AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಶಾನದಲ್ಲಿ ಹೂಳಲಾದ ಮೃತದೇಹಗಳ ಮಾರಾಟ ದಂಧೆ ಕೇಸ್​​: ಮತ್ತಷ್ಟು ಸ್ಫೋಟಕ ವಿಚಾರಗಳು ಬಯಲು

ರಾಯಚೂರಿನ ಹಿಂದೂ ರುದ್ರಭೂಮಿಯಲ್ಲಿ ಹೂಳಲಾದ ಮೃತದೇಹಗಳ ಮಾರಾಟ ದಂಧೆ ಬಗ್ಗೆ ಮತ್ತಷ್ಟು ವಿಚಾರಗಳು ಬಯಲಾಗಿದ್ದು, ಹೊಸ ಹಾಗೂ ಹಳೆಯ ಮೃತದೇಹಗಳಿಗೆ ಬೇರೆ ಬೇರೆ ದರ ನಿಗದಿಪಡಿಸಿ ಮೆಡಿಕಲ್ ಕಾಲೇಜುಗಳಿಗೆ ಸರಬರಾಜು ಮಾಡುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಆರೋಪಿಗಳು ಈ ದಂಧೆಯನ್ನು ಎಷ್ಟು ಅಚ್ಚುಕಟ್ಟಾಗಿ ನಡೆಸುತ್ತಿದ್ದರು ಎಂದರೆ ಮೃತದೇಹಗಳನ್ನ ತೆಗೆದ ಬಳಿಕ ಗುಂಡಿಯನ್ನು ಮತ್ತೆ ಮಣ್ಣು ಹಾಕಿ ಮುಚ್ಚುತ್ತಿದ್ದರು ಎಂಬುದೂ ಗೊತ್ತಾಗಿದೆ.

ಸ್ಮಶಾನದಲ್ಲಿ ಹೂಳಲಾದ ಮೃತದೇಹಗಳ ಮಾರಾಟ ದಂಧೆ ಕೇಸ್​​: ಮತ್ತಷ್ಟು ಸ್ಫೋಟಕ ವಿಚಾರಗಳು ಬಯಲು
ಮಂತ್ರಾಲಯ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿ
ಭೀಮೇಶ್​​ ಪೂಜಾರ್
| Edited By: |

Updated on: Oct 25, 2026 | 9:44 AM

Share

ರಾಯಚೂರು, ಅಕ್ಟೋಬರ್​​ 25: ನಗರದ ಮಂತ್ರಾಲಯ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಹೂಳಲಾದ ಮೃತದೇಹಗಳ ಮಾರಾಟ ಪ್ರಕರಣ ಸಂಬಂಧ ಮತ್ತಷ್ಟು ಸ್ಫೋಟಕ ವಿಚಾರಗಳು ಬಯಲಾಗಿವೆ. ದಂಧೆಕೋರರು ಇತ್ತೀಚಿನ ಮತ್ತು ಹಳೆಯ ಮೃತದೇಹಗಳ ಆಧಾರದಲ್ಲಿ ರೇಟ್​​ ಫಿಕ್ಸ್​​ ಮಾಡುತ್ತಿದ್ದರು ಎಂಬುದು ಗೊತ್ತಾಗಿದೆ. ಕೆಲವೊಮ್ಮೆ ರಸ್ತೆಗಳಲ್ಲಿ ಅಂಗಾಂಗಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರೋದನ್ನ ಸ್ಥಳೀಯರು ಗಮನಿಸಿದ್ದರು, ಹಲವು ವರ್ಷಗಳಿಂದ ಮೃತದೇಹ ಪಡೆಯುತ್ತಿದ್ದ ಬಗ್ಗೆ ಖಾಸಗಿ ಕಾಲೇಜು ಸಿಬ್ಬಂದಿ ಕೂಡ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಮೃತದೇಹವಿಲ್ಲದ ಸಮಾಧಿಗೆ ಕುಟುಂಬಸ್ಥರಿಂದ ಪೂಜೆ!

ಇನ್ನು ಆರೋಪಿಗಳು ಈ ದಂಧೆಯನ್ನು ಎಷ್ಟು ಅಚ್ಚುಕಟ್ಟಾಗಿ ನಡೆಸುತ್ತಿದ್ದರು ಎಂದರೆ ಮೃತದೇಹಗಳನ್ನ ತೆಗೆದ ಬಳಿಕ ಗುಂಡಿಯನ್ನು ಮತ್ತೆ ಮಣ್ಣು ಹಾಕಿ ಮುಚ್ಚಲಾಗುತ್ತಿತ್ತು. ಹೀಗಾಗಿ ಸಮಾಧಿಯ ಒಳಗಡೆ ಮೃತದೇಹ ಇಲ್ಲ ಎಂಬುದೇ ಗೊತ್ತಿರದೆ ಕೆಲವು ಕುಟುಂಬಸ್ಥರು ಪೂಜೆಗಳನ್ನು ಕೂಡ ನೆರವೇರಿಸಿದ್ದಾರೆ. ಇದರಿಂದಾಗಿ ಆ ಕುಟುಂಬಗಳ ಭಾವನೆಗಳಿಗೂ ಧಕ್ಕೆ ಆಗಿರುವ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ನೇತಾಜಿನಗರ ಪೊಲೀಸರು ಸ್ಮಶಾನದ ಸಹಾಯಕ ವಿರೇಶ್, ಖಾಸಗಿ ಮೆಡಿಕಲ್ ಕಾಲೇಜು ಸಿಬ್ಬಂದಿ ರಾಜು ಹಾಗೂ ಅಪ್ಸರ್ ಎಂಬವರನ್ನು ಅದಾಗಲೇ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ರಾಯಚೂರಿನಲ್ಲಿ ಬೆಚ್ಚಿ ಬೀಳಿಸುವ ದಂಧೆ ಬೆಳಕಿಗೆ: ಸ್ಮಶಾನದಲ್ಲಿ ಹೂಳಲಾದ ಮೃತದೇಹಗಳ ಅಕ್ರಮ ಸಾಗಾಟ, ಮಾರಾಟ

ಗಾಳಿ ಸುದ್ದಿಗೆ ಬೆದರಿದ ಜನ

ಈ ಕರಾಳ ದಂಧೆಯಿಂದಾಗಿ ದೆವ್ವ-ಭೂತಗಳಿವೆ ಎಂಬ ಗಾಳಿ ಸುದ್ದಿ ಹರಡಿದ್ದು, ರುದ್ರಭೂಮಿಯ ಸಮೀಪದ ಸ್ಥಳಗಳಲ್ಲಿನ ಮನೆಗಳಿಗೆ ಬಾಡಿಗೆಗೆ ಬರಲೂ ಜನರು ಹೆದರುತ್ತಿದ್ದಾರೆ. ಹಾಲಿ ವಾಸವಿರುವವರೂ ಮನೆಗಳನ್ನು ಖಾಲಿಮಾಡಿಕೊಂಡು ತೆರಳುತ್ತಿದ್ದಾರೆ ಎಂದು ಸ್ಥಳೀಯರು ಅಲವತ್ತುಕೊಂಡಿದ್ದಾರೆ. ದಂಧೆಯ ಬಗ್ಗೆ ಪ್ರತಿಕ್ರಿಯಿಸಿರುವ ರಾಯಚೂರು ಎಸ್ಪಿ ಅರುಣಾಂಗ್ಷು ಗಿರಿ, ಸ್ಮಶಾನದಲ್ಲಿನ ಮೃತದೇಹಗಳ ಕಳ್ಳತನದ ಬಗ್ಗೆ ಸ್ಥಳೀಯರು ದೂರು ನೀಡಿದ್ದಾರೆ. ಈ ಸಂಬಂಧ ಮೂವರು ಶಂಕಿತರನ್ನ ವಶಕ್ಕೆ ಪಡೆಯಲಾಗಿದ್ದು, ತನಿಖೆ ನಡೆಸಲಾಗ್ತಿದೆ ಎಂದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಭೀಮೇಶ್​​ ಪೂಜಾರ್
ಭೀಮೇಶ್​​ ಪೂಜಾರ್

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
ಕಮ್ಮಗೊಂಡನಹಳ್ಳಿಯ ಅಂಗಡಿಯಲ್ಲಿ ಏಕಕಾಲಕ್ಕೆ 23 ಸಿಲಿಂಡರ್ ಸ್ಫೋಟ
ಕಮ್ಮಗೊಂಡನಹಳ್ಳಿಯ ಅಂಗಡಿಯಲ್ಲಿ ಏಕಕಾಲಕ್ಕೆ 23 ಸಿಲಿಂಡರ್ ಸ್ಫೋಟ
ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ!
ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ!
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ