ಪ್ರತ್ಯೇಕ ಘಟನೆ: ಹೊಲದಲ್ಲಿ ಬಂಡೆ ಉರುಳಿಬಿದ್ದು ಮಕ್ಕಳಿಬ್ಬರು ಸಾವು, ಆನೆ ದಾಳಿಗೆ ಮತ್ತೊಂದು ಬಲಿ

ಪ್ರತ್ಯೇಕ ಘಟನೆ: ಲಿಂಗಸುಗೂರು(Lingasugur) ತಾಲೂಕಿನ ಗೌಡೂರು ತಾಂಡಾದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಕಲ್ಲು ಬಂಡೆ ಜಾರಿ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಇತ್ತ ಮಡಿಕೇರಿ ತಾಲೂಕಿನ ಭಾಗಮಂಡಲ- ಸಮೀಪದ‌ ಚೇರಂಗಾಲ ಗ್ರಾಮದಲ್ಲಿ ಕಾಡಾನೆ ದಾಳಿಗೆ 34 ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾನೆ.

ಪ್ರತ್ಯೇಕ ಘಟನೆ: ಹೊಲದಲ್ಲಿ ಬಂಡೆ ಉರುಳಿಬಿದ್ದು ಮಕ್ಕಳಿಬ್ಬರು ಸಾವು, ಆನೆ ದಾಳಿಗೆ ಮತ್ತೊಂದು ಬಲಿ
ಮೃತ ರ್ದುದೈವಿಗಳು
Follow us
ಭೀಮೇಶ್​​ ಪೂಜಾರ್
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 15, 2024 | 5:47 PM

ಬೆಂಗಳೂರು, ಅ.15: ಹೊಲದ ಬದುವಿಗೆ ಹಾಕಿದ್ದ ಬಂಡೆ ಉರುಳಿಬಿದ್ದು ಮಕ್ಕಳಿಬ್ಬರು ಸಾವನ್ನಪ್ಪಿದ ದಾರುಣ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು(Lingasugur) ತಾಲೂಕಿನ ಗೌಡೂರು ತಾಂಡಾದಲ್ಲಿ ನಡೆದಿದೆ. ಮಂಜುನಾಥ್​​(9), ವೈಶಾಲಿ(8) ಮೃತ ಮಕ್ಕಳು. ಓರ್ವ ಮಗುವಿನ ಕಾಲು ಮುರಿದಿದ್ದು, ಸದ್ಯ ಗಾಯಾಳು ಮಗುವಿಗೆ ಲಿಂಗಸಗೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಶಾಲೆಗೆ ದಸರಾ ರಜೆ ಹಿನ್ನೆಲೆಯಲ್ಲಿ ಮೂವರು ಮಕ್ಕಳು ಪೋಷಕರ ಜೊತೆಗೆ ಜಮೀನಿಗೆ ಹೋಗಿದ್ದರು. ಇದೇ ವೇಳೆ ಜಮೀನಿನ ಬದುವಿನಲ್ಲಿ ಹಾಕಲಾಗಿದ್ದ ಕಲ್ಲು ಬಂಡೆಗಳ ಸುತ್ತಮುತ್ತ ಮಕ್ಕಳು ಆಟವಾಡುತ್ತಿದ್ದರು. ಈ ವೇಳೆ ಕಲ್ಲು ಬಂಡೆ ಜಾರಿ ಬಿದ್ದು ದುರ್ಘಟನೆ ನಡೆದಿದೆ. ಈ ಕುರಿತು ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಗದಗ: ತಂಗಿಯನ್ನು ಪ್ರೀತಿಸಿದ ಎಂದು ಯುವಕನಿಗೆ ಚಾಕು ಇರಿದ ಅಣ್ಣ, ಸಾವು ಬದುಕಿನ ನಡುವೆ ಯುವಕನ ಹೋರಾಟ

ಕೊಡಗಿನಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಕೊಡಗು: ಜಿಲ್ಲೆಯ ಮಡಿಕೇರಿ ತಾಲೂಕಿನ ಭಾಗಮಂಡಲ- ಸಮೀಪದ‌ ಚೇರಂಗಾಲ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾನೆ. ಕರುಣಾಕರ ಬಲಿ(34) ಮೃತ ರ್ದುದೈವಿ. ಕಾಡಿಗೆ ತೆರಳಿದ್ದಾಗ ಕರುಣಾಕರ ಮೇಲೆ ಕಾಡಾನೆ ದಾಳಿ‌ ಮಾಡಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸಧ್ಯ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದ್ದು, ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೊಳಕಾಲ್ಮೂರಿನಲ್ಲಿ ಪತ್ನಿ ಸಾವಿನಿಂದ ನೊಂದು ಪತಿ ಆತ್ಮಹತ್ಯೆ

ಚಿತ್ರದುರ್ಗ: ಪತ್ನಿ ಸಾವಿನಿಂದ ನೊಂದು ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಘಟನೆ ನಡೆದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಗೌರಮ್ಮ(60) ಮನೆಯಲ್ಲಿ ಸಾವನ್ನಪ್ಪಿದ್ದರು. ಪತ್ನಿ ಸಾವಿನಿಂದ ನೊಂದ ಪತಿ ಶಿವಣ್ಣ(70) ನೇಣಿಗೆ ಶರಣಾಗಿದ್ದಾರೆ. ವೃದ್ಧ ದಂಪತಿಯ ದಾರುಣ ಸಾವು ಕಂಡು ಸ್ಥಳೀಯರು ಮರುಕ ಪಡುತ್ತಿದ್ದಾರೆ. 2 ದಶಕದಿಂದ ಮೊಳಕಾಲ್ಮೂರಲ್ಲಿ ನೆಲೆಸಿದ್ದ ದಂಪತಿ, ಸ್ಥಳಕ್ಕೆ ಚಳ್ಳಕೆರೆ ಡಿವೈಎಸ್ಪಿ ರಾಜಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂಬಂಧಿಕರು ಯಾರೂ ಬಾರದ‌ ಹಿನ್ನೆಲೆ, ಸ್ಥಳೀಯರಿಂದಲೇ ಅಂತ್ಯಸಂಸ್ಕಾರ ಮಾಡಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ