Raichur News: ಶಾಲೆಯ ಕಾಂಪೌಂಡ್ ಕುಸಿದು ಬಿದ್ದು ವಿದ್ಯಾರ್ಥಿಗೆ ಗಂಭೀರ ಗಾಯ

ಸರ್ಕಾರಿ ಶಾಲೆಯ‌ ಕಾಂಪೌಂಡ್​​ ‌ಕುಸಿದು ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನ ಮೈಲಾರಲಿಂಗ ನಗರದಲ್ಲಿರುವ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

Raichur News: ಶಾಲೆಯ ಕಾಂಪೌಂಡ್ ಕುಸಿದು ಬಿದ್ದು ವಿದ್ಯಾರ್ಥಿಗೆ ಗಂಭೀರ ಗಾಯ
ಕುಸಿದು ಬಿದ್ದ ಶಾಲೆಯ ಕಾಂಪೌಂಡ್
ವಿವೇಕ ಬಿರಾದಾರ

Updated on: Jun 16, 2023 | 8:56 PM

ರಾಯಚೂರು: ಸರ್ಕಾರಿ ಶಾಲೆಯ‌ (Government School) ಕಾಂಪೌಂಡ್​​ ‌ಕುಸಿದು ವಿದ್ಯಾರ್ಥಿ (Student) ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನ (Raichur) ಮೈಲಾರಲಿಂಗ ನಗರದಲ್ಲಿರುವ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಸುರೇಶ್(10) ಗಾಯಗೊಂಡಿರುವ ವಿದ್ಯಾರ್ಥಿ. ವಿದ್ಯಾರ್ಥಿಯ ತಲೆ, ಹೊಟ್ಟೆ, ಕಾಲಿನ ಭಾಗಕ್ಕೆ ಗಾಯಗಳಾಗಿವೆ. ಕೂಡಲೆ ವಿದ್ಯಾರ್ಥಿಯನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯಾರ್ಥಿ ಸುರೇಶ್ ಮೂರನೇ ತರಗತಿಯಲ್ಲಿ ಓದುತ್ತಿದ್ದು, ಮಧ್ಯಾಹ್ನ ಊಟ ಮಾಡಿದ ಬಳಿಕ ಶಾಲಾ ಗೇಟ್ ಬಳಿ ಆವಾಡುತ್ತಿದ್ದನು. ಈ ವೇಳೆ ಏಕಾಏಕಿ ಕುಸಿದ ಶಾಲಾ ಕಾಂಪೌಂಡ್​​​​​, ಗೇಟ್ ಹಾಗೂ ಗೇಟ್​ನ ಕಂಬ ಕುಸಿದಿದೆ. ಪಕ್ಕದಲ್ಲೇ ಆಟವಾಡುತ್ತಿದ್ದ ಸುರೇಶ್ ಮೇಲೆ ಕಾಂಪೌಂಡ್​​ ಬಿದ್ದಿದೆ.

ಇದನ್ನೂ ಓದಿ: ಆ್ಯಕ್ಸೆಲ್​ ಬ್ಲೇಡ್ ಕಟ್ ಆಗಿ ಆಟೋಗೆ ಗುದ್ದಿದ ಕ್ಯಾಂಟರ್: ತಾಯಿ-ಮಗಳು ದಾರುಣ ಸಾವು

ಅದೃಷ್ಟವಶಾತ್ ವಿದ್ಯಾರ್ಥಿಯ ಮತ್ತೊಂದು ಬದಿ ಬಿದ್ದ ಗೇಟ್​ನ ಪಿಲ್ಲರ್ ಬಿದ್ದಿದೆ. ಸದ್ಯ ವಿದ್ಯಾರ್ಥಿ ಸುರೇಶ್ ಸ್ಥಿತಿ ಸ್ಥಿರವಾಗಿದೆ ಅಂತ ವೈದ್ಯರು ತಿಳಿಸಿದ್ದಾರೆ. ಮಾರ್ಕೆಟ್ ಯಾರ್ಡ್ ಪೊಲೀಸ್​ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

ಜೋರಾಗಿ ಗಾಳಿ ಬೀಸಿದ್ದರಿಂದ ಶಾಮಿಯಾನ ಹಾರಿಬಿದ್ದು ಮಹಿಳೆ ಸಾವು

ಕೊಪ್ಪಳ: ಜೋರಾಗಿ ಗಾಳಿ ಬೀಸಿದ್ದರಿಂದ ಶಾಮಿಯಾನ ಹಾರಿಬಿದ್ದು ನಾಲ್ವರಿಗೆ ಗಾಯಗಳಾಗಿದ್ದು, ಮಹಿಳೆ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕಾರಟಗಿ ತಾಲೂಕಿನ ಮುಷ್ಟೂರು ಕ್ಯಾಂಪ್‌ನಲ್ಲಿ ನಡೆದಿದೆ. ಪ್ರಗತಿ ನಗರ ನಿವಾಸಿ ಅಂಜಿನಮ್ಮ(45) ಮೃತ ಮಹಿಳೆ.

ಸದ್ಯ ನಾಲ್ವರು ಗಾಯಾಳುಗಳಿಗೆ ಗಂಗಾವತಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮಕ್ಕಾಗಿ ಶಾಮಿಯಾನ ಹಾಕಲಾಗಿತ್ತು. ಅಡುಗೆ ಮಾಡುವ ಜಾಗದಲ್ಲಿ ಹಾಕಿದ್ದ ಶಾಮಿಯಾನ ಅಡುಗೆ ತಯಾರಿಸುತ್ತಿದ್ದ ಮಹಿಳೆಯರ ಮೇಲೆ ಬಿದ್ದು, ಅವಘಡ ಸಂಭವಿಸಿದೆ. ಗಂಗಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಬೈಕ್​ಗೆ ಹಿಂಬದಿಯಿಂದ ಲಾರಿ ಡಿಕ್ಕಿ: ವೃದ್ಧ ದಂಪತಿಗೆ ಗಂಭೀರ ಗಾಯ

ತುಮಕೂರು: ಲಾರಿ ಹಾಗೂ ಟಿವಿಎಸ್ ಬೈಕ್ ನಡುವೆ ಡಿಕ್ಕಿಯಾಗಿ ಸವಾರರಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ತಿಪಟೂರು ನಗರದಲ್ಲಿ ನಡೆದಿದೆ. ದಂಪತಿಗಳು ತೆರಳುತ್ತಿದ್ದ ಬೈಕ್​ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ. ವೃದ್ಧ ದಂಪತಿ ಮಹಾಲಿಂಗಯ್ಯರಿಗೆ ಗಾಯಗಳಾಗಿದ್ದರೆ ಸುಜಾತರಿಗೆ ಕಾಲು ಮುರಿದಿದೆ. ಗಾಯಾಳುಗಳಿಗೆ ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ತಿಪಟೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್​ಗೆ ಲಾರಿ ಡಿಕ್ಕಿ: ಓರ್ವ ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

ಹಾಸನ: ಆ್ಯಕ್ವಿವ್ ಹೊಂಡಾ ಬೈಕ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನಗರದ ಸಂತೇಪೇಟೆ ಸರ್ಕಲ್‌ನಲ್ಲಿ ಘಟನೆ ನಡೆದಿದ್ದು, ಚಿಕ್ಕಡಲೂರು ಗ್ರಾಮದ ಅಭಿಲಾಷ್ (22) ಮೃತ ಯುವಕ. ದೊಡ್ಡಪುರ ಗ್ರಾಮದ ರಘು, ವರುಣ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಡಿಕ್ಕಿ ರಭಸಕ್ಕೆ ರಘು ಕಾಲು ತುಂಡಾಗಿದ್ದು, ವರುಣನ ತಲೆಗೆ ಗಂಭೀರ ಗಾಯವಾಗಿದೆ. ಸದ್ಯ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Loading...
Unable to load recommendations.
Follow Us