ರಾಯಚೂರು: ಅಡುಗೆ ಮಾಡದೆ ಹಾಸ್ಟೆಲ್ ಸಿಬ್ಬಂದಿ ನಾಪ್ಪತ್ತೆ, ಊಟ ರೆಡಿ ಮಾಡಿ ಬಡಿಸಿದ ಪೊಲೀಸ್ ಇನ್​ಸ್ಪೆಕ್ಟರ್

ವಾರ್ಡನ್, ಅಡುಗೆ ಸಿಬ್ಬಂದಿ ನಿರ್ಲಕ್ಷಕ್ಕೆ ಹಾಸ್ಟೆಲ್ ಹುಡುಗರು ಊಟ ಇಲ್ಲದೆ ಪರದಾಟ ನಡೆಸಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಪಟ್ಟಣದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಸಂಜೆಯಿಂದ ತಡರಾತ್ರಿ ವರೆಗೂ ಅಡುಗೆ ಮಾಡದೇ ಸಿಬ್ಬಂದಿ ಹಾಸ್ಟೆಲ್ ಬಿಟ್ಟಿದ್ದಾರೆ. ಹೊಟ್ಟೆ ಹಸಿದು ವಾರ್ಡನ್​ಗೆ ಕರೆ ಮಾಡಿದರೆ ಸೂಕ್ತ ಪ್ರತಿಕ್ರಿಯೆ ನೀಡಿಲ್ಲ ಎಂದು ಆರೋಪಿಸಲಾಗಿದೆ.

ರಾಯಚೂರು: ಅಡುಗೆ ಮಾಡದೆ ಹಾಸ್ಟೆಲ್ ಸಿಬ್ಬಂದಿ ನಾಪ್ಪತ್ತೆ, ಊಟ ರೆಡಿ ಮಾಡಿ ಬಡಿಸಿದ ಪೊಲೀಸ್ ಇನ್​ಸ್ಪೆಕ್ಟರ್
ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಅಡುಗೆ ಮಾಡಿ ಊಟ ಬಡಿಸಿದ ಪೊಲೀಸ್ ಇನ್​ಸ್ಪೆಕ್ಟರ್ ಹೊಸ್ಕೇರಪ್ಪ ಮತ್ತು ಸಿಬ್ಬಂದಿ
Follow us
ಭೀಮೇಶ್​​ ಪೂಜಾರ್
| Updated By: Rakesh Nayak Manchi

Updated on: Nov 23, 2023 | 11:48 AM

ರಾಯಚೂರು, ನ.23: ವಾರ್ಡನ್, ಅಡುಗೆ ಸಿಬ್ಬಂದಿ ನಿರ್ಲಕ್ಷಕ್ಕೆ ಹಾಸ್ಟೆಲ್ ಹುಡುಗರು ಊಟ ಇಲ್ಲದೆ ಪರದಾಟ ನಡೆಸಿದ ಘಟನೆ ರಾಯಚೂರು (Raichur) ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಪಟ್ಟಣದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಸಂಜೆಯಿಂದ ತಡರಾತ್ರಿ ವರೆಗೂ ಅಡುಗೆ ಮಾಡದೇ ಸಿಬ್ಬಂದಿ ಹಾಸ್ಟೆಲ್ ಬಿಟ್ಟಿದ್ದಾರೆ. ಹೊಟ್ಟೆ ಹಸಿದು ವಾರ್ಡನ್​ಗೆ ಕರೆ ಮಾಡಿದರೆ ಸೂಕ್ತ ಪ್ರತಿಕ್ರಿಯೆ ನೀಡಿಲ್ಲ ಎಂದು ಆರೋಪಿಸಲಾಗಿದೆ.

ಹಟ್ಟಿ ಪಟ್ಟಣದಲ್ಲಿರೊ ಡಾ.ಬಿಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಹಾಸ್ಟೆಲ್​​ನಲ್ಲಿ ತಡ ರಾತ್ರಿವರೆಗೂ ಅಡುಗೆ ಮಾಡದೇ ವಾರ್ಡನ್ ಪ್ರಕಾಶ್ ಹಾಗೂ ಅಡುಗೆ ಸಿಬ್ಬಂದಿ ನಾಪತ್ತೆಯಾಗಿದ್ದರು. ಹೊಟ್ಟೆ ಹಸಿವು ತಾಳಲಾಗದೆ ವಿದ್ಯಾರ್ಥಿಗಳು ವಾರ್ಡನ್ ಪ್ರಕಾಶ್ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿದರೆ ಅವರ ಕೂಡ ಸೂಕ್ತ ಪ್ರತಿಕ್ರಿಯೆ ನೀಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ರಾಯಚೂರಿನ ಆರ್​ಟಿಪಿಎಸ್ ಕಲ್ಲಿದ್ದಲು ಅಕ್ರಮ ಸಾಗಾಟ: ಟಿವಿ9 ತಂಡ ಬರ್ತಿದ್ದಂತೆ ದಂಧೆಕೋರರು ಎಸ್ಕೇಪ್

ಕೊನೆಗೆ ಹಟ್ಟಿ ಪೊಲೀಸರಿಗೆ ವಿದ್ಯಾರ್ಥಿಗಳು ದೂರು ನೀಡಿದ್ದಾರೆ. ಆಗಲೂ ಪೊಲೀಸರಿಗೆ ಸಿಬ್ಬಂದಿ ಸಮರ್ಪಕ ಉತ್ತರ ನೀಡಿಲ್ಲ. ಕೊನೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಇನ್​ಸ್ಪೆಕ್ಟರ್ ಹೊಸ್ಕೇರಪ್ಪ ಅವರು, ತಾವೇ ಅಡುಗೆ ಮಾಡಿ ವಿದ್ಯಾರ್ಥಿಗಳಿಗೆ ಊಟ ಬಡಿಸಿದ್ದಾರೆ. ಪೊಲೀಸರ ಮಾನವೀಯತೆಗೆ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದು, ನಿರ್ಲಕ್ಷ್ಯ ತೋರಿದ ವಾರ್ಡನ್ ಹಾಗೂ ಅಡುಗೆ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ