AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮ ವಿವಾಹಕ್ಕೆ ಐವರ ಕೊಲೆ ಕೇಸ್​: ಮೂವರಿಗೆ ಗಲ್ಲು, 9 ಮಂದಿಗೆ ಜೀವಾವಧಿ ಶಿಕ್ಷೆ

ಪ್ರೇಮ ವಿವಾಹ ಸಂಬಂಧ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದ್ದ ಐವರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಕೋರ್ಟ್​ ಗಲ್ಲು ಶಿಕ್ಷೆ ವಿಧಿಸಿದ್ದು, ಇನ್ನುಳಿದ 9 ಆರೋಪಿಗಳಿಗೆ ದಂಡದ ಜೊತೆಗೆ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ. ಹುಡುಗಿ ಕಡೆಯವರು ಹುಡುಗನ ಮನೆಗೆ ನುಗ್ಗಿ ಸಿಕ್ಕ ಸಿಕ್ಕವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದು, ಐವರನ್ನು ಕೊಂದಿದ್ದರು.

ಪ್ರೇಮ ವಿವಾಹಕ್ಕೆ ಐವರ ಕೊಲೆ ಕೇಸ್​: ಮೂವರಿಗೆ ಗಲ್ಲು, 9 ಮಂದಿಗೆ ಜೀವಾವಧಿ ಶಿಕ್ಷೆ
ಆರೋಪಿಗಳು
Follow us
ಭೀಮೇಶ್​​ ಪೂಜಾರ್
| Updated By: ರಮೇಶ್ ಬಿ. ಜವಳಗೇರಾ

Updated on: Apr 08, 2025 | 9:20 PM

ರಾಯಚೂರು, (ಏಪ್ರಿಲ್ 08): ಜಿಲ್ಲೆಯ ಸಿಂಧನೂರಿನ (Sindhanur) ಸುಕಾಲಪೇಟೆಯಲ್ಲಿ 2020ರಲ್ಲಿ ನಡೆದಿದ್ದ ಐವರ ಕೊಲೆ ಪ್ರಕರಣ (sindhanur Five murder case) ರಾಯಚೂರು(Raichur) ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಈ ಪ್ರಕರಣ ಸಂಬಂಧ ಕೋರ್ಟ್ ಇಂದು(ಏಪ್ರಿಲ್​ 08) ತೀರ್ಪು ನೀಡಿದ್ದು, ಐವರ ಕೊಲೆ ಹಾಗೂ ಇಬ್ಬರ ಕೊಲೆ ಯತ್ನ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಮರಣದಂಡನೆ ಹಾಗೂ 9 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿದೆ. ಸಿಂಧನೂರಿನ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ (Sindhanur District and Sessions Court) ನ್ಯಾಯಾಧೀಶರಾದ ಬಿ.ಬಿ.ಜಕಾತಿ ಅವರ ವಾದ, ಪ್ರತಿವಾದ ಪರಿಶೀಲಿಸಿ ಮೂವರಿಗೆ ಮರಣ ದಂಡನೆ ಹಾಗೂ ತಲಾ 47 ಸಾವಿರ ರೂ.ದಂಡ ಹಾಗೂ 9 ಜನರಿಗೆ ಜೀವಾವಧಿ ಶಿಕ್ಷೆ ಜೊತೆಗೆ ತಲಾ 97,500 ರೂ.ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

A-1 ಆರೋಪಿ ಸಣ್ಣ ಫಕೀರಪ್ಪ, A- 2 ಅಂಬಣ್ಣ, A-3 ಸೋಮಶೇಖರ್ ಗೆ ಗಲ್ಲು ಶಿಕ್ಷೆಯಾಗಿದ್ದರೆ, ಇನ್ನುಳಿದಂತೆ A- 4 ರೇಖಾ, A-5 ಗಂಗಮ್ಮ, A- 6 ದೊಡ್ಡ ಫಕೀರಪ್ಪ, A-7 ಹನುಮಂತ, A-8 ಹೊನ್ನೂರಪ್ಪ, A-9 ಬಸಲಿಂಗಪ್ಪ, A- 10 ಅಮರೇಶ್,A- 11- ಶಿವರಾಜ್, A- 12 ಪರಸಪ್ಪಗೆ ಜೀವಾವಧಿ ಶಿಕ್ಷೆ ಜೊತೆ ದಂಡ ವಿಧಿಸಲಾಗಿದೆ.

ಇದನ್ನೂ ಓದಿ: ಸಿಂಧನೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಯ ಕತ್ತು ಸೀಳಿ ಬರ್ಬರ ಹತ್ಯೆ: ಓರ್ವ ಅರೆಸ್ಟ್

ಪ್ರಕರಣದ ಹಿನ್ನೆಲೆ

ಮೃತ ಈರಪ್ಪನ ಮಗ ಮೌನೇಶ ಎನ್ನುವಾತ ಸಣ್ಣ ಪಕೀರಪ್ಪ ಕೊನದವರು ಎನ್ನುವ ಕೊಲೆ ಆರೋಪಿಯ ಮಗಳನ್ನು ಪ್ರೀತಿಸಿ ಮದುವೆಯಾಗಿದ್ದ. ಈ ಹಿನ್ನೆಲೆಯಲ್ಲಿ ಜುಲೈ 11 ನೇ 2020 ರಂದು ಸಂಜೆ 04-45 ಗಂಟೆ ಸುಮಾರಿಗೆ ಸಣ್ಣ ಪಕೀರಪ್ಪ ಸೇರಿ ಎಲ್ಲ ಆರೋಪಿತರು ಸಿಂಧನೂರು ನಗರದ ಸುಕಾಲಪೇಟೆಯ ಹಿರೇಲಿಂಗೇಶ್ವರ ಕಾಲೊನಿಯಲ್ಲಿಈರಪ್ಪನ ಮನೆಗೆ ನುಗ್ಗಿ ಸಿಕ್ಕಿಸಿಕ್ಕವರ ಮೇಲೆ ದಾಳಿ ಮಾಡಿದ್ದು, ಈರಪ್ಪ ಆತನ ಪತ್ನಿ ಸುಮಿತ್ರಮ್ಮ. ಮಕ್ಕಳಾದ ನಾಗರಾಜ, ಹನುಮೇಶ ಹಾಗೂ ಮಗಳಾದ ಶ್ರೀದೇವಿ ಅವರನ್ನು ಕೊಲೆ ಮಾಡಿದ್ದರು. ಅಲ್ಲದೇ ಮೃತ ಈರಪ್ಪನ ಸೊಸೆಯಾದ ರೇವತಿ ಹಾಗೂ ಆತನ ಮಗಳಾದ ತಾಯಮ್ಮ ಮೇಲೂ ಮಾರಾಣಾಂತಿಕೆ ಹಲ್ಲೆ ಮಾಡಿ ಕೊಲೆ ಮಾಡಲು ಪ್ರಯತ್ನಿಸಿದ್ದರು. ಈ ಕುರಿತು ಸಿಂಧನೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ
Image
ರಾಯಚೂರು ಪೊಲೀಸರು ಥಳಿಸಿದ್ದಕ್ಕೆ ವ್ಯಕ್ತಿ ಸಾವು ಕೇಸ್​ಗೆ ಟ್ವಿಸ್ಟ್
Image
ಹೆಂಡ್ತಿ ಜೀವನಾಂಶ ಕೇಳಿದ್ದಕ್ಕೆ ಯುಗಾದಿಯಂದೇ ಗಂಡ ರಾಕ್ಷಸ ಅವತಾರ!
Image
ಬೆಚ್ಚಿಬೀಳಿಸಿದ್ದ ಭೀಕರ ಕೊಲೆ: 31 ಬಾರಿ ಇರಿದು ಕೊಂದವರು ಸಿಕ್ಕಿಬಿದ್ದರು
Image
ಅಪಘಾತ: ಮಂತ್ರಾಲಯ ಸಂಸ್ಕೃತ ಶಾಲೆಯ 3 ವಿದ್ಯಾರ್ಥಿಗಳು ಸೇರಿ ನಾಲ್ವರ ಸಾವು

ನಗರದ ಸುಕಾಲಪೇಟೆಯ ಈರಪ್ಪ ಅವರ ಪುತ್ರ ಮೌನೇಶ್, ಅದೇ ಏರಿಯಾದ ಸಣ್ಣ ಫಕೀರಪ್ಪನ ಪುತ್ರಿ ಮಂಜುಳಾ ಎನ್ನುವರು ಪರಸ್ಪರ ಪ್ರೀತಿಸಿದ್ದರು. ಆದ್ರೆ, ಇಬ್ಬರ ಪ್ರೀತಿಗೆ ಯುವತಿ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ಆದರೂ ಸಹ ಮೌನೇಶ್ ಹಾಗೂ ಮಂಜುಳಾ ಮದುವೆಯಾಗಿದ್ದರು. ಇದರಿಂದ ಯುವತಿ ಮನೆಯವರ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರತಿ ದಿನ ಎರಡೂ ಕುಟುಂಬಗಳ ನಡುವೆ ವಾಗ್ದಾದ, ಜಗಳ ನಡೆಯುತ್ತಲೇ ಇದ್ದವು. ಆದ್ರೆ, 2020, ಜುಲೈ 11ರಂದು ಸಂಜೆ ಸಣ್ಣ ಪಕೀರಪ್ಪ ಸಹೋದರರು ಈರಪ್ಪನ ಮನೆಗೆ ನುಗ್ಗಿ ದೊಂಣೆ, ಕೊಡಲಿ, ಮಚ್ಚುಗಳಿಂದ ದಾಳಿ ಮಾಡಿ ಐವರನ್ನು ಹತ್ಯೆ ಮಾಡಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ