AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗದ್ಗುರು ಶಿವಾನಂದ ಮಠ ಕಟ್ಟಿದ್ದ ಶಿಕ್ಷಕ ಕಮ್ ಸ್ವಾಮೀಜಿ ಆತ್ಮಹತ್ಯೆ, ಕಾರಣ ನಿಗೂಢ

ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವಾಗಲೇ, ಜೀವನದಲ್ಲಿ ವೈರಾಗ್ಯ ಕಂಡು ದೀಕ್ಷೆ ಪಡೆದು, ಮಠ ಸ್ಥಾಪಿಸಿಕೊಂಡಿದ್ದ ಸ್ವಾಮೀಜಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬಸ್ಸಾಪುರ (ಇಜೆ) ಗ್ರಾಮದಲ್ಲಿ ನಡೆದಿದೆ. ಶಿಕ್ಷಕ ವೃತ್ತಿ ಜೊತೆಗೆ ಮಠದಲ್ಲಿ ಪುರಾಣ, ಪ್ರವಚನ ಮಾಡಿಕೊಂಡಿದ್ದು, ಇದೀಗ ಏಕಾಏಕಿ ಮಠದ ಭಜನಾ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಜಗದ್ಗುರು ಶಿವಾನಂದ ಮಠ ಕಟ್ಟಿದ್ದ ಶಿಕ್ಷಕ ಕಮ್ ಸ್ವಾಮೀಜಿ ಆತ್ಮಹತ್ಯೆ, ಕಾರಣ ನಿಗೂಢ
ದೇವೇಂದ್ರಪ್ಪ
ಭೀಮೇಶ್​​ ಪೂಜಾರ್
| Edited By: |

Updated on:Mar 19, 2026 | 4:23 PM

Share

ರಾಯಚೂರು, (ಮಾರ್ಚ್ 19): ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವಾಗಲೇ, ಜೀವನದಲ್ಲಿ ವೈರಾಗ್ಯ ಕಂಡು ದೀಕ್ಷೆ ಪಡೆದು ಜಗದ್ಗುರು ಶಿವಾನಂದ ಮಠ ಕಟ್ಟಿದ್ದ ಸ್ವಾಮೀಜಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು (Raichur) ಜಿಲ್ಲೆಯ ಸಿಂಧನೂರು ತಾಲೂಕಿನ ಬಸ್ಸಾಪುರ (ಇಜೆ) ಗ್ರಾಮದಲ್ಲಿ ನಡೆದಿದೆ. ದೇವೇಂದ್ರಪ್ಪ (58) ಎಂಬವರೇ ಮಠದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡವರು. ಇವರು ಮುಳ್ಳೂರು (ಇಜೆ) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವಾಗಲೇ ದೀಕ್ಷೆ ಪಡೆದು ಜಗದ್ಗುರು ಶಿವಾನಂದ ಮಠ ಕಟ್ಟಿ ಮಠದಲ್ಲಿ ಪುರಾಣ, ಪ್ರವಚನ ಮಾಡುತ್ತಿದ್ದರು. ಆದ್ರೆ, ಇದೀಗ ಬಸ್ಸಾಪುರ ಮಠದ ಭಜನಾ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂಲತಃ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಗುಳಗುಳಿ ಗ್ರಾಮದವರಾದ ದೇವೇಂದ್ರಪ್ಪ, ಕಳೆದ ಎರಡು ದಶಕಗಳಿಂದ ಸಿಂಧನೂರಿನಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಈ ನಡುವೆ ವೈರಾಗ್ಯ ಜೀವನದತ್ತ ಮುಖ ಮಾಡಿ, ಬಸಾಪುರ ಗ್ರಾಮದಲ್ಲಿ ಶಿವಾನಂದ ಜಗದ್ಗುರು ನಾಮಧಾರಿ ಮಠವನ್ನು ಸ್ಥಾಪಿಸಿ, ಸ್ವಾಮೀಜಿಯಾಗಿ ಗುರುತಿಸಿಕೊಂಡಿದ್ದರು. ಖಾವಿ ವಸ್ತ್ರ ಧರಿಸಿ ಜನರಿಗೆ ಧಾರ್ಮಿಕ ಪ್ರವಚನ ನೀಡುತ್ತಿದ್ದರು. ಆದರೆ, ಏಕಾಏಕಿ ಮಠದಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು ಗ್ರಾಮಸ್ಥರು ಹಾಗೂ ಭಕ್ತರು ಆಘಾತಗೊಳ್ಳುವಂತೆ ಮಾಡಿದೆ.

ಇದನ್ನೂ ಓದಿ: ಹೊಟ್ಟೆಪಾಡಿಗೆ ದುಡಿಯಲು ಬಂದವನ ದಾರುಣ ಅಂತ್ಯ: ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದ ನಾಲ್ವರ ಪೈಕಿ ಓರ್ವ ಸಾವು

ಇತ್ತೀಚೆಗೆ ಅಪಘಾತವಾಗಿದ್ದ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದರು. ಅಲ್ಲದೇ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.  ಆದ್ರೆ, ಆತ್ಮಹತ್ಯೆಗೆ  ನಿಖರ ಕಾರಣ ತಿಳಿದುಬಂದಿಲ್ಲ. ಹೀಗಾಗಿ ಹಲವು ಅನುಮಾನಗಳು ವ್ಯಕ್ತವಾಗಿವೆ.

ಘಟನಾ ಸ್ಥಳಕ್ಕೆ ತುರುವಿಹಾಳ ಠಾಣೆ ಪಿಎಸ್ಐ ಸುಜಾತ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಬಳಿಕ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.  ಇನ್ನು ಗ್ರಾಮದ ರಮೇಶ್ ನೀಡಿದ ದೂರಿನ ಮೇರೆಗೆ ತುರುವಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:21 pm, Thu, 19 March 26

Follow Us