ರಾಯಚೂರು: ಉಚಿತ ನೇತ್ರ ಚಿಕಿತ್ಸಾ ಶಿಬಿರದಲ್ಲಿ ಶಾರ್ಟ್ ಸರ್ಕ್ಯೂಟ್, ಎಸಿ ಬ್ಲಾಸ್ಟ್
ಇಂದು(ಅ.06) ದಿವ್ಯ ದೃಷ್ಟಿ ಫೌಂಡೇಶನ್ನಿಂದ ಉಚಿತ ನೇತ್ರ ಚಿಕಿತ್ಸಾ ಶಿಬಿರ ನಡೆಯುತ್ತಿತ್ತು. ಶಿಬಿರದ ಲಾಭಕ್ಕಾಗಿ 100 ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ಆಗಮಿಸಿದ್ದರು. ಈ ವೇಳೆ ದುರ್ಘಟನೆ ನಡೆದಿದ್ದು, ಆಸ್ಪತ್ರೆ ಸಾಮಾಗ್ರಿಗಳು ಬೆಂಕಿಯ ಕೆನ್ನಾಲೆಗೆಗೆ ಸುಟ್ಟು ಕರಕಲಾಗಿದೆ.
ರಾಯಚೂರು,ಅ.06: ಜಿಲ್ಲೆಯ ಲಿಂಗಸುಗೂರು (Lingasugur) ತಾಲೂಕಿನ ಮುದಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಉಚಿತ ನೇತ್ರ ಚಿಕಿತ್ಸಾ ಶಿಬಿರದಲ್ಲಿ ಶಾರ್ಟ್ ಸರ್ಕ್ಯೂಟ್ (Short Circuit) ನಿಂದ ಎಸಿ ಬ್ಲಾಸ್ಟ್ ಆದ ಘಟನೆ ನಡೆದಿದೆ. ಈ ವೇಳೆ ಓರ್ವ ವೈದ್ಯರ ಕೈಗೆ ಗಾಯಗಳಾಗಿವೆ. ಇಂದು(ಅ.06) ದಿವ್ಯ ದೃಷ್ಟಿ ಫೌಂಡೇಶನ್ನಿಂದ ಉಚಿತ ನೇತ್ರ ಚಿಕಿತ್ಸಾ ಶಿಬಿರ ನಡೆಯುತ್ತಿತ್ತು. ಶಿಬಿರದ ಲಾಭಕ್ಕಾಗಿ 100 ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ಆಗಮಿಸಿದ್ದರು. ಈ ವೇಳೆ ದುರ್ಘಟನೆ ನಡೆದಿದ್ದು, ಆಸ್ಪತ್ರೆ ಸಾಮಾಗ್ರಿಗಳು ಬೆಂಕಿಯ ಕೆನ್ನಾಲೆಗೆಗೆ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಅವರು ಕಾರ್ಯಾಚರಣೆ ನಡೆಸಿದ್ದು, ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಸಚಿವರ ತೋಟದಲ್ಲಿ ಕೆಲಸ ಮಾಡ್ತಿದ್ದ ಕಾರ್ಮಿಕ ಸಾವು
ಚಿಕ್ಕಬಳ್ಳಾಪುರ: ಸಚಿವ ಕೆ ಎಚ್ ಮುನಿಯಪ್ಪ ತೋಟದಲ್ಲಿ ಕೆಲಸ ಮಾಡುತಿದ್ದ ಕಾರ್ಮಿಕ ಸಾವನ್ನಪ್ಪಿದ ಘಟನೆ ಕಂಬದಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಗರಾಜು (45) ಮೃತ ವ್ಯಕ್ತಿ. ಇತ ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರು ಗ್ರಾಮದ ನಿವಾಸಿಯಾಗಿದ್ದು, ನಾಲ್ಕು ತಿಂಗಳಿನಿಂದ ಸಚಿವ ಕೆ.ಎಚ್ ಮುನಿಯಪ್ಪ ಅವರ ತೋಟದಲ್ಲಿ ಕೆಲಸ ಮಾಡುತಿದ್ದ. ಇದೀಗ ಆತನ ಪತ್ಮಿ ವಿಷ ಸೇವಿಸಿ ಸಾವನ್ನಪ್ಪಿದ್ದಾನೆಂದು ಹೇಳಿದ್ದಾರೆ . ಮರಣೋತ್ತರ ಪರೀಕ್ಷೆಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಶವವನ್ನು ರವಾನೆ ಮಾಡಲಾಗಿದ್ದು, ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ಐಸಿಯು ವಾರ್ಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್, ತಪ್ಪಿದ ಭಾರಿ ಅನಾಹುತ: 24 ನವಜಾತ ಶಿಶುಗಳು ಬೇರೆಡೆಗೆ ಶಿಫ್ಟ್
ಬೆಂಗಳೂರಿನ ಮಲ್ಲೇಶ್ವರಂ ಬ್ರಿಡ್ಜ್ ಮೇಲಿಂದ ಬಿದ್ದು ವೃದ್ಧ ಸಾವು
ಬೆಂಗಳೂರು: ಮಲ್ಲೇಶ್ವರಂ ಬ್ರಿಡ್ಜ್ ಮೇಲಿಂದ ಬಿದ್ದು ವೃದ್ಧ ಸಾವನ್ನಪ್ಪಿದ ಘಟನೆ ನಡೆದಿದೆ. ಕುಡಿದ ಅಮಲಿನಲ್ಲಿ ಮೂತ್ರ ವಿಸರ್ಜನೆಗೆ ಹೋದಾಗ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮೆಜೆಸ್ಟಿಕ್ ರೈಲ್ವೆ ನಿಲ್ದಾಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ