ಮರಳುಗಾರಿಕೆ ಕಾರ್ಯಾಚರಣೆ ವೇಳೆ ಐದಾರು ಜನ ಅಕ್ರಮ ಮರಳು ದಂಧೆಕೋರರು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಿಬ್ಬಂದಿ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿದ್ದಾರೆ.

ಘಟನೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿರುವ ಖನಿಜ ರಕ್ಷಣಾ ಪಡೆ ಸಿಬ್ಬಂದಿಯಾಗಿರುವ ಹಾಗೂ ನಿವೃತ್ತ ಸೈನಿಕರಾಗಿರುವ ನೀಲಪ್ಪ ಮೇಲೆ ಕಬ್ಬಿಣದ ರಾಡ್​ನಿಂದ ಹಲ್ಲೆ ನಡೆದಿದೆ. ನೀಲಪ್ಪನ ತಲೆ ಮತ್ತು ಮುಖಕ್ಕೆ ಗಂಭೀರ ಗಾಯಗಳಾಗಿದ್ದು ತಲೆಗೆ ನಾಲ್ಕು ಸ್ಟಿಚ್​ಗಳನ್ನ ಹಾಕಲಾಗಿದೆ. ಹಾಗೂ ಮುಖ,ಎಡ ಕಣ್ಣಿನ ಭಾಗಕ್ಕೂ ಗಂಭೀರ ಗಾಯಗಳಾಗಿವೆ. ಸದ್ಯ ಗಾಯಾಳು ನೀಲಪ್ಪನಿಗೆ ರಾಯಚೂರು ನಗರದ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ರೈತರಿಗೆ ಗುಡ್​ ನ್ಯೂಸ್: ಇಂದಿನಿಂದ ಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ, ಎಲ್ಲಿಯವರೆಗೆ?

ನೀಲಪ್ಪ ಅವರು ಸೇನಾ ನಿವೃತ್ತಿ ಬಳಿಕ ಗಣಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ತುಂಗಭದ್ರಾ ನದಿಯಲ್ಲಿ ನಿರಂತರ ಅಕ್ರಮ ಮರಳು ಗಣಿಗಾರಿಕೆ ಹಿನ್ನೆಲೆ ಹಿರಿಯ ಭೂ ವಿಜ್ಞಾನಿ ಮಂಜುನಾಥ ನೇತೃತ್ವದ ತಂಡದಿಂದ ದಾಳಿ ನಡೆದಿತ್ತು. ಯಡಿವಾಳ, ಚಿಕಲಪರ್ವಿ ಹಾಗೂ ಮದ್ಲಾಪುರ ಭಾಗದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಆಕ್ರಮ ಮರಳು ಸಾಗಾಟದ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ತಂಡ 4 ಜೆಸಿಬಿ, ಟಿಪ್ಪರ್ ಜಪ್ತಿ ಮಾಡಿಕೊಂಡಿದ್ದರು. ಜಪ್ತಿ ಮಾಡಿದ ವಾಹನ ಠಾಣೆಗೆ ತರುವಾಗ ಮರಳು ದಂಧೆಕೋರರು ಹಲ್ಲೆ ನಡೆಸಿದ್ದಾರೆ. ಟಿಪ್ಪರ್ ಹಾಗೂ ಜೆಸಿಬಿ ಚಾಲಕರ ವಿರುದ್ಧ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದ್ದು ಗಣಿ & ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ನೀಡಿದ ದೂರಿನನ್ವಯ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಯಚೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ