ಶಾಲೆಗೆ ಹೋಗಲು ವಿದ್ಯಾರ್ಥಿಗಳ ಪರದಾಟ: ಜೀವ ಪಣಕ್ಕಿಟ್ಟು, ಪ್ಯಾಂಟ್ ಬಿಚ್ಚಿ ಕೈಯಲ್ಲಿ ಹಿಡಿದು ಹಳ್ಳ ದಾಟುವ ಸ್ಥಿತಿ

ದೇವರಗುಡಿ ಗ್ರಾಮದಿಂದ ಪಗಡದಿನ್ನಿ ಗ್ರಾಮದ ಶಾಲೆಗೆ ಹೋಗುವ ಹೈ ಸ್ಕೂಲ್ ವಿದ್ಯಾರ್ಥಿಗಳು ಹಳ್ಳ ದಾಟಿ ಹೋಗಬೇಕಿದೆ. ಹೀಗಾಗಿ ವಿದ್ಯಾರ್ಥಿಗಳು ಪ್ಯಾಂಟ್ ಬಿಚ್ಚಿ ಕೈಯಲ್ಲಿ ಹಿಡಿದುಕೊಂಡು ಹಳ್ಳ ದಾಟುತ್ತಿದ್ದಾರೆ.

ಶಾಲೆಗೆ ಹೋಗಲು ವಿದ್ಯಾರ್ಥಿಗಳ ಪರದಾಟ: ಜೀವ ಪಣಕ್ಕಿಟ್ಟು, ಪ್ಯಾಂಟ್ ಬಿಚ್ಚಿ ಕೈಯಲ್ಲಿ ಹಿಡಿದು ಹಳ್ಳ ದಾಟುವ ಸ್ಥಿತಿ
ಶಾಲೆಗೆ ಹೋಗಲು ವಿದ್ಯಾರ್ಥಿಗಳ ಪರದಾಟ
Follow us
TV9 Web
| Updated By: ಆಯೇಷಾ ಬಾನು

Updated on:Jul 19, 2022 | 7:12 PM

ರಾಯಚೂರು: ಶಾಲೆ ಮಕ್ಕಳು ತಮ್ಮ ಪ್ಯಾಂಟ್ ಬಿಚ್ಚಿ ಕೈಯಲ್ಲಿ ಹಿಡಿದುಕೊಂಡು ಹಳ್ಳ ದಾಟವಂತಹ ಪರಿಸ್ಥಿತಿ ರಾಯಚೂರಿನಲ್ಲಿ ಕಂಡು ಬಂದಿದೆ. ಹಳ್ಳ ದಾಟಿ ಶಾಲೆಗೆ ಹೋಗಲು ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ದೇವರಗುಡಿ ಗ್ರಾಮದಲ್ಲಿ 1ರಿಂದ 7ನೇ ತರಗತಿವರೆಗೆ ಮಾತ್ರ ಶಾಲೆ ಇದ್ದು ಪ್ರೌಢಶಾಲೆಗೆ ಪಗಡದಿನ್ನಿಗೆ ಹೋಗಬೇಕು. ಆದ್ರೆ ಅಲ್ಲಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದ ಕಾರಣ ವಿದ್ಯಾರ್ಥಿಗಳು ಪರದಾಡುವಂತಾಗಿದೆ.

ದೇವರಗುಡಿ ಗ್ರಾಮದಿಂದ ಪಗಡದಿನ್ನಿ ಗ್ರಾಮದ ಶಾಲೆಗೆ ಹೋಗುವ ಹೈ ಸ್ಕೂಲ್ ವಿದ್ಯಾರ್ಥಿಗಳು ಹಳ್ಳ ದಾಟಿ ಹೋಗಬೇಕಿದೆ. ಹೀಗಾಗಿ ವಿದ್ಯಾರ್ಥಿಗಳು ಪ್ಯಾಂಟ್ ಬಿಚ್ಚಿ ಕೈಯಲ್ಲಿ ಹಿಡಿದುಕೊಂಡು ಹಳ್ಳ ದಾಟುತ್ತಿದ್ದಾರೆ. ಪಗಡದಿನ್ನಿಗೆ ಹೋಗಲು ಸೇತುವೆ, ರಸ್ತೆ ವ್ಯವಸ್ಥೆ ಇಲ್ಲ. ದೇವರಗುಡಿ, ಮಲ್ಲಾಪುರ ಕ್ಯಾಂಪ್, ದುಗ್ಗಮ್ಮನ ಗುಂಡಾ ಸೇರಿ ನಾಲ್ಕೈದು ಹಳ್ಳಿಗಳ ಮಕ್ಕಳ ಸ್ಥಿತಿ ಅಯೋಮಯವಾಗಿದೆ. ಜೀವ ಪಣಕ್ಕಿಟ್ಟು ಶಾಲೆಗೆ ತೆರಳಬೇಕಾದ ದುಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಕ್ರಮಕೈಗೊಳ್ಳುವಂತೆ ಸುತ್ತಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಪಗಡದಿನ್ನಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸುತ್ತೇನೆ

ಇನ್ನು ವಿದ್ಯಾರ್ಥಿಗಳು ಬಟ್ಟೆ ಕಳಚಿ ಹಳ್ಳ ದಾಟಿ ಶಾಲೆಗೆ ಹೋಗೊ ವಿಚಾರಕ್ಕೆ ಸಂಬಂಧಿಸಿ ಈ ಬಗ್ಗೆ ರಾಯಚೂರು ಜಿಲ್ಲೆ ಡಿಡಿಪಿಐ ವೃಷಬೇಂದ್ರಯ್ಯ ಸ್ಪಷ್ಟನೆ ನೀಡಿದ್ದಾರೆ. ದೇವರಗುಡಿ ಗ್ರಾಮದ ಮಕ್ಕಳು ಪಗಡದಿನ್ನಿಗೆ ಹೋಗ್ತಾರೆ. ಹೈ ಸ್ಕೂಲ್ ವಿದ್ಯಾರ್ಥಿಗಳು ಅಲ್ಲಿಗೆ ಹಳ್ಳ ದಾಟಿ ಹೋಗ್ತಾರೆ. ಪ್ರತಿ ಬಾರಿ ತುಂಗಭದ್ರಾ ನದಿ ನೀರು ಹೆಚ್ಚಾದಾಗ ಈ ಪರಿಸ್ಥಿತಿ ಇರುತ್ತೆ. ಇಲ್ಲಿ ಸೇತುವೆ ನಿರ್ಮಿಸಬೇಕು ಅನ್ನೋದು ಸ್ಥಳೀಯರ ಆಗ್ರಹ. ಈ ಬಗ್ಗೆ ನಾವೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡುತ್ತೇವೆ. ಸಣ್ಣ ಸೇತುವೆ ನಿರ್ಮಿಸಲು ಮನವಿ ಮಾಡಲಾಗುವುದು. ಪಗಡದಿನ್ನಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಗುಳ್ಯ ಗ್ರಾಮದಲ್ಲಿ ಪ್ರಾಣವನ್ನು ಪಣಕಿಟ್ಟು ಕಾಲುಸಂಕದಲ್ಲಿ ಜನರ ಸಂಚಾರ

ಇನ್ನು ಮತ್ತೊಂದು ಕಡೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಗುಳ್ಯದಲ್ಲಿ ಕಾಲು ಮುರಿದುಕೊಂಡಿದ್ದ ವ್ಯಕ್ತಿಯನ್ನು ಸಾಗಿಸಲು ಸ್ಥಳೀಯರು ಹರಸಾಹಸಪಟ್ಟ ಘಟನೆ ನಡೆದಿದೆ. ಕಾಲುಸಂಕ ದಾಟಲು ಜನರು ಪರದಾಡುತ್ತಿದ್ದ ಬಗ್ಗೆ ಟಿವಿ9 ವರದಿ ಮಾಡಿತ್ತು. ವರದಿ ಪ್ರಸಾರ ಬೆನ್ನಲ್ಲೆ ಗ್ರಾಮಕ್ಕೆ ಎಮ್ಎಲ್ಸಿ ಎಂ.ಕೆ ಪ್ರಾಣೇಶ್ ಭೇಟಿ ನೀಡಿ ಗುಳ್ಯ ಗ್ರಾಮದ ಡೆಡ್ಲಿ ಕಾಲುಸಂಕ ವೀಕ್ಷಿಸಿದ್ದಾರೆ. ಹಾಗೂ ಆದಷ್ಟು ಬೇಗ ಶಾಶ್ವತ ಸೇತುವೆ ನಿರ್ಮಿಸುವ ಭರವಸೆ ನೀಡಿದ್ದಾರೆ.

ಮಳೆಯಿಂದ ರಾಜ್ಯ ಹೆದ್ದಾರಿ ಕುಸಿತ

ಉ.ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿ ಕುಸಿದಿದೆ. ಜೋಯಿಡಾ ತಾಲೂಕಿನಲ್ಲಿ ಮಳೆಯಿಂದ ಕಾರವಾರ-ರಾಮನಗರ ಸಂಪರ್ಕಿಸುವ ಹೆದ್ದಾರಿ ಕುಸಿಯುವ ಭೀತಿ ಎದುರಾಗಿದೆ. ಮಣ್ಣು ಕುಸಿಯುವ ಭೀತಿಯಿಂದ ಸಿಮೆಂಟ್ ತಡೆಗೋಡೆ ನಿರ್ಮಾಣ ಮಾಡಲಾಗಿದ್ದು ಸಿಮೆಂಟ್ ತಡೆಗೋಡೆಯಿದ್ದರೂ ಪದೇ ಪದೆ ರಸ್ತೆ ಕುಸಿಯುತ್ತಿದೆ.

Published On - 4:57 pm, Tue, 19 July 22

ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ