ರಾಯಚೂರು: ಜಿಲ್ಲೆಯಾದ್ಯಂತ ಕೊವಿಡ್ ತನ್ನ ಆರ್ಭಟ ಮುಂದುವರೆಸಿದೆ. ಕೊರೊನಾ ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಲೇ ಸಾಗುತ್ತಿದೆ. ಈ ನಡುವೆ ಖಾಸಗಿ ಕಾಲೇಜಿನಲ್ಲಿ ಸಾಮಾಜಿಕ ಅಂತರವಿಲ್ಲದೆ, ಮಾಸ್ಕ್ ಧರಿಸಿದೆ ನಿರ್ಲಕ್ಷ್ಯವಹಿಸಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿಯ ಖಾಸಗಿ ಕಾಲೇಜಿನಲ್ಲಿ ನಡೆದಿದೆ.
ರಾಜ್ಯದಲ್ಲಿ ಎಲ್ಲಾ ಶಾಲೆ-ಕಾಲೇಜುಗಳು ಬಂದ್ ಆಗಿವೆ. ಆದರೆ ಮಾನ್ವಿಯಾ ಕಾಲೇಜಿನಲ್ಲಿ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಓರಿಯಂಟೇಷನ್ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ. ಅವರಲ್ಲಿ ಯಾರು ಸಹ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡಿಲ್ಲ. ಒಬ್ಬರು ಸಹ ಮಾಸ್ಕ್ ಧರಿಸಿಲ್ಲ. ಗುಂಪು ಗುಂಪಾಗಿ ಹಾಡಿ ಕುಣಿದು ಕುಪ್ಪಳಿಸಿದ್ದಾರೆ. ಕಾಲೇಜು ಆಡಳಿತ ಮಂಡಳಿ ಕಾರ್ಯ ವೈಖರಿಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Published On - 10:39 am, Sat, 13 June 20