ಶಾಲೆಗೆ ಹೋಗಲು ಇಷ್ಟವಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ಬಾಲಕ
ಶಾಲೆಗೆ ಹೋಗಲು ಇಷ್ಟವಿಲ್ಲದ ಕಾರಣಕ್ಕೆ ಮಲ್ಲದಗುಡ್ಡ ಸರ್ಕಾರಿ ಶಾಲಾ ಆವರಣದಲ್ಲಿ ಬಾಲಕ ನೇಣು ಹಾಕಿಕೊಂಡಿದ್ದಾನೆ. ರಾಯಚೂರು ಜಿಲ್ಲೆ ಮಸ್ಕಿ ತಾಲ್ಲೂಕಿನ ಮಲ್ಲದಗುಡ್ಡ ಸರ್ಕಾರಿ ಶಾಲಾ ಆವರಣದಲ್ಲಿ ಈ ಘಟನೆ ನಡೆದಿದೆ.
ರಾಯಚೂರು: ಶಾಲೆಗೆ ಹೋಗಲು ಇಷ್ಟವಿಲ್ಲದ ಕಾರಣಕ್ಕೆ ಮಲ್ಲದಗುಡ್ಡ ಸರ್ಕಾರಿ ಶಾಲಾ ಆವರಣದಲ್ಲಿ ಬಾಲಕ ನೇಣು ಹಾಕಿಕೊಂಡಿದ್ದಾನೆ. ರಾಯಚೂರು ಜಿಲ್ಲೆ ಮಸ್ಕಿ ತಾಲ್ಲೂಕಿನ ಮಲ್ಲದಗುಡ್ಡ ಸರ್ಕಾರಿ ಶಾಲಾ ಆವರಣದಲ್ಲಿ ಈ ಘಟನೆ ನಡೆದಿದೆ. ಲಿಂಗಸೂಗುರು ತಾಲ್ಲೂಕಿನ ಅನ್ವರಿ ಗ್ರಾಮದ ಗಂಗಣ್ಣ(14) ಆತ್ಮಹತ್ಯೆ ಮಾಡಿಕೊಂಡದ್ದಾನೆ. ಬಾಲಕ ಮಾನ್ವಿ ಪಟ್ಟಣದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ. ಈತನು ಮಲ್ಲದಗುಡ್ಡ ಗ್ರಾಮದಲ್ಲಿನ ಸಂಬಂಧಿಕರ ಮನೆಯಲ್ಲಿ ವಾಸವಿದ್ದ, ಅಲ್ಲಿಂದಲ್ಲೇ ಶಾಲೆಗೆ ಹೋಗುತ್ತಿದ್ದ. ಬೆಳಿಗ್ಗೆ ಶಾಲೆಗೆ ಹೋಗುವುದಾಗಿ ಹೇಳಿ ಮನೆಯಿಂದ ಹೋಗಿದ್ದ ವಿದ್ಯಾರ್ಥಿ, ನಂತರ ಸರ್ಕಾರಿ ಶಾಲೆಯ ಮೈದಾನದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದೀಗ ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ, ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇಬ್ಬರು ಸರಗಳ್ಳರನ್ನು ಬಂಧಿಸಿದ ಪೊಲೀಸರು
ಬೀದರ್: ಇಬ್ಬರು ಸರಗಳ್ಳರನ್ನು ಗಾಂಧಿಗಂಜ್ ಠಾಣೆ ಪೊಲೀಸರು ಬಂಧಿಸಿದ್ದಾರೆ. 5 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರ ವಶಕ್ಕೆ ಪಡೆದಿದ್ದರೆ ಪೊಲೀಸರು, 5 ಕಡೆ ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಇಂದು ಬಂಧಿಸಿಲಾಗಿದೆ. ಇವರು ಈ ಹಿಂದೆಯೂ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
Published On - 5:46 pm, Mon, 11 July 22