ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ; ನದಿ ಪಾತ್ರಕ್ಕೆ ತೆರಳದಂತೆ ಡಂಗೂರ ಸಾರಿ ಜನರಿಗೆ ಎಚ್ಚರಿಕೆ

| Updated By: sandhya thejappa

Updated on: Nov 21, 2021 | 8:51 AM

ಈಗಾಗಲೇ ತುಂಗಭದ್ರಾ ಡ್ಯಾಂನಿಂದ 1 ಲಕ್ಷದ 10 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡಲಾಗಿದ್ದು, ಇನ್ನಷ್ಟು ಪ್ರಮಾಣದ ನೀರು ನದಿಗೆ ಬಿಟ್ಟರೆ ಅಪಾಯವಾಗುವ ಸಾಧ್ಯತೆ ಹೆಚ್ಚಿದೆ.

ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ; ನದಿ ಪಾತ್ರಕ್ಕೆ ತೆರಳದಂತೆ ಡಂಗೂರ ಸಾರಿ ಜನರಿಗೆ ಎಚ್ಚರಿಕೆ
ತುಂಗಭದ್ರಾ ನದಿ
Follow us on

ರಾಯಚೂರು: ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಜಿಲ್ಲೆಯ ನದಿ ಪಾತ್ರದ ಜನರಲ್ಲಿ ನೆರೆ ಭೀತಿ ಶುರುವಾಗಿದೆ. ಮಾನ್ವಿ, ಸಿಂಧನೂರು, ರಾಯಚೂರು ತಾಲೂಕಿನ ಗ್ರಾಮ ಹತ್ತಾರು ಗ್ರಾಮಗಳ ಜನರಿಗೆ ಪ್ರವಾಹ ಭೀತಿ ಶುರುವಾಗಿದೆ. ನದಿ ಪಾತ್ರಕ್ಕೆ ತೆರಳದಂತೆ ಡಂಗೂರ ಸಾರಿ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಈಗಾಗಲೇ ತುಂಗಭದ್ರಾ ಡ್ಯಾಂನಿಂದ 1 ಲಕ್ಷದ 10 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡಲಾಗಿದ್ದು, ಇನ್ನಷ್ಟು ಪ್ರಮಾಣದ ನೀರು ನದಿಗೆ ಬಿಟ್ಟರೆ ಅಪಾಯವಾಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ರಾಯಚೂರು ಜಿಲ್ಲಾಡಳಿತ ಮುಂಜಾಗ್ರತೆ ವಹಿಸಿದೆ. ಪ್ರವಾಹದ ಭೀತಿ ಇರುವ ಗ್ರಾಮಗಳಲ್ಲಿ ಮೈಕ್ ಅನೌನ್ಸ್ ಮೂಲಕ ನದಿ ಪಾತ್ರಕ್ಕೆ ತೆರಳದಂತೆ ಜಾಗೃತಿ ಮೂಡಿಸಲಾಗುತ್ತಿದೆ.

ಸುರಿಯುತ್ತಿರುವ ಭಾರೀ ಮಳೆಗೆ ಹಳ್ಳಕೊಳ್ಳಗಳು ಹರಿಯುತ್ತಿವೆ. ಹಳ್ಳ ತುಂಬಿ ಹರಿಯುತ್ತಿರುವುದರಿಂದ ಮಸ್ಕಿ ತಾಲೂಕಿನ ಚಿಲ್ಕರಾಗಿ-ಆನಂದಗಲ್ ಸಂಪರ್ಕ ಕಡಿತವಾಗಿದೆ. ತುಂಬಿ ಹರಿಯುತ್ತಿರುವ ಹಳ್ಳದಲ್ಲೇ ಜನರು ಸಂಚಾರ ಮಾಡುತ್ತಿದ್ದಾರೆ. ಅಪಾಯವಿದ್ದರೂ ಲೆಕ್ಕಿಸದೇ ಬೈಕ್ ಸವಾರರು ಹಳ್ಳ ದಾಟುತ್ತಿದ್ದಾರೆ.

1 ಲಕ್ಷ ಕ್ಯೂಸೆಕ್ ನೀರು ರಿಲೀಸ್
ತುಂಗಭದ್ರಾ ಡ್ಯಾಂನಿಂದ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ ಹಿನ್ನೆಲೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಬಳಿಯ ಗಂಗಾವತಿ-ಕಂಪ್ಲಿ ಸೇತುವೆ ಮುಳುಗಡೆಯಾಗಿದೆ. ಸೇತುವೆಯ ಮೇಲೆ ಸಂಚಾರ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.

ವಿವಿಧೆಡೆ ಜಮೀನು ಜಲಾವೃತ
ಚಿತ್ರದುರ್ಗದಲ್ಲಿ ಮಳೆ ಅವಾಂತರ ಮುಂದುವರೆದಿದೆ. ಮೊಳಕಾಲ್ಮೂರು ತಾಲೂಕಿನ ವಿವಿಧೆಡೆ ಜಮೀನು ಜಲಾವೃತವಾಗಿದ್ದು, ಹಾನಗಲ್​ನಲ್ಲಿ ಅಪಾರ ಪ್ರಮಾಣದ ಶೇಂಗಾ ಬೆಳೆ ಹಾನಿಯಾಗಿದೆ. ಹೊಸೂರು ಗ್ರಾಮದಲ್ಲಿ ಮೆಣಸಿನಕಾಯಿ ಬೆಳೆ ನೀರುಪಾಲಾಗಿದೆ. ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡುವಂತೆ ರೈತರು ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ

ಹಾಸನ: ಮಿತಿ ಮೀರಿದ ಕಾಡಾನೆ ಹಾವಳಿ; ಬಯಲಿನಲ್ಲಿ ದನಕರುಗಳು ಅಡ್ಡಾಡುವಂತೆ ಪ್ರತ್ಯಕ್ಷವಾದ 35 ಆನೆಗಳು

ಜಮ್ಮು- ಕಾಶ್ಮೀರ: ​ಎನ್​​ಕೌಂಟರ್​​ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್​ ಕಮಾಂಡರ್​ನನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

Published On - 8:48 am, Sun, 21 November 21