ಲಿಂಗಸಗೂರು: ಮಠಕ್ಕೆ ನುಗ್ಗಿ ಶ್ರೀಗಳಿಗೆ ಬೆದರಿಕೆ ಹಾಕಿ ದರೋಡೆ

| Updated By: ವಿವೇಕ ಬಿರಾದಾರ

Updated on: Jul 05, 2024 | 11:15 AM

ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿರುವ ಶ್ರೀ ವಿಜಯ ಮಹಾಂತೇಶ್ವರ ಶಾಖಾ ಮಠಕ್ಕೆ ಗುರುವಾರ ರಾತ್ರಿ ಅಪರಿಚಿತರು ನುಗ್ಗಿ ಸಿದ್ದಲಿಂಗ ಸ್ವಾಮೀಜಿಯವರಿಗೆ ಬೆದರಿಕೆ ಹಾಕಿದ್ದಾರೆ. ಬಳಿಕ ಮಠದಲ್ಲಿದ್ದ ಬಂಗಾರ, ಬೆಳ್ಳಿ ಮತ್ತು ಹಣವನ್ನು ದೋಚಿ ಪರಾರಿಯಾಗಿದ್ದಾರೆ.

ಲಿಂಗಸಗೂರು: ಮಠಕ್ಕೆ ನುಗ್ಗಿ ಶ್ರೀಗಳಿಗೆ ಬೆದರಿಕೆ ಹಾಕಿ ದರೋಡೆ
ಮಠದಲ್ಲಿ ಪೊಲೀಸರ ಪರಿಶೀಲನೆ
Follow us on

ರಾಯಚೂರು, ಜುಲೈ 05: ಲಿಂಗಸುಗೂರು (Lingsugur) ಪಟ್ಟಣದ ಶ್ರೀ ವಿಜಯ ಮಹಾಂತೇಶ್ವರ ಶಾಖಾ ಮಠದ ಪೀಠಾದಿಪತಿಗಳನ್ನು ಹೆದರಿಸಿ, ದರೋಡೆ ಮಾಡಲಾಗಿದೆ. ಗುರುವಾರ ಮಧ್ಯರಾತ್ರಿ ಡಕಾಯಿತಿರ ಗ್ಯಾಂಗ್ ಭಕ್ತರ ಸೋಗಿನಲ್ಲಿ ಮಠಕ್ಕೆ ಬಂದಿದೆ. ಮಠದಲ್ಲಿದ್ದ ಓಬ್ಬರೇ ಇದ್ದ ಸಿದ್ದಲಿಂಗ ಸ್ವಾಮೀಜಿಯವರನ್ನು ದುಷ್ಕರ್ಮಿಗಳು ಎಬ್ಬಸಿದ್ದಾರೆ. ಬಳಿಕ ಸಿದ್ದಲಿಂಗ ಸ್ವಾಮೀಜಿಯವರಿಗೆ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ.

ನಂತರ ಮಠದಲ್ಲಿದ್ದ ಸುಮಾರು 80 ಗ್ರಾಂ ತೂಕದ ಚಿನ್ನ ಹಾಗೂ 7 ಕೆಜಿ ಬೆಳ್ಳಿ ಆಭರಣಗಳು, ಸುಮಾರು‌ 20 ಲಕ್ಷ ನಗದು ಸೇರಿ‌ದಂತೆ 35 ಲಕ್ಷ ಮೌಲ್ಯದ ಬೆಲೆ ಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ಸಿದ್ಧಲಿಂಗ ಸ್ವಾಮೀಜಿ ಪೊಲೀಸರಿಗೆ ದೂರು ನೀಡಿದ್ದಾರೆ.

ಪೊಲೀಸ್​ ಇನ್ಸ್​​ಸ್ಪೆಕ್ಟರ್​​ ಪುಂಡಲಿಕ್​ ಪಟತ್ತರ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಹೆಚ್ಚುವರಿ ಪೊಲೀಸ್​ ವರಿಷ್ಠಾಧಿಕಾರಿ ಹರೀಶಬಾಬು, ಡಿವೈಎಸ್​ಪಿ ದತ್ತಾತ್ರೇಯ ಕಾರ್ನಾಡ್​​ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದಿ: ಸೆಕ್ಯೂರಿಟಿ ಗಾರ್ಡ್​​ನನ್ನೇ ಬರ್ಬರವಾಗಿ ಹತ್ಯೆಗೈದ ಕಾಲೇಜು ವಿದ್ಯಾರ್ಥಿ

ಶ್ರೀಗಂಧದ ಮರ ಬೆಳದ ರೈತರಿಗೆ ಕಳ್ಳರ ಕಾಟ

ಕೊಪ್ಪಳ: ಲಕ್ಷಾಂತರ ಬೆಲೆ ಬಾಳುವ ಶ್ರೀಗಂಧದ ಮರಗಳ ಕಳ್ಳತನ ಮಾಡಿರುವ ಘಟನೆ ಕುಷ್ಟಗಿ ತಾಲೂಕಿನ ನಡವಲಕೊಪ್ಪ ಗ್ರಾಮದಲ್ಲಿ ನಡೆದಿದೆ. ನಿವೃತ್ತ ಉಪನ್ಯಾಸಕ ಶಿವಸಂಗನಗೌಡ ಶಿವನಗುತ್ತಿ ಎಂಬುವರು ತಮ್ಮ
ಜಮೀನಿನಲ್ಲಿ 371 ಶ್ರೀಗಂಧದ ಮರಗಳನ್ನು ಬಳೆದಿದ್ದಾರೆ. ಇವುಗಳಲ್ಲಿ ಸುಮಾರು 10 ಲಕ್ಷ ರೂ.ನಷ್ಟು ಬೆಲೆಬಾಳುವ  13 ಮರಗಳನ್ನು ಖದೀಮರು ಕಳೆದ ರಾತ್ರಿ ಕತ್ತರಿಸಿಕೊಂಡು ಹೋಗಿದ್ದಾರೆ. ಕುಷ್ಟಗಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗು ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:05 am, Fri, 5 July 24