ಶಕ್ತಿ ಯೋಜನೆ ಎಫೆಕ್ಟ್; ಖ್ಯಾತ ನಿರ್ದೇಶಕ ರಾಜಮೌಳಿ ಸ್ವಗ್ರಾಮಕ್ಕೆ ಬಸ್ ಸಮಸ್ಯೆ

ರಾಜ್ಯದಲ್ಲಿ ಶಕ್ತಿಯೋಜನೆ ಹಿನ್ನಲೆ ಖ್ಯಾತ ನಿರ್ದೇಶಕ ರಾಜಮೌಳಿ ಸ್ವಗ್ರಾಮದಲ್ಲಿ ಬಸ್ ಸಮಸ್ಯೆ ಉದ್ಭವಿಸಿದೆ. ಹೌದು ನಿರ್ದೇಶಕ ರಾಜಮೌಳಿ ಸ್ವಗ್ರಾಮವಾಗಿರುವ ರಾಯಚೂರು ಜಿಲ್ಲೆಯ ಅಮರೇಶ್ವರ ಕ್ಯಾಂಪ್, ಇಲ್ಲಿಂದ ಮಾನ್ವಿ ಪಟ್ಣಣಕ್ಕೆ ಹೋಗಲು ಬಸ್​ಗಳಿಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಶಕ್ತಿ ಯೋಜನೆ ಎಫೆಕ್ಟ್; ಖ್ಯಾತ ನಿರ್ದೇಶಕ ರಾಜಮೌಳಿ ಸ್ವಗ್ರಾಮಕ್ಕೆ ಬಸ್ ಸಮಸ್ಯೆ
ರಾಯಚೂರು
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 15, 2023 | 2:05 PM

ರಾಯಚೂರು: ರಾಜ್ಯದಲ್ಲಿ ಶಕ್ತಿಯೋಜನೆ ಹಿನ್ನಲೆ ಖ್ಯಾತ ನಿರ್ದೇಶಕ ರಾಜಮೌಳಿ ಸ್ವಗ್ರಾಮದಲ್ಲಿ ಬಸ್ ಸಮಸ್ಯೆ ಉದ್ಭವಿಸಿದೆ. ಹೌದು ನಿರ್ದೇಶಕ ರಾಜಮೌಳಿ ಸ್ವಗ್ರಾಮವಾಗಿರುವ ರಾಯಚೂರು(Raichur) ಜಿಲ್ಲೆಯ ಅಮರೇಶ್ವರ ಕ್ಯಾಂಪ್, ಇಲ್ಲಿಂದ ಮಾನ್ವಿ ಪಟ್ಣಣಕ್ಕೆ ಹೋಗಲು ಬಸ್​ಗಳಿಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆ ವಿದ್ಯಾರ್ಥಿಗಳು ಬಸ್ ನಿಲುಗಡೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ಮೊದಲು ಕ್ಯಾಂಪ್​ನಲ್ಲಿಯೇ ನಿಲುಗಡೆ ಆಗುತ್ತಿದ್ದ ಬಸ್​ಗಳು, ಶಕ್ತಿ ಯೋಜನೆ ಬಳಿಕ ಬಸ್ ರಶ್​ನಿಂದಾಗಿ ಬಸ್​ ನಿಲ್ಲಿಸುತ್ತಿಲ್ಲ. ಪರಿಣಾಮ ವಿದ್ಯಾರ್ಥಿಗಳು ಕ್ಲಾಸ್ ತೊರೆದು ಕ್ಯಾಂಪ್​ನಲ್ಲಿಯೇ ಪ್ರತಿಭಟನೆ ಮಾಡಿದ್ದಾರೆ.

ನೆಚ್ಚಿನ ಶಿಕ್ಷಕರ ವರ್ಗಾವಣೆ ಖಂಡಿಸಿ ವಿಧ್ಯಾರ್ಥಿಗಳಿಂದ ತರಗತಿ ಬಹಿಷ್ಕಾರ

ಕಲಬುರಗಿ: ಗುರು ಶಿಷ್ಯರ ಪ್ರೀತಿ ಎಂದರೇ ಇದೇ ಅಲ್ಲವೇ, ತಮ್ಮ ನೆಚ್ಚಿನ ಶಿಕ್ಷಕರ ವರ್ಗಾವಣೆ ಖಂಡಿಸಿ ವಿಧ್ಯಾರ್ಥಿಗಳಿಂದ ತರಗತಿಗೆ ಬಹಿಷ್ಕಾರ ಹಾಕಿದ ಘಟನೆ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದಲ್ಲಿ ನಡೆದಿದೆ. ಮಳ್ಳಿ ಸರ್ಕಾರಿ ಪ್ರೌಢ ಶಾಲೆಯ ಕನ್ನಡ ಶಿಕ್ಷಕಿ ರೇಣುಕಾಬಾಯಿ ಹಾಗೂ ದೈಹಿಕ ಶಿಕ್ಷಕ ನಾಯ್ಕೋಡಿ ವರ್ಗಾವಣೆ ಎಂಬುವವರ ವರ್ಗಾವಣೆ ಖಂಡಿಸಿ, ಶಾಲೆಯ 200 ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕಾರ ಹಾಕಿದ್ದಾರೆ. ಈ ಮೂಲಕ ವರ್ಗಾವಣೆಯನ್ನು ಸರ್ಕಾರ ವಾಪಸ್ ಪಡೆಯುಲು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಬಳಿಕ ವರ್ಗಾವಣೆಯಾದ ಶಿಕ್ಷಕರು ಮನವೋಲಿಸಿದ ನಂತರ ವಿದ್ಯಾರ್ಥಿಗಳು ಕ್ಲಾಸ್ ರೂಮ್​ಗೆ ತೆರಳಿದ್ದಾರೆ.

ಇದನ್ನೂ ಓದಿ:ಶಕ್ತಿ ಯೋಜನೆಯಿಂದಾಗಿ ನಮಗೆ ಬಸ್​ ಸಿಗುತ್ತಿಲ್ಲ, ರಾಜ್ಯದ ವಿವಿದೆಡೆ ವಿದ್ಯಾರ್ಥಿಗಳ ಪ್ರತಿಭಟನೆ

ಇನ್ನು ಜಿಲ್ಲೆಯಲ್ಲಿ ಇದೆ ತರಹದ ಮತ್ತೊಂದಡೆ ಘಟನೆ ಸೇಡಂ ತಾಲೂಕಿನ ಕೋಡ್ಲಾದಲ್ಲಿ ನಡೆದಿದೆ. ಇಲ್ಲೂ ಕೂಡ ಶಿಕ್ಷಕರ ವರ್ಗಾವಣೆಯಾಗಿದ್ದಕ್ಕೆ ವಿದ್ಯಾರ್ಥಿಗಳು ಕಣ್ಣಿರು ಹಾಕಿದ್ದಾರೆ. ಕೋಡ್ಲಾ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ನಾಗಯ್ಯ ಮಠ್ ವರ್ಗಾವಣೆಯಾದ ಹಿನ್ನೆಲೆ ವಿದ್ಯಾರ್ಥಿಗಳು ಕಣ್ಣೀರು ಹಾಕಿದ್ದಾರೆ. ಈ ವೇಳೆ ಅತ್ತು ಅತ್ತು ಇಬ್ಬರು ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ ನಡೆದಿದೆ. ಕೂಡಲೇ ಸೇಡಂ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ.

ಸರ್ಕಾರಿ ಮಹಿಳಾ ಪಿಯು ಕಾಲೇಜಿನಲ್ಲಿ‌ ಕೊಠಡಿಗಳ ನಿರ್ಮಾಣಕ್ಕೆ ಆಗ್ರಹಿಸಿ ವಿದ್ಯಾರ್ಥಿನಿಯರಿಂದ ಪ್ರತಿಭಟನೆ

ವಿಜಯಪುರ; ನಗರದ ಸರ್ಕಾರಿ ಮಹಿಳಾ ಪಿಯು ಕಾಲೇಜಿನಲ್ಲಿ‌ ಕೊಠಡಿಗಳ ಕೊರತೆಯಿರುವ ಹಿನ್ನಲೆ ಸಮರ್ಪಕ ಕೊಠಡಿಗಳ ನಿರ್ಮಾಣಕ್ಕೆ ಆಗ್ರಹಿಸಿ ನಗರದ ಗಾಂಧಿಚೌಕ್​ನಲ್ಲಿ ನೂರಾರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಈ ವೇಳೆ ರಸ್ತೆ ಮೇಲೆ ಡೆಸ್ಕ್ ಇಟ್ಟು, ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ‌ ಹೋರಾಟಕ್ಕೆ ಎಬಿವಿಪಿ ಸಾಥ್ ಕೊಟ್ಟಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ